AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LK Advani Health Updates: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲು

ಮಾಜಿ ಉಪಪ್ರಧಾನಿ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ (ಬಿಜೆಪಿ)ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಈಗ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂದೆಯೂ ಅವರನ್ನು ಅಪೋಲೋ ಆಸ್ಪತ್ರೆ ದಾಖಲಾಸಲಾಗಿತ್ತು. ಆದರೆ ಆ ಸಮಯದಲ್ಲಿ ಆರೋಗ್ಯ ಸುಧಾರಿಸಿಕೊಂಡು ವಾಪಸ್ಸು ಆಗಿದ್ದರು. ಈ ಬಾರಿಯೂ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

LK Advani Health Updates: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲು
ಲಾಲ್ ಕೃಷ್ಣ ಅಡ್ವಾಣಿ
ಅಕ್ಷಯ್​ ಪಲ್ಲಮಜಲು​​
|

Updated on:Dec 14, 2024 | 11:21 AM

Share

ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ (ಬಿಜೆಪಿ) ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ತಮ್ಮ 97ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅಡ್ವಾಣಿ, ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದು ಜುಲೈ ನಂತರ ಅವರ ನಾಲ್ಕನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದೆ. ಅವರು ಈ ಹಿಂದೆ ಅಪೋಲೋ ಆಸ್ಪತ್ರೆ ಮತ್ತು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಎರಡರಲ್ಲೂ ಚಿಕಿತ್ಸೆ ಪಡೆದಿದ್ದರು.

ಬಿಜೆಪಿ ವಕ್ತಾರ ಕೆ ಕೃಷ್ಣ ಸಾಗರ್ ರಾವ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ, ಅಡ್ವಾಣಿ ಅವರನ್ನು “ನಮ್ಮ ಎತ್ತರದ ನಾಯಕ” ಎಂದು ಕರೆದಿದ್ದಾರೆ. ಎಲ್.ಕೆ. ಅಡ್ವಾಣಿ ಅವರು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಅವರು ಉತ್ತಮ, ಆರೋಗ್ಯಕರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಎಕ್ಸ್​​​​ನಲ್ಲಿ ಬರೆದುಕೊಂಡಿದ್ದಾರೆ.

ನವೆಂಬರ್ 8, 1927 ರಂದು ಕರಾಚಿಯಲ್ಲಿ ಜನಿಸಿದ ಶ್ರೀ ಅಡ್ವಾಣಿ ಅವರು 1942 ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಗೆ ಸೇರಿದರು.ಬಿಜೆಪಿಯ ಪ್ರಮುಖ ವಾಸ್ತುಶಿಲ್ಪಿ ಎಂದು ಕೂಡ ಕರೆಯಾಗುತ್ತದೆ. ಸುದೀರ್ಘ ಸೇವೆ ಸಲ್ಲಿಸಿದ ಅವರು ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದರು, ಗೃಹ ಸಚಿವರಾಗಿ ಮತ್ತು ನಂತರ 1999 ಮತ್ತು 2004ರಲ್ಲಿ ಉಪಪ್ರಧಾನಿಯಾಗಿ ಕೂಡ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಎಲ್​​ಕೆ ಅಡ್ವಾಣಿಗೆ ಭಾರತ ರತ್ನ: ಪ್ರಧಾನಿ ಮೋದಿ ಘೋಷಣೆ

ಈ ವರ್ಷದ ಮಾರ್ಚ್‌ನಲ್ಲಿ, ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೀಡಿದರು.

ದೇಶದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:05 am, Sat, 14 December 24