AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಪಸಂಖ್ಯಾತ ಮೋರ್ಚಾ ರದ್ದತಿಗೆ ಬಿಜೆಪಿಯ ಸುವೇಂದು ಅಧಿಕಾರಿ ಆಗ್ರಹ

"ನನ್ನ ಹೇಳಿಕೆಯನ್ನು ಬೇರೆ ರೀತಿಯಲ್ಲಿ ಅರ್ಥೈಸಿಕೊಳ್ಳಬೇಡಿ. ರಾಷ್ಟ್ರೀಯವಾದಿಗಳು ಈ ರಾಷ್ಟ್ರ ಮತ್ತು ಬಂಗಾಳದ ಪರವಾಗಿ ನಿಲ್ಲುತ್ತಾರೆ. ನಾವು ಅವರೊಂದಿಗೆ ಇರಬೇಕು ಎಂದು ಹೇಳಿದ್ದೇನೆ ನಮ್ಮೊಂದಿಗೆ ನಿಲ್ಲದವರು ರಾಷ್ಟ್ರ ಮತ್ತು ಬಂಗಾಳದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಾರೆ. ಮಮತಾ ಬ್ಯಾನರ್ಜಿಯವರಂತೆ ನಾವು ಜನರನ್ನು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರು ಎಂದು ವಿಭಜಿಸಬಾರದು. ನಾವು ಎಲ್ಲರನ್ನೂ ಭಾರತೀಯರು ಎಂದು ನೋಡುತ್ತೇವೆ ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.

ಅಲ್ಪಸಂಖ್ಯಾತ ಮೋರ್ಚಾ ರದ್ದತಿಗೆ ಬಿಜೆಪಿಯ ಸುವೇಂದು ಅಧಿಕಾರಿ ಆಗ್ರಹ
ಸುವೇಂದು ಅಧಿಕಾರಿ
ರಶ್ಮಿ ಕಲ್ಲಕಟ್ಟ
|

Updated on: Jul 17, 2024 | 6:01 PM

Share

ಕೊಲ್ಕತ್ತಾ ಜುಲೈ 17: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಪಕ್ಷದ ಕಳಪೆ ಸಾಧನೆಗೆ ರಾಜ್ಯದಲ್ಲಿ ಅಲ್ಪಸಂಖ್ಯಾತರ ಬೆಂಬಲದ ಕೊರತೆಯೇ ಕಾರಣ ಎಂದು ಪಶ್ಚಿಮ ಬಂಗಾಳದ ಹಿರಿಯ ಬಿಜೆಪಿ (BJP) ನಾಯಕ ಸುವೇಂದು ಅಧಿಕಾರಿ (Suvendu Adhikari) ಬುಧವಾರ ಹೇಳಿದ್ದಾರೆ. ಬಿಜೆಪಿಯ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯ ವಿಸ್ತೃತ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಿದ್ದರವರು. ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂಬ ಪಕ್ಷದ ಧ್ಯೇಯವಾಕ್ಯ ಬೇಡ. ಅದರ ಬದಲು ಪಕ್ಷವು ‘ಹಮ್ ಉನ್ಕೇ ಸಾಥ್ ಜೋ ಹಮಾರೆ ಸಾಥ್ (ನಮ್ಮೊಂದಿಗೆ ಇರುವವರೊಂದಿಗೆ ನಾವಿರುತ್ತೇವೆ) ಎಂಬ ಹೊಸ ಧ್ಯೇಯವಾಕ್ಯವನ್ನು ಅಳವಡಿಸಿಕೊಳ್ಳಬೇಕು ಎಂದು ಸುವೇಂದು ಹೇಳಿದ್ದಾರೆ.

“ನಾನು ರಾಷ್ಟ್ರೀಯವಾದಿ ಮುಸ್ಲಿಮರಿಗಾಗಿಯೂ ಮಾತನಾಡಿದ್ದೇನೆ. ನಾವೆಲ್ಲರೂ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂದು ಹೇಳುತ್ತಿದ್ದೆವು, ಆದರೆ ನಾನು ಇದನ್ನು ಇನ್ನು ಮುಂದೆ ಹೇಳುವುದಿಲ್ಲ. ಏಕೆಂದರೆ ಅದು ‘ಹಮ್ ಉನ್ಕೇ ಸಾಥ್ ಜೋ ಹುಮಾರೇ ಸಾಥ್’ ಆಗಿರಬೇಕು ಎಂದು ನಾನು ಭಾವಿಸುತ್ತೇನೆ. ಇಲ್ಲಿ ಅಲ್ಪಸಂಖ್ಯಾತ ಮೋರ್ಚಾ ಅಗತ್ಯವಿಲ್ಲ ಎಂದು ಸುವೇಂದು ಹೇಳಿದ್ದಾರೆ.

ಸುವೇಂದು ಅಧಿಕಾರಿ ಸ್ಪಷ್ಟನೆ

“ನನ್ನ ಹೇಳಿಕೆಯನ್ನು ಬೇರೆ ರೀತಿಯಲ್ಲಿ ಅರ್ಥೈಸಿಕೊಳ್ಳಬೇಡಿ. ರಾಷ್ಟ್ರೀಯವಾದಿಗಳು ಈ ರಾಷ್ಟ್ರ ಮತ್ತು ಬಂಗಾಳದ ಪರವಾಗಿ ನಿಲ್ಲುತ್ತಾರೆ. ನಾವು ಅವರೊಂದಿಗೆ ಇರಬೇಕು ಎಂದು ಹೇಳಿದ್ದೇನೆ ನಮ್ಮೊಂದಿಗೆ ನಿಲ್ಲದವರು ರಾಷ್ಟ್ರ ಮತ್ತು ಬಂಗಾಳದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಾರೆ. ಮಮತಾ ಬ್ಯಾನರ್ಜಿಯವರಂತೆ ನಾವು ಜನರನ್ನು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರು ಎಂದು ವಿಭಜಿಸಬಾರದು. ನಾವು ಎಲ್ಲರನ್ನೂ ಭಾರತೀಯರು ಎಂದು ನೋಡುತ್ತೇವೆ. ನಾನು ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ಕಾ ಪ್ರಯಾಸ್ ನ್ನು ವಾಚಾ, ಮನಸಾ ಪಾಲಿಸುತ್ತೇನೆ ಎಂದು ಸುವೆಂದು ಅಧಿಕಾರಿ ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಪಶ್ಚಿಮ ಬಂಗಾಳದ ಮತದಾರರಲ್ಲಿ ಸುಮಾರು 30 ಪ್ರತಿಶತದಷ್ಟು ಅಲ್ಪಸಂಖ್ಯಾತರು ಇದ್ದಾರೆ.

2014ರಲ್ಲಿ ಬಿಜೆಪಿಯ ಘೋಷಣೆ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಆಗಿತ್ತು. 2019ರಲ್ಲಿ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್’ ಆಗಿತ್ತು. ಇತ್ತೀಚೆಗಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ, “ಹಲವು ಪ್ರದೇಶಗಳಲ್ಲಿ ಟಿಎಂಸಿಯ ಜಿಹಾದಿ ಗೂಂಡಾಗಳು” ಹಿಂದೂಗಳಿಗೆ ಮತ ಚಲಾಯಿಸಲು ಅವಕಾಶ ನೀಡಲಿಲ್ಲ ಎಂದ ಸುವೇಂದು ಪಶ್ಚಿಮ ಬಂಗಾಳದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

“ಟಿಎಂಸಿಯ ಜಿಹಾದಿ ಗೂಂಡಾಗಳು ಇದಕ್ಕೆ ಅವಕಾಶ ನೀಡುವುದಿಲ್ಲ. ರಾಜ್ಯದಲ್ಲಿ ವಿಚಲಿತ ಪ್ರದೇಶಗಳ ಕಾಯ್ದೆಯನ್ನು ಜಾರಿಗೊಳಿಸುವುದರಿಂದ ಮಾತ್ರ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಸಾಧ್ಯ. ರಾಷ್ಟ್ರಪತಿ ಆಳ್ವಿಕೆಯ ಹಿಂಬಾಗಿಲ ಅನುಷ್ಠಾನದ ಮೂಲಕ ರಾಜ್ಯದಲ್ಲಿ ಅಧಿಕಾರ ಹಿಡಿಯಲು ನಾವು ಬಯಸುವುದಿಲ್ಲ”

ಇದನ್ನೂ ಓದಿ: ಕರ್ನಾಟಕದಂತೆ ಸ್ಥಳೀಯರಿಗೆ ಉದ್ಯೋಗದಲ್ಲಿ ಶೇ 75 ಮೀಸಲಾತಿ ಮಸೂದೆ ತಂದಿತ್ತು ಹರ್ಯಾಣ ಸರ್ಕಾರ; ಆಮೇಲೇನಾಯ್ತು?

“ಜನರ ಆದೇಶದೊಂದಿಗೆ ನಾವು ಚುನಾವಣೆಯಲ್ಲಿ ಗೆದ್ದಾಗ ನಾವು ಅಧಿಕಾರಕ್ಕೆ ಬರುತ್ತೇವೆ, ಆದರೆ ಅದಕ್ಕಾಗಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಅವರು ಹೇಳಿದರು. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷವು ಉಪಚುನಾವಣೆಯಲ್ಲಿ ಸೋತ ಕೆಲವು ದಿನಗಳ ನಂತರ ಅವರ ಹೇಳಿಕೆಗಳು ಬಂದಿವೆ. ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಎಲ್ಲಾ ಮೂರು ಸ್ಥಾನಗಳನ್ನು ಗೆದ್ದಿದೆ. ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ 29 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ ಕೇವಲ 12 ಸ್ಥಾನಗಳನ್ನು ಗೆದ್ದಿದೆ.

ಸುವೇಂದು ಅಧಿಕಾರಿ ವಿರುದ್ಧ ಟಿಎಂಸಿ ವಾಗ್ದಾಳಿ

ಬಿಜೆಪಿ ಪ್ರಜಾಪ್ರಭುತ್ವದ ವಿರುದ್ಧವಾಗಿದೆ ಎಂದು ಟಿಎಂಸಿ ನಾಯಕ ಕುನಾಲ್ ಘೋಷ್ ಹೇಳಿದ್ದಾರೆ. “ಅವರು (ಬಿಜೆಪಿ) ಅಲ್ಪಸಂಖ್ಯಾತರ ಮೋರ್ಚಾ ಇರಬಾರದು ಎಂದು ಹೇಳುತ್ತಿದ್ದಾರೆ, ಅದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ, ಇಲ್ಲಿ ಹಿಂದೂ ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಮತ್ತು ಎಲ್ಲಾ ಪ್ರಜಾಪ್ರಭುತ್ವ ಪಕ್ಷಗಳು ಅಲ್ಪಸಂಖ್ಯಾತರ ಘಟಕ ಹೊಂದಿದೆ. ಅದು (ಬಿಜೆಪಿ) ಪ್ರಜಾಸತ್ತಾತ್ಮಕ ಪಕ್ಷವಾಗಿದ್ದಿದ್ದರೆ ನಮ್ಮ ಪಕ್ಷ ಎಲ್ಲರಿಗೂ ಎಂದು ಹೇಳುತ್ತಿತ್ತು ಎಂದು ಘೋಷ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್