Rahul Gandhi: ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತಾ ವೈಫಲ್ಯ; ಓಡಿಬಂದು ರಾಹುಲ್ ಗಾಂಧಿಯನ್ನು ತಬ್ಬಿಕೊಂಡ ಯುವಕ

| Updated By: ಸುಷ್ಮಾ ಚಕ್ರೆ

Updated on: Jan 17, 2023 | 11:58 AM

Bharat Jodo Yatra: ಭದ್ರತಾ ಉಲ್ಲಂಘನೆ ಮಾಡಿದ ವ್ಯಕ್ತಿಯೊಬ್ಬ ರಾಹುಲ್ ಗಾಂಧಿಯತ್ತ ಓಡಿ ಹೋಗಿ ಅವರನ್ನು ತಬ್ಬಿಕೊಂಡಿದ್ದಾನೆ. ಆ ವ್ಯಕ್ತಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯ ಸುತ್ತಲಿನ ಭದ್ರತೆಯನ್ನು ಮುರಿದು ಗಂಭೀರ ಭದ್ರತಾ ಉಲ್ಲಂಘನೆ ಎಸಗಿದ್ದಾನೆ.

Rahul Gandhi: ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತಾ ವೈಫಲ್ಯ; ಓಡಿಬಂದು ರಾಹುಲ್ ಗಾಂಧಿಯನ್ನು ತಬ್ಬಿಕೊಂಡ ಯುವಕ
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ
Follow us on

ನವದೆಹಲಿ: ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ಪಾಲ್ಗೊಂಡಿದ್ದ ರಾಹುಲ್ ಗಾಂಧಿಯವರನ್ನು (Rahul Gandhi) ಯುವಕನೊಬ್ಬ ಓಡಿಬಂದು ತಬ್ಬಿಕೊಂಡಿರುವ ಘಟನೆ ನಡೆದಿದೆ. ಭದ್ರತಾ ಉಲ್ಲಂಘನೆ ಮಾಡಿದ ವ್ಯಕ್ತಿಯೊಬ್ಬ ರಾಹುಲ್ ಗಾಂಧಿಯತ್ತ ಓಡಿ ಹೋಗಿ ಅವರನ್ನು ತಬ್ಬಿಕೊಂಡಿದ್ದಾನೆ. ಆ ವ್ಯಕ್ತಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯ ಸುತ್ತಲಿನ ಭದ್ರತೆಯನ್ನು ಮುರಿದು ಗಂಭೀರ ಭದ್ರತಾ ಉಲ್ಲಂಘನೆ ಎಸಗಿದ್ದಾನೆ. ತಕ್ಷಣ ಆ ವ್ಯಕ್ತಿಯನ್ನು ಭದ್ರತಾ ಅಧಿಕಾರಿಗಳು ದೂರ ತಳ್ಳಿದ್ದಾರೆ.

ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭದ್ರತಾ ಉಲ್ಲಂಘನೆಯ ಬಗ್ಗೆ ಕಾಂಗ್ರೆಸ್ ದೂರು ನೀಡಿದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ‘ಭಾರತ್ ಜೋಡೋ ಯಾತ್ರೆ’ಯ ಸಂದರ್ಭದಲ್ಲಿ ಭದ್ರತಾ ಉಲ್ಲಂಘನೆ ಎಂದು ಆರೋಪಿಸಿ ಕಾಂಗ್ರೆಸ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿತ್ತು. ಈ ಯಾತ್ರೆಯಲ್ಲಿ ಭಾಗವಹಿಸುವ ರಾಹುಲ್ ಗಾಂಧಿ ಮತ್ತು ಇತರರಿಗೆ ಭದ್ರತೆಯನ್ನು ಒದಗಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿತ್ತು.

ಇದನ್ನೂ ಓದಿ: ಭಾರತ್ ಜೋಡೋ ವೇದಿಕೆ ಮೇಲೆ ತಂಗಿ ಪ್ರಿಯಾಂಕಾ ಗಾಂಧಿಗೆ ಮುತ್ತಿಟ್ಟ ರಾಹುಲ್ ಗಾಂಧಿ; ಅಣ್ಣ-ತಂಗಿಯ ಪ್ರೀತಿಗೆ ನೆಟ್ಟಿಗರು ಫಿದಾ

ಕಾಂಗ್ರೆಸ್ ಪಕ್ಷದ ಭದ್ರತಾ ಉಲ್ಲಂಘನೆಯ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭದ್ರತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿತ್ತು. ರಾಹುಲ್ ಗಾಂಧಿಯವರ ಕಡೆಯಿಂದ ನಿಗದಿಪಡಿಸಿದ ಮಾರ್ಗಸೂಚಿಗಳ ಉಲ್ಲಂಘನೆಯನ್ನು ಹಲವಾರು ಸಂದರ್ಭಗಳಲ್ಲಿ ಗಮನಿಸಲಾಗಿದೆ. ಈ ಸಂಗತಿಯನ್ನು ಕಾಲಕಾಲಕ್ಕೆ ಅವರಿಗೆ ತಿಳಿಸಲಾಗಿದೆ ಎಂದು ಸಿಆರ್‌ಪಿಎಫ್ ಹೇಳಿಕೆಯಲ್ಲಿ ತಿಳಿಸಿತ್ತು.

ರಾಹುಲ್ ಗಾಂಧಿಗೆ ಎಲ್ಲ ರೀತಿಯ ಭದ್ರತೆಯನ್ನು ಒದಗಿಸಲಾಗಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ 2020ರಿಂದ 113 ಬಾರಿ ಭದ್ರತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ. ಈ ವಿಷಯವನ್ನು ಅವರಿಗೆ ತಿಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ