ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ: ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಗೆ ಬಿಗಿ ಭದ್ರತೆ
ಇಸ್ರೇಲ್-ಹಮಾಸ್ ಸಂಘರ್ಷದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಇಸ್ರೇಲಿ ರಾಯಭಾರ ಕಚೇರಿ ಮತ್ತು ಚಾಬಾದ್ ಹೌಸ್ ಸುತ್ತಲೂ ಭದ್ರತೆಯನ್ನು ಹೆಚ್ಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವದೆಹಲಿಯ ರಾಯಭಾರ ಕಚೇರಿ ಮತ್ತು ಮಧ್ಯ ದೆಹಲಿಯ ಚಾಂದಿನಿ ಚೌಕ್‌ನಲ್ಲಿರುವ ಚಾಬಾದ್ ಹೌಸ್ ಸುತ್ತಮುತ್ತ ಪೊಲೀಸರಿಗೆ ಬಿಗಿ ಭದ್ರತೆವಹಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಇಸ್ರೇಲ್(Israel)-ಹಮಾಸ್(Hamas) ಸಂಘರ್ಷದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಇಸ್ರೇಲಿ ರಾಯಭಾರ ಕಚೇರಿ ಮತ್ತು ಚಾಬಾದ್ ಹೌಸ್ ಸುತ್ತಲೂ ಭದ್ರತೆಯನ್ನು ಹೆಚ್ಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವದೆಹಲಿಯ ರಾಯಭಾರ ಕಚೇರಿ ಮತ್ತು ಮಧ್ಯ ದೆಹಲಿಯ ಚಾಂದಿನಿ ಚೌಕ್‌ನಲ್ಲಿರುವ ಚಾಬಾದ್ ಹೌಸ್ ಸುತ್ತಮುತ್ತ ಪೊಲೀಸರಿಗೆ ಬಿಗಿ ಭದ್ರತೆವಹಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಹಮಾಸ್ ಉಗ್ರರು ಶನಿವಾರದಿಂದ ಇಸ್ರೇಲ್‌ನ ದಕ್ಷಿಣ ಭಾಗದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ ಇಲ್ಲಿಯವರೆಗೆ ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಶನಿವಾರ ಹಮಾಸ್ ಉಗ್ರರು ಇಸ್ರೇಲ್ ಮೇಲೆ 5 ಸಾವಿರಕ್ಕೂ ಹೆಚ್ಚು ರಾಕೆಲ್ಗಳ ಮೂಲಕ ದಾಳಿ ನಡೆಸಿದ್ದರು.
ಇಸ್ರೇಲ್ ಸೇನೆ ಪೂರ್ವ ಎಚ್ಚರಿಕೆ ನೀಡದೆ ಗಾಜಾ ಪಟ್ಟಿಯ ನಿವಾಸಿಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದರೆ ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಪ್ಯಾಲೆಸ್ತೀನ್ ಉಗ್ರಗಾಮಿ ಸಂಘಟನೆ ಹಮಾಸ್ ಬೆದರಿಕೆ ಹಾಕಿದೆ. ಯಾವುದೇ ಎಚ್ಚರಿಕೆ ನೀಡದೇ ನಮ್ಮ ಜನರನ್ನು ಗುರಿಯಾಸಿಕೊಂಡು ನಡೆಸುವ ದಾಳಿಗೆ ಪ್ರತಿಯಾಗಿ, ಒತ್ತೆಯಾಳುಗಳಾಗಿರುವ ಇಸ್ರೇಲ್‌ನ ಒಬ್ಬೊಬ್ಬ ನಾಗರಿಕರನ್ನು ಹತ್ಯೆ ಮಾಡಲಾಗುವುದು ಎಂದು ಹಮಾಸ್‌ನ ಸಶಸ್ತ್ರ ವಿಭಾಗವಾದ ಎಝೆಡಿನ್ ಅಲ್-ಕಸ್ಸೆಮ್ ಬ್ರಿಗೇಡ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಮತ್ತಷ್ಟು ಓದಿ: ಗಾಜಾ ಮುತ್ತಿಗೆಗೆ ಇಸ್ರೇಲ್ ಆದೇಶ: ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಹಮಾಸ್ ಬೆದರಿಕೆ
ಕಳೆದ ಮೂರು ದಿನಗಳಿಂದ ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸುತ್ತಿದೆ. ಹಮಾಸ್ ಉಗ್ರರು, ಇಸ್ರೇಲ್‌ನ ದಕ್ಷಿಣ ಭಾಗದಲ್ಲಿ ಆಶ್ಚರ್ಯಕರ ರೀತಿಯಲ್ಲಿ ದಾಳಿ ಮಾಡಿದ ಬಳಿಕ, ಸೇನಾ ಕಾರ್ಯಾಚರಣೆಯನ್ನು ಇಸ್ರೇಲ್ ತೀವ್ರಗೊಳಿಸಿದೆ.
ನಾವು ಈ ಯುದ್ಧವನ್ನು ಬಯಸಲಿಲ್ಲ. ಇದು ಅತ್ಯಂತ ಕ್ರೂರ ಮತ್ತು ಘೋರ ರೀತಿಯಲ್ಲಿ ನಮ್ಮ ಮೇಲೆ ಬಲವಂತವಾಗಿ ಹೇರಲ್ಪಟ್ಟಿತು. ಆದರೆ ಇಸ್ರೇಲ್ ಈ ಯುದ್ಧವನ್ನು ಪ್ರಾರಂಭಿಸದಿದ್ದರೂ, ಇಸ್ರೇಲ್ ಅದನ್ನು ಮುಗಿಸುತ್ತದೆ ಎಂದು ಹೇಳಿದ್ದಾರೆ.
ನೇತನ್ಯಾಹು ಹಮಾಸ್ ಅನ್ನು ಉಗ್ರಗಾಮಿ ಇಸ್ಲಾಮಿಕ್ ಭಯೋತ್ಪಾದಕ ಗುಂಪು ಐಸಿಸ್‌ಗೆ ಹೋಲಿಸಿದ್ದಾರೆ. ಯುಎಸ್, ಫ್ರಾನ್ಸ್, ಜರ್ಮನಿ, ಇಟಲಿ ಮತ್ತು ಯುಕೆ ಹಮಾಸ್‌ನೊಂದಿಗೆ ನಡೆಯುತ್ತಿರುವ ಸಂಘರ್ಷದಲ್ಲಿ ಇಸ್ರೇಲ್ ಅನ್ನು ಬೆಂಬಲಿಸುವ ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ