AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಉಗ್ರನನ್ನು ಸದೆಬಡಿದ ಭದ್ರತಾ ಪಡೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಕಾಶ್ಮೀರಿ ಪಂಡಿತನ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಇಂದು ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಉಗ್ರನನ್ನು ಸದೆಬಡಿದ ಭದ್ರತಾ ಪಡೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Feb 28, 2023 | 11:51 AM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪುಲ್ವಾಮಾದಲ್ಲಿ ಕಾಶ್ಮೀರಿ ಪಂಡಿತನ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಇಂದು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಇಂದು ಗುಂಡಿಕ್ಕಿ ಹತ್ಯೆಯಾದ ಭಯೋತ್ಪಾದಕ ಅಕಿಬ್ ಮುಷ್ತಾಕ್ ಭಟ್, ಕಳೆದ ಭಾನುವಾರ ನಡೆದ ಕಾಶ್ಮೀರಿ ಪಂಡಿತ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಾಗಿಯಾಗಿದ್ದ. ಹತ್ಯೆಗೀಡಾದ ಭಯೋತ್ಪಾದಕನನ್ನು ಪುಲ್ವಾಮಾ (ಎ ಕೆಟಗರಿ) ಎಂದು ಗುರುತಿಸಲಾಗಿದೆ. ಈತ ಆರಂಭದಲ್ಲಿ ಎಚ್‌ಎಂ ಭಯೋತ್ಪಾದಕ ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದ, ಈಗ ಟಿಆರ್‌ಎಫ್‌ನೊಂದಿಗೆ ಕೆಲಸ ಮಾಡುತ್ತಿದ್ದಾನೆ. ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿರುವ ಸಂಜಯ್ ಶರ್ಮಾ ಅವರನ್ನು ಅಕಿಬ್ ಮುಷ್ತಾಕ್ ಭಟ್ ಹತ್ಯೆಗೈದವನು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಯೋತ್ಪಾದನೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ. ಹಿಜ್ಬುಲ್ ಮುಜಾಹಿದ್ದೀನ್ ಮತ್ತು ದಿ ರೆಸಿಸ್ಟೆನ್ಸ್ ಫ್ರಂಟ್ ಗುಂಪುಗಳಲ್ಲಿ ಅಕಿಬ್ ಮುಷ್ತಾಕ್ ಭಟ್ ಕಾರ್ಯನುರ್ವಹಿಸುತ್ತಿದ್ದ ಎಂದು ಹೇಳಲಾಗಿದೆ.

ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಲ್ಲಿ ಇಬ್ಬರು ಭಯೋತ್ಪಾದಕರು ಅಡಗಿರುವ ಬಗ್ಗೆ ಭದ್ರತಾ ಪಡೆಗಳು ಮಾಹಿತಿ ಪಡೆದ ನಂತರ ಇಂದು ಮುಂಜಾನೆ 1:30 ಕ್ಕೆ ಎನ್‌ಕೌಂಟರ್ ಪ್ರಾರಂಭವಾಯಿತು.

ಇದನ್ನೂ ಓದಿ: Jammu and Kashmir ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ, ಹಲವರಿಗೆ ಗಾಯ

ಸಂಜಯ್ ಶರ್ಮಾ ಅವರು ಕಳೆದ ಭಾನುವಾರ ಮಾರುಕಟ್ಟೆಗೆ ಹೋಗುತ್ತಿದ್ದಾಗ ಭಯೋತ್ಪಾದಕರು ಗುಂಡು ಹಾರಿಸಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದುವಾಗ ಅಲ್ಲಿ ಮೃತಪಟ್ಟಿದ್ದಾರೆ. ಈತ ಬ್ಯಾಂಕ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್