ಸೆಮಿಕಂಡಕ್ಟರ್ ಡಿಜಿಟಲ್ ಯುಗದ ಆಧಾರವಾಗಿದೆ; ಪ್ರಧಾನಿ ನರೇಂದ್ರ ಮೋದಿ

ಪ್ರಜಾಪ್ರಭುತ್ವ ಮತ್ತು ತಂತ್ರಜ್ಞಾನವು ಒಟ್ಟಾಗಿ ಮಾನವೀಯತೆಯ ಕಲ್ಯಾಣವನ್ನು ಖಾತ್ರಿಪಡಿಸುತ್ತದೆ ಎಂದು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ, ಭಾರತವು ವೈವಿಧ್ಯಮಯ ಸೆಮಿಕಂಡಕ್ಟರ್ ಪೂರೈಕೆ ಸರಪಳಿಯಲ್ಲಿ ವಿಶ್ವಾಸಾರ್ಹ ಪಾಲುದಾರನಾಗುವ ಸಾಮರ್ಥ್ಯವನ್ನು ಹೊಂದಿದೆ ಎಂದು ಭರವಸೆ ನೀಡಿದ್ದಾರೆ.

ಸೆಮಿಕಂಡಕ್ಟರ್ ಡಿಜಿಟಲ್ ಯುಗದ ಆಧಾರವಾಗಿದೆ; ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
ಸುಷ್ಮಾ ಚಕ್ರೆ
|

Updated on: Sep 10, 2024 | 10:07 PM

ನವದೆಹಲಿ: “ಭಾರತವು ಸೆಮಿಕಂಡಕ್ಟರ್ ವಲಯದಲ್ಲಿ ತನ್ನ ಜಾಗತಿಕ ಜವಾಬ್ದಾರಿಯನ್ನು ಗುರುತಿಸಿ ಆ ಹಾದಿಯಲ್ಲಿ ಮುನ್ನಡೆಯುತ್ತಿದೆ. ಮುಂಬರುವ ಸಮಯವು ತಂತ್ರಜ್ಞಾನದಿಂದ ಚಾಲಿತವಾಗಿರುತ್ತದೆ. ಸೆಮಿಕಂಡಕ್ಟರ್ ‘ಡಿಜಿಟಲ್ ಯುಗ’ದ ಆಧಾರವಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಸಂಜೆ ದೆಹಲಿಯ ತಮ್ಮ ನಿವಾಸದಲ್ಲಿ ‘ಸೆಮಿಕಂಡಕ್ಟರ್ ಎಕ್ಸಿಕ್ಯೂಟಿವ್ಸ್ ರೌಂಡ್‌ಟೇಬಲ್’ ಅಧ್ಯಕ್ಷತೆ ವಹಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.

ಸೆಮಿಕಂಡಕ್ಟರ್ ಉದ್ಯಮವು ಶೀಘ್ರದಲ್ಲೇ ಪ್ರತಿಯೊಬ್ಬರ ಮೂಲಭೂತ ಅವಶ್ಯಕತೆಗಳ ತಳಹದಿಯಾಗಲಿದೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, “ಪ್ರಜಾಪ್ರಭುತ್ವ ಮತ್ತು ತಂತ್ರಜ್ಞಾನವು ಒಟ್ಟಾಗಿ ಮಾನವೀಯತೆಯ ಕಲ್ಯಾಣವನ್ನು ಖಚಿತಪಡಿಸುತ್ತದೆ” ಎಂದು ಹೇಳಿದರು. ಸಾಮಾಜಿಕ, ಡಿಜಿಟಲ್ ಮತ್ತು ಭೌತಿಕ ಮೂಲಸೌಕರ್ಯಗಳ ಅಭಿವೃದ್ಧಿ, ಅಂತರ್ಗತ ಅಭಿವೃದ್ಧಿಗೆ ಉತ್ತೇಜನ ನೀಡುವುದು, ಅನುಸರಣೆ ಹೊರೆಯನ್ನು ಕಡಿಮೆ ಮಾಡುವುದು, ಉತ್ಪಾದನೆ ಮತ್ತು ನಾವೀನ್ಯತೆಗಳಲ್ಲಿ ಹೂಡಿಕೆಯನ್ನು ಆಕರ್ಷಿಸುವುದು ಸೇರಿದಂತೆ ಅಭಿವೃದ್ಧಿಯ ಆಧಾರ ಸ್ತಂಭಗಳ ಕುರಿತು ಮೋದಿ ಮಾತನಾಡಿದರು.

ಭಾರತವು ವೈವಿಧ್ಯಮಯ ಸೆಮಿಕಂಡಕ್ಟರ್ ಪೂರೈಕೆ ಸರಪಳಿಯಲ್ಲಿ ವಿಶ್ವಾಸಾರ್ಹ ಪಾಲುದಾರನಾಗುವ ಸಾಮರ್ಥ್ಯವನ್ನು ಹೊಂದಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಜಾಗತಿಕವಾಗಿ ಸ್ಪರ್ಧಾತ್ಮಕ ಉತ್ಪನ್ನಗಳನ್ನು ಅಭಿವೃದ್ಧಿಪಡಿಸುವುದರತ್ತ ಭಾರತ ಗಮನವನ್ನು ಕೇಂದ್ರೀಕರಿಸಿದೆ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಅನುಸಂಧಾನ್ ನ್ಯಾಷನಲ್ ರಿಸರ್ಚ್ ಫೌಂಡೇಶನ್‌ನ ಮೊದಲ ಆಡಳಿತ ಮಂಡಳಿ ಸಭೆ

“ಭಾರತವು ಹೈಟೆಕ್ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಲು ಉತ್ತಮ ಮಾರುಕಟ್ಟೆಯಾಗಿದೆ. ಇಂದು ಸೆಮಿಕಂಡಕ್ಟರ್ ವಲಯದ ನಾಯಕರು ಹಂಚಿಕೊಂಡ ಉತ್ಸಾಹವು ಈ ವಲಯಕ್ಕಾಗಿ ಹೆಚ್ಚು ಶ್ರಮಿಸಲು ಸರ್ಕಾರವನ್ನು ಪ್ರೇರೇಪಿಸುತ್ತದೆ” ಎಂದು ಅವರು ಹೇಳಿದರು.

ಇದೇ ವೇಳೆ ಸಿಇಒಗಳು ಸೆಮಿಕಂಡಕ್ಟರ್ ವಲಯದ ಬೆಳವಣಿಗೆಗೆ ಭಾರತದ ಬದ್ಧತೆಯನ್ನು ಶ್ಲಾಘಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ