Sedition Law: ದೇಶದ್ರೋಹ ಕಾನೂನಿಗೆ ಸವಾಲು; ಉತ್ತರ ನೀಡಲು ಕೋರ್ಟ್​ ಬಳಿ 1 ವಾರ ಸಮಯಾವಕಾಶ ಕೋರಿದ ಕೇಂದ್ರ ಸರ್ಕಾರ

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸೂರ್ಯ ಕಾಂತ್ ಅವರ ಪೀಠವು ನಾಳೆ ಅರ್ಜಿಗಳ ಬ್ಯಾಚ್‌ನ ವಿಚಾರಣೆಯನ್ನು ನಡೆಸಲಿದೆ.

Sedition Law: ದೇಶದ್ರೋಹ ಕಾನೂನಿಗೆ ಸವಾಲು; ಉತ್ತರ ನೀಡಲು ಕೋರ್ಟ್​ ಬಳಿ 1 ವಾರ ಸಮಯಾವಕಾಶ ಕೋರಿದ ಕೇಂದ್ರ ಸರ್ಕಾರ
ಸುಪ್ರೀಂಕೋರ್ಟ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 04, 2022 | 7:51 PM

ನವದೆಹಲಿ: ದೇಶದ್ರೋಹ ಕಾಯ್ದೆಯ (ಸೆಕ್ಷನ್ 124 ಎ ಐಪಿಸಿ) ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್​ನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಕುರಿತು ಪ್ರತ್ಯುತ್ತರ ನೀಡಲು ಕೇಂದ್ರ ಸರ್ಕಾರ ಇನ್ನೂ ಒಂದು ವಾರ ಸಮಯಾವಕಾಶ ಕೇಳಿದೆ. ಈ ಕುರಿತು ಉತ್ತರ ನೀಡಲು ಕೇಂದ್ರ ಸರ್ಕಾರ ಇನ್ನೊಂದು ವಾರದ ಸಮಯವನ್ನು ಕೋರಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸೂರ್ಯ ಕಾಂತ್ ಅವರ ಪೀಠವು ನಾಳೆ ಅರ್ಜಿಗಳ ಬ್ಯಾಚ್‌ನ ವಿಚಾರಣೆಯನ್ನು ನಡೆಸಲಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ಸರ್ಕಾರದಿಂದ ಇದು ಎರಡನೇ ವಿಸ್ತರಣೆಯಾಗಿದೆ. ಕಳೆದ ಭಾನುವಾರ ಕೇಂದ್ರ ಸರ್ಕಾರ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯಲು ಒಂದು ದಿನದ ವಿಸ್ತರಣೆಯನ್ನು ಕೋರಿತ್ತು. ಈ ಬಾರಿಯೂ ಉತ್ತರ ಸಲ್ಲಿಕೆ ವಿಳಂಬಕ್ಕೆ ಸಕ್ಷಮ ಪ್ರಾಧಿಕಾರದಿಂದ ಮಂಜೂರಾತಿ ಬಾಕಿ ಉಳಿದಿರುವುದೇ ಕಾರಣ ಎನ್ನಲಾಗಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ನ್ಯಾಯ ಪೀಠವು ಕಳೆದ ವರ್ಷ ಜುಲೈನಲ್ಲಿ ಮನವಿಯಲ್ಲಿ ನೋಟಿಸ್ ಜಾರಿ ಮಾಡಿತ್ತು. ಸೆಕ್ಷನ್ 124 ಎ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕಲು ಬ್ರಿಟಿಷರಿಂದ ಬಳಸಲ್ಪಟ್ಟ ಒಂದು ನಿಬಂಧನೆಯಾಗಿದೆ ಎಂದು ಕೋರ್ಟ್​ ಹೇಳಿತ್ತು. ದೇಶದ್ರೋಹದ ಕಾಯ್ದೆ ದುರ್ಬಳಕೆಯಾಗುತ್ತಿದೆ. ಇದೊಂದು ಬ್ರಿಟಿಷ್ ಕಾಲದ ಕಾನೂನು. ಸ್ವಾತಂತ್ರ್ಯ ಲಭಿಸಿ 75 ವರ್ಷವಾದರೂ ಈ ಕಾನೂನಿನ ಅಗತ್ಯವಿದೆಯೇ? ಎಂದು ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ ಹೇಳಿದ್ದರು.

ಇದನ್ನೂ ಓದಿ
Image
ಪ್ರಧಾನಿ ಮೋದಿಯವರನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ಒಡಿಶಾದ ಪಟ್ಟಚಿತ್ರ ತೋರಿಸಿದ ಡೆನ್ಮಾರ್ಕ್​ ಪ್ರಧಾನಿ
Image
ಮುಂಬೈನ ಮಸೀದಿಗಳ ಹೊರಗೆ ಧ್ವನಿವರ್ಧಕಗಳಲ್ಲಿ ಹನುಮಾನ್ ಚಾಲೀಸಾ ಪಠಿಸಿದ ಎಂಎನ್​ಎಸ್​ ಕಾರ್ಯಕರ್ತರು; ಏನಿದು ವಿವಾದ?
Image
Sedition Law: ಬ್ರಿಟಿಷರ ಕಾಲದ ದೇಶದ್ರೋಹ ಕಾಯ್ದೆ ಇನ್ನೂ ಅಗತ್ಯವಿದೆಯೇ?; ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಪ್ರಶ್ನೆ

ದೇಶದ್ರೋಹ ಕಾಯ್ದೆಯಡಿ ಮಹಾತ್ಮ ಗಾಂಧೀಜಿ, ಬಾಲ ಗಂಗಾಧರ ತಿಲಕ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದು ಬ್ರಿಟಿಷ್ ಕಾಲದ ಕಾನೂನು. ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷದ ಬಳಿಕವೂ ದೇಶದ್ರೋಹ ಕಾಯ್ದೆಯ ಅಗತ್ಯವಿದೆಯಾ? ಎಂದು ಸುಪ್ರೀಂಕೋರ್ಟ್​ ಪ್ರಶ್ನಿಸಿದೆ. ದೇಶದ್ರೋಹದ ಕಾಯ್ದೆಯನ್ನು ರದ್ದು ಪಡಿಸಲು ಕೋರಿ ಕರ್ನಾಟಕದ ಎಸ್.ಜಿ. ಒಂಭತ್ತಕೆರೆ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ವಿಚಾರಣೆ ನಡೆಸಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​ ನೋಟಿಸ್ ನೀಡಿತ್ತು. ಪೊಲೀಸರು ಯಾರನ್ನಾದರೂ ಸರಿಪಡಿಸಲು ಬಯಸಿದರೆ, ಅವರು ಸೆಕ್ಷನ್ 124 ಎ ಅನ್ನು ಅನ್ವಯಿಸಬಹುದು ಮತ್ತು ಈ ಸೆಕ್ಷನ್ ಅನ್ನು ಅನ್ವಯಿಸಿದಾಗ ಎಲ್ಲರೂ ಸ್ವಲ್ಪ ಭಯಪಡುತ್ತಾರೆ ಎಂದು ನ್ಯಾಯ ಪೀಠ ಹೇಳಿತು.

“ನಾನು ಸುಪ್ರೀಂ ಕೋರ್ಟ್‌ಗೆ ತನ್ನ ಮುಂದೆ ಬಾಕಿ ಇರುವ ದೇಶದ್ರೋಹದ ಕಾನೂನು ಪ್ರಕರಣಗಳನ್ನು ಕೇಂದ್ರಕ್ಕೆ ಕಳುಹಿಸಬೇಡಿ ಎಂದು ಉತ್ತೇಜಿಸುತ್ತೇನೆ. ದೇಶದ್ರೋಹ ಕಾನೂನಿನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಈ ವಾರದೊಳಗೆ ತನ್ನ ಉತ್ತರವನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ಅರ್ಜಿ ವಿಚಾರಣೆಯನ್ನು ಮೇ 5ರಂದು ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗುವುದು.

ಐಪಿಸಿ ಸೆಕ್ಷನ್ 124ಎ ಅಡಿಯಲ್ಲಿ ಬರುವ ದೇಶದ್ರೋಹ ಕಾಯ್ದೆಯು ಭಾರತೀಯ ಪ್ರಜೆಗಳ ಮೂಲಭೂತ ಹಕ್ಕುಗಳಾದ ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ, ಬ್ರಿಟಿಷರ ಕಾಲದಲ್ಲಿ ಜಾರಿಗೆ ಬಂದ ದೇಶದ್ರೋಹ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಕರ್ನಾಟಕ ಮೂಲದ ನಿವೃತ್ತ ಮೇಜರ್ ಜನರಲ್ ಎಸ್​.ಜಿ. ಒಂಭತ್ತೆಕರೆ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.

ವಸಾಹತುಶಾಹಿಯಾದ ಈ ದೇಶದ್ರೋಹ ಕಾಯ್ದೆಯನ್ನೇ ಬ್ರಿಟಿಷರು ಮಹಾತ್ಮ ಗಾಂಧೀಜಿಯವರ ಬಾಯಿ ಮುಚ್ಚಿಸಲು ಬಳಸಿದ್ದರು ಎಂದು ಸುಪ್ರೀಂಕೋರ್ಟ್​ ಸಿಜಿಐ ಎನ್​.ವಿ. ರಮಣ ಅರ್ಜಿ ವಿಚಾರಣೆ ವೇಳೆ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್