ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿದ ಭದ್ರತಾ ಪಡೆ, ಒಬ್ಬ ಭಯೋತ್ಪಾದಕನ ಮೃತದೇಹ ಪತ್ತೆ

ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರರನ್ನು ಹತ್ಯೆ ಮಾಡುವ ಮೂಲಕ ಭದ್ರತಾ ಪಡೆಗಳು ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ ಎಂದು ಅಧಿಕಾರಿಗಳು ಇಂದು (ಅ.30) ತಿಳಿಸಿದ್ದಾರೆ. ಕೇರನ್ ಸೆಕ್ಟರ್‌ನ ಜುಮಗುಂಡ್ ಪ್ರದೇಶದಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ಭಾನುವಾರ ರಾತ್ರಿ ಭದ್ರತಾ ಪಡೆಗಳು ವಿಫಲಗೊಳಿಸಲಾಗಿದೆ.

ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿದ ಭದ್ರತಾ ಪಡೆ, ಒಬ್ಬ ಭಯೋತ್ಪಾದಕನ ಮೃತದೇಹ ಪತ್ತೆ
ಸಾಂದರ್ಭಿಕ ಚಿತ್ರ

Updated on: Oct 30, 2023 | 10:19 AM

ಶ್ರೀನಗರ, ಅ.30: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರರನ್ನು ಹತ್ಯೆ ಮಾಡುವ ಮೂಲಕ ಭದ್ರತಾ ಪಡೆಗಳು ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ ಎಂದು ಅಧಿಕಾರಿಗಳು ಇಂದು (ಅ.30) ತಿಳಿಸಿದ್ದಾರೆ. ಕೇರನ್ ಸೆಕ್ಟರ್‌ನ ಜುಮಗುಂಡ್ ಪ್ರದೇಶದಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ಭಾನುವಾರ ರಾತ್ರಿ ಭದ್ರತಾ ಪಡೆಗಳು ವಿಫಲಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಬೆಳಗ್ಗೆ ಪ್ರದೇಶದಲ್ಲಿ ಶೋಧ ನಡೆಸಿದಾಗ ಭಯೋತ್ಪಾದಕನ ಮೃತದೇಹ ಪತ್ತೆಯಾಗಿದೆ. ಕಾರ್ಯಚರಣೆ ಮುಂದುವರಿದಿದ್ದು, ಎಷ್ಟು ಜನ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಇನ್ನು ತಿಳಿಸಿಲ್ಲ.