AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ಭದ್ರತಾ ಲೋಪ: ಪೊಲೀಸ್ ಮೇಲೆಯೇ ಹಲ್ಲೆ ನಡೆಸಿ ವಿಚಾರಣಾಧೀನ ಆರೋಪಿ ಪರಾರಿ

ಯಾಲಯದಲ್ಲಿ ಆರೋಪಿಯೊಬ್ಬ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಕೊಲೆ ಯತ್ನದ ಪ್ರಕರಣದ ವಿಚಾರಣಾಧೀನ ಆರೋಪಿ ಹ್ಯಾರಿಸನ್ ಆಂಥೋನಿ ಜೋಸೆಫ್,ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿ ಕೈಕೋಳ ಸಮೇತ ಪರಾರಿಯಾಗಿದ್ದು, ಪೊಲೀಸರು ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. 42 ವರ್ಷದ ಹ್ಯಾರಿಸನ್ ಆಂಥೋನಿ ಜೋಸೆಫ್ ವಿರುದ್ಧ MCOCA ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆತ ಮಾರ್ಚ್ 2024ರಲ್ಲಿ ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿದ ಆರೋಪ ಎದುರಿಸುತ್ತಿದ್ದಾನೆ.

ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ಭದ್ರತಾ ಲೋಪ: ಪೊಲೀಸ್ ಮೇಲೆಯೇ ಹಲ್ಲೆ ನಡೆಸಿ ವಿಚಾರಣಾಧೀನ ಆರೋಪಿ ಪರಾರಿ
ಸಾಂದರ್ಭಿಕ ಚಿತ್ರ Image Credit source: Google Gemini
ನಯನಾ ರಾಜೀವ್
|

Updated on: Apr 09, 2026 | 7:47 AM

Share

ಮುಂಬೈ, ಏಪ್ರಿಲ್ 09: ನ್ಯಾಯಾಲಯದಲ್ಲಿ ಆರೋಪಿಯೊಬ್ಬ ಪೊಲೀಸ್(Police) ಅಧಿಕಾರಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಕೊಲೆ ಯತ್ನದ ಪ್ರಕರಣದ ವಿಚಾರಣಾಧೀನ ಆರೋಪಿ ಹ್ಯಾರಿಸನ್ ಆಂಥೋನಿ ಜೋಸೆಫ್,ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿ ಕೈಕೋಳ ಸಮೇತ ಪರಾರಿಯಾಗಿದ್ದು, ಪೊಲೀಸರು ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

42 ವರ್ಷದ ಹ್ಯಾರಿಸನ್ ಆಂಥೋನಿ ಜೋಸೆಫ್ ವಿರುದ್ಧ MCOCA ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆತ ಮಾರ್ಚ್ 2024ರಲ್ಲಿ ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿದ ಆರೋಪ ಎದುರಿಸುತ್ತಿದ್ದಾನೆ. ಆರ್ಥರ್ ರಸ್ತೆ ಜೈಲಿನಿಂದ ವಿಚಾರಣೆಗೆ ಕರೆತಂದಿದ್ದಾಗ, ಪೊಲೀಸ್ ಕಾನ್ಸ್‌ಟೇಬಲ್ ಪ್ರಶಾಂತ್ ಕಾಂಬ್ಳೆ ಅವರ ಮೇಲೆ ದಾಳಿ ನಡೆಸಿ ನ್ಯಾಯಾಲಯದ ಆವರಣದಿಂದಲೇ ತಪ್ಪಿಸಿಕೊಂಡಿದ್ದಾನೆ.ಕೊಲಾಬಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದ್ದು, ರೈಲ್ವೆ ನಿಲ್ದಾಣಗಳು ಸೇರಿದಂತೆ ಪ್ರಮುಖ ಸಾರಿಗೆ ಕೇಂದ್ರಗಳಲ್ಲಿ ಪೊಲೀಸರ ವಿಶೇಷ ತಂಡಗಳು ಹದ್ದಿನ ಕಣ್ಣಿಟ್ಟಿವೆ.

ಕೇರಳದ ಜೋಸೆಫ್ ಪರಾರಿಯಾಗಿರುವುದರಿಂದ, ಅಧಿಕಾರಿಗಳು ರೈಲ್ವೆ ಟರ್ಮಿನಲ್‌ಗಳು ಮತ್ತು ಇತರ ಸಾರಿಗೆ ಕೇಂದ್ರಗಳು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಅನೇಕ ತಂಡಗಳನ್ನು ನಿಯೋಜಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: ತಂದೆ-ಮಗನ ಲಾಕಪ್ ಡೆತ್ ಪ್ರಕರಣ; ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ

2024 ರಲ್ಲಿ ನಡೆದ ಸಣ್ಣ ವಿವಾದಕ್ಕೆ ಸಂಬಂಧಿಸಿದಂತೆ ಜೋಸೆಫ್ ಮತ್ತು ಅವರ ಸಹಚರರು ಬ್ಯಾಗ್ ಮಾರಾಟಗಾರ ರಾಜು ಶೇಖ್ ಅವರ ಮೇಲೆ ಏರ್ ಗನ್‌ನಿಂದ ಹಲ್ಲೆ ನಡೆಸಿದ್ದ ಎನ್ನುವ ಆರೋಪವಿದೆ. ನ್ಯಾಯಾಲಯದ ಕಟಕಟೆಗೆ ಕರೆದೊಯ್ಯುತ್ತಿದ್ದಾಗ ಘಟನೆ ನಡೆದಿದೆ. ಮಾರ್ಚ್ 2024 ರಲ್ಲಿ ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿದ್ದ ಮತ್ತು ಆತನನ್ನು ಜನವರಿ 2025 ರಲ್ಲಿ ಬಂಧಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ