Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾನ್ಸ್​​ಜೆಂಡರ್​​ಗಳಿಗೆ ಪ್ರತ್ಯೇಕ ಶೌಚಾಲಯ ಕೋರಿ ಮನವಿ; ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Delhi High Court: ಅರ್ಜಿದಾರರಾದ ಕಾನೂನು ವಿದ್ಯಾರ್ಥಿ ಜಾಸ್ಮಿನ್ ಕೌರ್ ಛಬ್ರಾ, ಲಿಂಗಬೇಧವಿಲ್ಲದೆ ಪ್ರತಿಯೊಬ್ಬ ಮನುಷ್ಯನೂ ಕೆಲವು ಮೂಲಭೂತ ಮಾನವ ಹಕ್ಕುಗಳನ್ನು ಹೊಂದಿದ್ದಾನೆ, ಇದರಲ್ಲಿ ಪ್ರತ್ಯೇಕ ಸಾರ್ವಜನಿಕ ಶೌಚಾಲಯವನ್ನು ಹೊಂದುವ ಹಕ್ಕಿದೆ ಎಂದು ಹೇಳಿದ್ದಾರೆ.

ಟ್ರಾನ್ಸ್​​ಜೆಂಡರ್​​ಗಳಿಗೆ ಪ್ರತ್ಯೇಕ ಶೌಚಾಲಯ ಕೋರಿ ಮನವಿ; ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ದೆಹಲಿ ಹೈಕೋರ್ಟ್​
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 26, 2021 | 4:48 PM

ದೆಹಲಿ: ದೆಹಲಿಯಲ್ಲಿ ಲೈಂಗಿಕ ಅಲ್ಪ ಸಂಖ್ಯಾತರಿಗಾಗಿ (Transgender)  ಪ್ರತ್ಯೇಕ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಸೋಮವಾರ ಕೇಂದ್ರ, ದೆಹಲಿ ಸರ್ಕಾರ ಮತ್ತು ರಾಷ್ಟ್ರ ರಾಜಧಾನಿಯ ಎಲ್ಲಾ ಪುರಸಭೆಗಳಿಗೆ ನೋಟಿಸ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ವಿಭಾಗೀಯ ಪೀಠವು ಅರ್ಜಿಗೆ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸಲು ಅಧಿಕಾರಿಗಳಿಗೆ ಸಮಯ ನೀಡಿದ್ದು ಸೆಪ್ಟೆಂಬರ್ 13 ರಂದು ಪ್ರಕರಣದ ವಿಚಾರಣೆ ನಡೆಸುವುದಾಗಿ ಹೇಳಿದೆ.

ಅರ್ಜಿದಾರರಾದ ಕಾನೂನು ವಿದ್ಯಾರ್ಥಿ ಜಾಸ್ಮಿನ್ ಕೌರ್ ಛಬ್ರಾ, ಲಿಂಗಬೇಧವಿಲ್ಲದೆ ಪ್ರತಿಯೊಬ್ಬ ಮನುಷ್ಯನೂ ಕೆಲವು ಮೂಲಭೂತ ಮಾನವ ಹಕ್ಕುಗಳನ್ನು ಹೊಂದಿದ್ದಾನೆ, ಇದರಲ್ಲಿ ಪ್ರತ್ಯೇಕ ಸಾರ್ವಜನಿಕ ಶೌಚಾಲಯವನ್ನು ಹೊಂದುವ ಹಕ್ಕಿದೆ. “ಯಾವುದೇ ಒಂದು ನಿರ್ದಿಷ್ಟ ಲಿಂಗಕ್ಕಿರುವ ಸಾರ್ವಜನಿಕ ಶೌಚಾಲಯವನ್ನು ಬೇರೆ ಯಾವುದೇ ಲಿಂಗದವರು ಬಳಸಲು ಹೇಳುವುದು ಮೂಲಭೂತವಾಗಿ ಅಥವಾ ನೈತಿಕವಾಗಿ ನ್ಯಾಯಯುತವಾಗಿ ಸರಿಯಲ್ಲ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಪ್ರತ್ಯೇಕ ಸಾರ್ವಜನಿಕ ವಾಶ್ ರೂಂ ಬಳಸಲು ಸೌಲಭ್ಯವಿಲ್ಲದಿರುವುದು ಸಂವಿಧಾನದ 14 ಮತ್ತು 21 ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಛಬ್ರಾ ವಾದಿಸಿದರು. “ಮೂರನೇ ಲಿಂಗವು ಗಂಡು ಮತ್ತು ಹೆಣ್ಣುಗಾಗಿ ತಯಾರಿಸಿದ ವಾಶ್‌ರೂಮ್‌ಗಳನ್ನು ಬಳಸಿದಾಗ, ಅವರ ಗೌಪ್ಯತೆ ಹಕ್ಕನ್ನು ಉಲ್ಲಂಘಿಸಲಾಗುತ್ತದೆ” ಎಂದು ಅರ್ಜಿದಾರರು ಹೇಳಿದರು, ಅವರು ಪುರುಷರಿಗಾಗಿ ನಿರ್ಮಿಸಲಾದ ಶೌಚಾಲಯಗಳಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳಕ್ಕೆ ಗುರಿಯಾಗುತ್ತಾರೆ.

2017 ರಲ್ಲಿ ಹೊರಡಿಸಲಾದ ಸ್ವಚ್ಛ ಭಾರತ್ ಮಿಷನ್ (ನಗರ) ಪರಿಷ್ಕೃತ ಮಾರ್ಗಸೂಚಿಗಳು ಟ್ರಾನ್ಸ್​​ಜೆಂಡರ್​​ಗಳ ಶೌಚಾಲಯಕ್ಕಾಗಿ ಪ್ರತ್ಯೇಕ ಆಸನಗಳನ್ನು ರಚಿಸಲು ಶಿಫಾರಸು ಮಾಡಿದೆ ಎಂದು ಮನವಿಯಲ್ಲಿ ಹೇಳಲಾಗಿದೆ. ಲೈಂಗಿಕ ಓರಿಯೆಟೇಶನ್ ಅಥವಾ ಲಿಂಗ ಗುರುತಿಸುವಿಕೆಯ ಆಧಾರದ ಮೇಲೆ ತಾರತಮ್ಯವು ಕಾನೂನಿನ ಮುಂದೆ ಸಮಾನತೆಯನ್ನು ಮತ್ತು ಕಾನೂನಿನ ಸಮಾನ ರಕ್ಷಣೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಸಂವಿಧಾನದ 14 ನೇ ವಿಧಿಯನ್ನು ಉಲ್ಲಂಘಿಸುತ್ತದೆ.

ಟ್ರಾನ್ಸ್​​ಜೆಂಡರ್​​ ವ್ಯಕ್ತಿಗಳ (ಹಕ್ಕುಗಳ ಸಂರಕ್ಷಣೆ) ಕಾಯ್ದೆ 2019 (Transgender Persons (Protection of Rights) Act) ಶಿಕ್ಷಣ, ಉದ್ಯೋಗ, ಆರೋಗ್ಯ ರಕ್ಷಣೆ, ಚಳುವಳಿ ಮತ್ತು ವಾಸಿಸುವ ಹಕ್ಕಿನಲ್ಲಿ ಒಬ್ಬ ಟ್ರಾನ್ಸ್​​ಜೆಂಡರ್​​ ವ್ಯಕ್ತಿಯ ವಿರುದ್ಧದ ತಾರತಮ್ಯವನ್ನು ಅಪರಾಧೀಕರಿಸುತ್ತದೆ ಎಂದು ಸಲ್ಲಿಸಿದ ಅರ್ಜಿದಾರ, ಪ್ರತ್ಯೇಕ ಶೌಚಾಲಯಗಳ ಅನುಪಸ್ಥಿತಿಯನ್ನು ಉಲ್ಲೇಖಿಸುತ್ತಾ, “ಇದು ಒಂದು ಟ್ರಾನ್ಸ್ಜೆಂಡರ್ ಸಮುದಾಯದ ಜನರು ತಮ್ಮ ದೈನಂದಿನ ಜೀವನದಲ್ಲಿ ಎದುರಿಸುತ್ತಿರುವ ಗಂಭೀರ ಮತ್ತು ಸಂಬಂಧಿಸಿದ ವಿಷಯ.ಈ ಬಗ್ಗೆ ಗೌರವಾನ್ವಿತ ಸುಪ್ರೀಂ ಕೋರ್ಟ್ ಮತ್ತು ಇತರ ಹೈಕೋರ್ಟ್‌ಗಳು ನೀಡಿದ ಹಲವಾರು ತೀರ್ಪುಗಳು ಮತ್ತು ಆದೇಶಗಳ ನಂತರವೂ ಈ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದುಹೇಳಿದ್ದಾರೆ.

ಇದನ್ನೂ ಓದಿ: BS Yediyurappa: ಸಂಧ್ಯಾ ಕಾಲದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ; ಯಡಿಯೂರಪ್ಪಗೆ ಈಗ ಆರೋಗ್ಯವೇ ಭಾಗ್ಯ ..

ಇದನ್ನೂ ಓದಿ: ಶಿಕಾರಿಪುರ: ಬಿಎಸ್ ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆ ಅಂಗಡಿ ಮುಂಗಟ್ಟು ಬಂದ್; ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

(Seeking separate toilets for Transgender Delhi High Court issued notice to the Centre Delhi government)

ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ