ಶ್ರೀನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ (ಭಾನುವಾರ) ಜಮ್ಮು ಮತ್ತು ಕಾಶ್ಮೀರಕ್ಕೆ ಆಗಮಿಸಲಿರುವುದರಿಂದ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ನಾಳೆ ‘ಪಂಚಾಯತ್ ರಾಜ್ ದಿವಸ್’ (Panchayat Raj Diwas) ಸಂದರ್ಭದಲ್ಲಿ ಪ್ರಧಾನಿಯವರು ಪಂಚಾಯತ್‌ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರತಿ ವರ್ಷ ಏಪ್ರಿಲ್ 24 ಅನ್ನು ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನಾಗಿ ಆಚರಿಸಲಾಗುತ್ತದೆ. ಪ್ರಧಾನಮಂತ್ರಿ ಮೋದಿ (PM Narendra Modi) ಜಮ್ಮು ಮತ್ತು ಕಾಶ್ಮೀರದ 30,000ಕ್ಕೂ ಹೆಚ್ಚು ಪಂಚಾಯತ್ ರಾಜ್ ಸಂಸ್ಥೆ (PRI) ಸದಸ್ಯರನ್ನು ಒಳಗೊಂಡಂತೆ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ 20 ಸಾವಿರ ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಜಮ್ಮುವಿನ ಪಂಚಾಯತ್ ಪಲ್ಲಿಯನ್ನು ಈ ವರ್ಷ ಪಂಚಾಯತ್ ರಾಜ್ ದಿವಸ್ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ. ರೈತರು, ಸರಪಂಚ್‌ಗಳು ಮತ್ತು ಗ್ರಾಮದ ಮುಖ್ಯಸ್ಥರು ತಮ್ಮ ಆದಾಯ ಮತ್ತು ಅವರ ಉತ್ಪನ್ನಗಳನ್ನು ಸುಧಾರಿಸಲು ಅನುವು ಮಾಡಿಕೊಡುವ ಇತ್ತೀಚಿನ ಆವಿಷ್ಕಾರಗಳನ್ನು ಈ ವೇಳೆ ಪ್ರದರ್ಶಿಸಲಾಗುತ್ತದೆ.
PM Modi will also inaugurate a 500 KW solar power plant at Palli in Samba District of Jammu & Kashmir which will make it the country’s first panchayat to become carbon neutral: PMO pic.twitter.com/QiKgieyYMO
— ANI (@ANI) April 23, 2022
ನಾಳೆ ಪ್ರದರ್ಶಿಸಲು ಯೋಜಿಸಲಾದ ಪ್ರಮುಖ ಆವಿಷ್ಕಾರಗಳ ಪೈಕಿ, ಗ್ರಾಮೀಣಾಭಿವೃದ್ಧಿ ಮತ್ತು ರೈತರಿಗೆ ಭೂಗೋಳದ ತಂತ್ರಜ್ಞಾನ, ಐದು ದಿನಗಳವರೆಗೆ ಹವಾಮಾನ ಮುನ್ಸೂಚನೆಗಾಗಿ ರೈತರು ಬಳಸಬಹುದಾದ ಅಪ್ಲಿಕೇಶನ್‌ಗಳು, ನೇರಳೆ ಕ್ರಾಂತಿ ಎಂದು ಪ್ರಸಿದ್ಧವಾದ ಲ್ಯಾವೆಂಡರ್ ಕೃಷಿ, ಅದೇ ಭೂಮಿಯಲ್ಲಿ ಸೇಬಿನ ಉತ್ಪಾದನೆಯನ್ನು ಹೆಚ್ಚಿಸಲು ಜೈವಿಕ ತಂತ್ರಜ್ಞಾನದ ಆವಿಷ್ಕಾರಗಳು. ರೈತರ ಆದಾಯವನ್ನು ಹೆಚ್ಚಿಸಲು, ಕೀಟನಾಶಕ ಸಿಂಪಡಣೆ ಮತ್ತು ತ್ಯಾಜ್ಯ ಸಂಸ್ಕರಣೆಗೆ ಡ್ರೋನ್ ಅಪ್ಲಿಕೇಶನ್, ಪರಮಾಣು ವಿಕಿರಣದ ಮೂಲಕ ಹಣ್ಣುಗಳ ಶೆಲ್ಫ್ ಜೀವಿತಾವಧಿಯನ್ನು ಹೆಚ್ಚಿಸುವುದು ಇತ್ಯಾದಿಗಳು ಸೇರಿವೆ.
ಇದನ್ನೂ ಓದಿ: Viral Video: ಜಮ್ಮುವಿನಲ್ಲಿ ಸೈನಿಕರಿದ್ದ ಬಸ್ ಮೇಲೆ ಉಗ್ರರ ದಾಳಿಯ ಶಾಕಿಂಗ್ ವಿಡಿಯೋ ವೈರಲ್
ಪ್ರಧಾನಿ ಮೋದಿ ಭೇಟಿಗೂ ಮುನ್ನ ಜಮ್ಮುವಿನಲ್ಲಿ ಎನ್ಕೌಂಟರ್; ಇಬ್ಬರು ಉಗ್ರರ ಹತ್ಯೆ, ಓರ್ವ ಸೈನಿಕ ಸಾವು
Published On - 2:32 pm, Sat, 23 April 22