ಜಮ್ಮು ಕಾಶ್ಮೀರದಲ್ಲಿ ನಡೆದ ಜಿ20 ಸಮ್ಮೇಳನಕ್ಕೆ ಮುನ್ನ ಉಗ್ರ ದಾಳಿಗೆ ಸಂಚು ನಡೆಸಿತ್ತು ಪಾಕ್

ಮುಂಬೈ ಮಾದರಿಯ ಭಯೋತ್ಪಾದಕ ದಾಳಿ ನಡೆಸುವ ಭಯೋತ್ಪಾದಕರ ಯೋಜನೆಯನ್ನು ವಿಫಲಗೊಳಿಸಿದ ಭದ್ರತಾ ಪಡೆಗಳು ಜಿ20 ಶೃಂಗಸಭೆಯನ್ನು ಯಶಸ್ವಿಗೊಳಿಸಿವೆ.

ಜಮ್ಮು ಕಾಶ್ಮೀರದಲ್ಲಿ ನಡೆದ ಜಿ20 ಸಮ್ಮೇಳನಕ್ಕೆ ಮುನ್ನ ಉಗ್ರ ದಾಳಿಗೆ ಸಂಚು ನಡೆಸಿತ್ತು ಪಾಕ್
ಜಿ20 ಶೃಂಗಸಭೆ
Follow us
ರಶ್ಮಿ ಕಲ್ಲಕಟ್ಟ
|

Updated on: May 25, 2023 | 3:30 PM

ಜಮ್ಮು ಮತ್ತು ಕಾಶ್ಮೀರದಲ್ಲಿ( Jammu and Kashmir) ನಡೆದ ಜಿ20 (G20 )ಸಮ್ಮೇಳನಕ್ಕೆ ವಿದೇಶಿ ಪ್ರತಿನಿಧಿಗಳು ತಂಗುವ ಹೋಟೆಲ್‌ಗಳು ಹಾಗೂ ಅವರು ಭೇಟಿ ನೀಡುವ ಸ್ಥಳಗಳ ಬಳಿ ಹೆಚ್ಚಿನ ಭದ್ರತೆ ನೀಡಲಾಗಿತ್ತು.ಜಿ 20 ಪ್ರವಾಸೋದ್ಯಮ ಸಮ್ಮೇಳನಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಸಂಚು (Terror Plot) ಬಯಲಾಗಿದ ಹಿನ್ನಲೆಯಲ್ಲಿ ಭದ್ರತೆ ಮತ್ತಷ್ಟು ಬಿಗಿಗೊಳಿಸಲಾಗಿತ್ತು. ಚೀನಾ ಮತ್ತು ಪಾಕಿಸ್ತಾನದ ಷಡ್ಯಂತ್ರವನ್ನು ಗ್ರಹಿಸಿದ ಗುಪ್ತಚರರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತಾ ಪಡೆಗಳನ್ನು ನಿಯೋಜಿಸಿದ್ದರು. ಎನ್​​ಎಸ್​ಜಿ  ಮತ್ತು ಮಾರ್ಕೋಸ್ನಂತಹ ಬಲಿಷ್ಠ ಭದ್ರತಾ ಪಡೆಗಳನ್ನು ಇಲ್ಲಿ ನಿಯೋಜಿಸಿದ್ದು ಶ್ರೀನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.

ಮುಂಬೈ ಮಾದರಿಯ ಭಯೋತ್ಪಾದಕ ದಾಳಿ ನಡೆಸುವ ಭಯೋತ್ಪಾದಕರ ಯೋಜನೆಯನ್ನು ವಿಫಲಗೊಳಿಸಿದ ಭದ್ರತಾ ಪಡೆಗಳು ಜಿ20 ಶೃಂಗಸಭೆಯನ್ನು ಯಶಸ್ವಿಗೊಳಿಸಿವೆ. ಪ್ರತಿ ಚಲನೆಯನ್ನು ಗ್ರಹಿಸಿದ NSG ಮತ್ತು ಮಾರ್ಕೋಸ್ (ಜಲ ಯುದ್ಧ ವೀರರು) ಪ್ರಸ್ತುತ ಪ್ರದೇಶದ ಮೇಲೆ ಹಿಡಿತ ಸಾಧಿಸಿದರು.

ಗುಲ್ಮಾರ್ಗ್‌ನಲ್ಲಿ ವಿದೇಶಿ ಪ್ರತಿನಿಧಿಗಳು ತಂಗಿದ್ದ ಹೋಟೆಲ್‌ ಮೇಲೆ ಉಗ್ರರು ದಾಳಿ ಸಂಚು ಹೂಡಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳಿಂದ ಮಾಹಿತಿ ಲಭಿಸಿದ ಕೂಡಲೇ ಜಿ20 ಪ್ರವಾಸೋದ್ಯಮ ಪ್ರತಿನಿಧಿಗಳು ತಂಗಿರುವ ಹೋಟೆಲ್‌ನ ಸ್ಥಳವನ್ನು ಬದಲಾಯಿಸಲಾಗಿದೆ.

ಇದನ್ನೂ ಓದಿG20 Meeting: ಶ್ರೀನಗರದಲ್ಲಿ ಜಿ20 ಸಭೆ, ಉಗ್ರರ ದಾಳಿಯ ಎಚ್ಚರಿಕೆ ಹಿನ್ನೆಲೆ ಗಡಿಯಲ್ಲಿ ಬಿಗಿ ಬಂದೋಬಸ್ತ್​

ಪಾಕಿಸ್ತಾನದಿಂದ ಭಯೋತ್ಪಾದನಾ ಸಂಚು

ಗುಲ್ಮಾರ್ಗ್‌ನಲ್ಲಿ ಮುಂಬೈ ಮಾದರಿಯ ದಾಳಿ ನಡೆಸಲು ಪಾಕಿಸ್ತಾನದ ಭಯೋತ್ಪಾದಕರು ಸಂಚು ರೂಪಿಸಿದ್ದರು. ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಮೇ 22- 24ರವರೆಗೆ ಶ್ರೀನಗರದಲ್ಲಿ ಜಿ20 ಶೃಂಗಸಭೆ ನಡೆದಿದೆ. ಸುಮಾರು 60 ದೇಶಗಳ ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ