ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪುಲ್ವಾಮಾದಲ್ಲಿ ಕಾಶ್ಮೀರಿ ಪಂಡಿತನ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಇಂದು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಇಂದು ಗುಂಡಿಕ್ಕಿ ಹತ್ಯೆಯಾದ ಭಯೋತ್ಪಾದಕ ಅಕಿಬ್ ಮುಷ್ತಾಕ್ ಭಟ್, ಕಳೆದ ಭಾನುವಾರ ನಡೆದ ಕಾಶ್ಮೀರಿ ಪಂಡಿತ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಾಗಿಯಾಗಿದ್ದ. ಹತ್ಯೆಗೀಡಾದ ಭಯೋತ್ಪಾದಕನನ್ನು ಪುಲ್ವಾಮಾ (ಎ ಕೆಟಗರಿ) ಎಂದು ಗುರುತಿಸಲಾಗಿದೆ. ಈತ ಆರಂಭದಲ್ಲಿ ಎಚ್‌ಎಂ ಭಯೋತ್ಪಾದಕ ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದ, ಈಗ ಟಿಆರ್‌ಎಫ್‌ನೊಂದಿಗೆ ಕೆಲಸ ಮಾಡುತ್ತಿದ್ದಾನೆ. ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿರುವ ಸಂಜಯ್ ಶರ್ಮಾ ಅವರನ್ನು ಅಕಿಬ್ ಮುಷ್ತಾಕ್ ಭಟ್ ಹತ್ಯೆಗೈದವನು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಯೋತ್ಪಾದನೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ. ಹಿಜ್ಬುಲ್ ಮುಜಾಹಿದ್ದೀನ್ ಮತ್ತು ದಿ ರೆಸಿಸ್ಟೆನ್ಸ್ ಫ್ರಂಟ್ ಗುಂಪುಗಳಲ್ಲಿ ಅಕಿಬ್ ಮುಷ್ತಾಕ್ ಭಟ್ ಕಾರ್ಯನುರ್ವಹಿಸುತ್ತಿದ್ದ ಎಂದು ಹೇಳಲಾಗಿದೆ.
ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಲ್ಲಿ ಇಬ್ಬರು ಭಯೋತ್ಪಾದಕರು ಅಡಗಿರುವ ಬಗ್ಗೆ ಭದ್ರತಾ ಪಡೆಗಳು ಮಾಹಿತಿ ಪಡೆದ ನಂತರ ಇಂದು ಮುಂಜಾನೆ 1:30 ಕ್ಕೆ ಎನ್‌ಕೌಂಟರ್ ಪ್ರಾರಂಭವಾಯಿತು.
ಇದನ್ನೂ ಓದಿ: Jammu and Kashmir ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ, ಹಲವರಿಗೆ ಗಾಯ
ಸಂಜಯ್ ಶರ್ಮಾ ಅವರು ಕಳೆದ ಭಾನುವಾರ ಮಾರುಕಟ್ಟೆಗೆ ಹೋಗುತ್ತಿದ್ದಾಗ ಭಯೋತ್ಪಾದಕರು ಗುಂಡು ಹಾರಿಸಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದುವಾಗ ಅಲ್ಲಿ ಮೃತಪಟ್ಟಿದ್ದಾರೆ. ಈತ ಬ್ಯಾಂಕ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.