ಪೂಂಚ್​ನಲ್ಲಿ ಉಗ್ರರ ಅಡಗುತಾಣ ಪತ್ತೆ, ಐದು ಐಇಡಿಗಳು ವಶಕ್ಕೆ

ಪೂಂಚ್​ನಲ್ಲಿ ಉಗ್ರರ ಅಡಗುತಾಣದಿಂದ ಐದು ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಹಲ್ಗಾಮ್​ನಲ್ಲಿ ಉಗ್ರರು ನಡೆಸಿದ ದಾಳಿ ಬಳಿಕ ಭಯೋತ್ಪಾದಕರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಪೂಂಚ್‌ನ ಸುರಂಕೋಟೆ ಅರಣ್ಯ ಪ್ರದೇಶದಲ್ಲಿ ಅಡಗುತಾಣವನ್ನು ಪತ್ತೆಹಚ್ಚಿದ್ದಾರೆ. ಮೂಲಗಳು ತಿಳಿಸಿರುವಂತೆ, ಟಿಫಿನ್ ಬಾಕ್ಸ್‌ಗಳಲ್ಲಿ ಮೂರು ಮತ್ತು ಸ್ಟೀಲ್ ಬಕೆಟ್‌ಗಳಲ್ಲಿ ಎರಡು ಐಇಡಿಗಳನ್ನು ಮರೆಮಾಡಲಾಗಿತ್ತು.

ಪೂಂಚ್​ನಲ್ಲಿ ಉಗ್ರರ ಅಡಗುತಾಣ ಪತ್ತೆ, ಐದು ಐಇಡಿಗಳು ವಶಕ್ಕೆ
ಐಇಡಿ

Updated on: May 05, 2025 | 10:40 AM

ಪೂಂಚ್, ಮೇ 05: ಜಮ್ಮು ಮತ್ತು ಕಾಶ್ಮೀರದ ಪೂಂಚ್​(Poonch)ನಲ್ಲಿ ಉಗ್ರರ ಅಡಗುತಾಣ ಪತ್ತೆಯಾಗಿದ್ದು, ಐದು ಐಇಡಿ(ಸುಧಾರಿತ ಸ್ಫೋಟಕ ಸಾಧನ)ಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿವೆ. ಪಹಲ್ಗಾಮ್​ನಲ್ಲಿ ಉಗ್ರರು ನಡೆಸಿದ ದಾಳಿ ಬಳಿಕ ಭಯೋತ್ಪಾದಕರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಪೂಂಚ್‌ನ ಸುರಂಕೋಟೆ ಅರಣ್ಯ ಪ್ರದೇಶದಲ್ಲಿ ಅಡಗುತಾಣವನ್ನು ಪತ್ತೆಹಚ್ಚಿದ್ದಾರೆ. ಮೂಲಗಳು ತಿಳಿಸಿರುವಂತೆ, ಟಿಫಿನ್ ಬಾಕ್ಸ್‌ಗಳಲ್ಲಿ ಮೂರು ಮತ್ತು ಸ್ಟೀಲ್ ಬಕೆಟ್‌ಗಳಲ್ಲಿ ಎರಡು ಐಇಡಿಗಳನ್ನು ಮರೆಮಾಡಲಾಗಿತ್ತು.

ಭದ್ರತಾ ಪಡೆಗಳು ಸ್ಥಳದಿಂದ ಸಂವಹನ ಸಾಧನಗಳು ಮತ್ತು ಇತರ ಅಪರಾಧ ಸಾಮಗ್ರಿಗಳನ್ನು ವಶಪಡಿಸಿಕೊಂಡವು. ಅಧಿಕಾರಿಗಳು ಕಣಿವೆಯಾದ್ಯಂತ ದೊಡ್ಡ ಪ್ರಮಾಣದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಪ್ರಾರಂಭಿಸಿದ್ದಾರೆ. ಶಂಕಿತ ಅಡಗುತಾಣಗಳ ಮೇಲೆ ದಾಳಿ ಮಾಡಿದ್ದಾರೆ, ಭಯೋತ್ಪಾದಕರು ಬಳಸುತ್ತಿದ್ದ ಆಶ್ರಯಗಳನ್ನು ಧ್ವಂಸ ಮಾಡಿದ್ದಾರೆ ಮತ್ತು ನೂರಾರು ಭಯೋತ್ಪಾದಕ ಸಹಚರರನ್ನು ವಿಚಾರಣೆಗಾಗಿ ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಾದ್ಯಂತ ಭದ್ರತಾ ಪಡೆಗಳು ಭಯೋತ್ಪಾದಕರ ಸಹಾಯಕರು ಮತ್ತು ಬೆಂಬಲಿಗರನ್ನು ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ಹಲವಾರು ಕಾರ್ಯಾಚರಣೆಗಳಲ್ಲಿ ಪೂಂಚ್‌ನ ಕಾರ್ಯಾಚರಣೆಯೂ ಸೇರಿದೆ.

ಇದನ್ನೂ ಓದಿ
ಬನ್ನೇರುಘಟ್ಟ ಜೂ, ಸಫಾರಿಗೆ ಆನ್​ಲೈನ್ ಮೂಲಕ ಟಿಕೆಟ್ ಬುಕ್ ಮಾಡುವಾಗ ಎಚ್ಚರ
‘ಭಾರತವನ್ನು ದ್ವೇಷಿಸುತ್ತೇನೆ’: ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ಸೌಲಭ್ಯ
ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಆನ್​ಲೈನ್ ವಂಚನೆ: ಎಚ್ಚರದಿಂದಿರಿ

ಮತ್ತಷ್ಟು ಓದಿ: ಭಾರತದೊಂದಿಗಿನ ಉದ್ವಿಗ್ನತೆ ಕಡಿಮೆ ಮಾಡಲು ರಷ್ಯಾದ ಮೊರೆ ಹೋದ ಪಾಕ್

ಏಪ್ರಿಲ್ 22 ರಂದು, ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಬೈಸರನ್‌ನಲ್ಲಿ ಭಯೋತ್ಪಾದಕರು ಗುಂಡು ಹಾರಿಸಿ 26 ಜನರನ್ನು ಹತ್ಯೆ ಮಾಡಿದ್ದರು. ಅವರಲ್ಲಿ ಹೆಚ್ಚಿನವರು ಇತರ ರಾಜ್ಯಗಳ ಪ್ರವಾಸಿಗರು. ಈ ದಾಳಿಯು ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಪ್ರಧಾನಿ ನರೇಂದ್ರ ಮೋದಿ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ಪ್ರತೀಕಾರ ತೀರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ . ಉಗ್ರರನ್ನು ಹಿಂಬಾಲಿಸಿ ಹೊಡೆದುರುಳಿಸುತ್ತೇವೆ ಎಂದಿದ್ದಾರೆ. ಪಹಲ್ಗಾಮ್ ಶೈಲಿಯ ಹತ್ಯಾಕಾಂಡ ಪುನರಾವರ್ತನೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ, ಭದ್ರತಾ ಪಡೆಗಳು ಗುಪ್ತಚರ ಸಂಗ್ರಹಣೆ ಮತ್ತು ಭೂ ಕಾರ್ಯಾಚರಣೆಗಳನ್ನು ಚುರುಕುಗೊಳಿಸಿವೆ. ಹಾಗೆಯೇ ಜಮ್ಮುವಿನ ಜೈಲುಗಳಲ್ಲಿ ಸಂಭಾವ್ಯ ದಾಳಿ ನಡೆಯುವ ಎಚ್ಚರಿಕೆ ದೊರೆತಿದ್ದು, ಭದ್ರತೆ ಹೆಚ್ಚಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us