70 ವರ್ಷ ಮೇಲ್ಪಟ್ಟವರು ಆಯುಷ್ಮಾನ್ ಯೋಜನೆಗೆ ಆ್ಯಪ್ ಮೂಲಕವೂ ಅರ್ಜಿ ಸಲ್ಲಿಸಬಹುದು
ಕೇವಲ ಆನ್ಲೈನ್ ಮಾತ್ರವಲ್ಲ ಮೊಬೈಲ್ ಅಪ್ಲಿಕೇಷನ್ ಮೂಲಕವೂ 70 ವರ್ಷ ಮೇಲ್ಪಟ್ಟವರು ಆಯುಷ್ಮಾನ್ ಭಾರತ್ ವಿಮಾ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಮುಂದಿನ ಒಂದು ತಿಂಗಳೊಳಗಾಗಿ ಆ್ಯಪ್ ಬಿಡುಗಡೆಯಾಗಲಿದೆ.
ಎಪ್ಪತ್ತು ವರ್ಷ ಮೇಲ್ಪಟ್ಟವರನ್ನೂ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ ವ್ಯಾಪ್ತಿಗೆ ಇದೀಗ ತರಲಾಗುತ್ತಿದೆ. ಆರೋಗ್ಯ ಸಚಿವಾಲಯದಿಂದ ಪಡೆದ ಮಾಹಿತಿಯ ಪ್ರಕಾರ, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಪ್ರಯೋಜನಗಳನ್ನು ಪಡೆಯಲು, 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಮೊಬೈಲ್ ಅಪ್ಲಿಕೇಶನ್ ಮೂಲಕವೂ ಅರ್ಜಿ ಸಲ್ಲಿಸಬಹುದು.
ಇನ್ನು ಒಂದು ತಿಂಗಳಲ್ಲಿ ಆ್ಯಪ್ ಬಿಡುಗಡೆಯಾಗಲಿದ್ದು, ಕೇಂದ್ರ ಸರ್ಕಾರ ಕೂಡ ಈ ಬಗ್ಗೆ ಅಭಿಯಾನ ಆರಂಭಿಸಲಿದೆ. ಆಧಾರ್ ಕಾರ್ಡ್ ಆಧಾರದ ಮೇಲೆ ತೆರೆಯಲಾಗುತ್ತದೆ, ದೆಹಲಿ, ಒಡಿಶಾ, ಪಶ್ಚಿಮ ಬಂಗಾಳ ಸರ್ಕಾರಗಳು ಯೋಜನೆ ಜಾರಿಗೊಳಿಸದ ಕಾರಣ ಈ ರಾಜ್ಯಗಳ ಜನರು ಆಯುಷ್ಮಾನ್ ಯೋಜನೆಯ ಪ್ರಯೋಜನ ಪಡೆಯಲು ಸಾಧ್ಯವಿಲ್ಲ.
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು 70 ವರ್ಷಕ್ಕಿಂತ ಮೇಲ್ಪಟ್ಟ ದೇಶದ ಎಲ್ಲಾ ಹಿರಿಯ ನಾಗರಿಕರನ್ನು ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗುವುದು ಎಂದು ಬುಧವಾರ ಹೇಳಿದ್ದಾರೆ.
ಮತ್ತಷ್ಟು ಓದಿ: ಐದು ಲಕ್ಷ ಕವರೇಜ್ ನೀಡುವ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್ಗೆ ಅರ್ಜಿ ಸಲ್ಲಿಕೆ, ಅರ್ಹತೆ, ದಾಖಲೆ ಇತ್ಯಾದಿ ವಿವರ
70 ವರ್ಷಕ್ಕಿಂತ ಮೇಲ್ಪಟ್ಟ ದೇಶದ ಎಲ್ಲಾ ಹಿರಿಯ ನಾಗರಿಕರು ಪ್ರತಿ ವರ್ಷ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯುತ್ತಾರೆ. ಈ ಯೋಜನೆಯಡಿಯಲ್ಲಿ, ದೇಶದ ಬಡ ಕುಟುಂಬಗಳು ಪ್ರತಿ ವರ್ಷ 5 ಲಕ್ಷ ರೂಪಾಯಿಗಳ ಆರೋಗ್ಯ ವಿಮೆಯನ್ನು ಪಡೆಯುತ್ತವೆ. ಆದರೆ ಈಗ 70 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಈ ಯೋಜನೆಯ ಪ್ರಯೋಜನವನ್ನು ಪಡೆಯುತ್ತಾರೆ, ಅವರ ಆದಾಯ ಎಷ್ಟಿದ್ದರೂ ಸಮಸ್ಯೆಯಿಲ್ಲ. ಸರ್ಕಾರದ ಈ ನಿರ್ಧಾರದಿಂದ ದೇಶಾದ್ಯಂತ 6 ಕೋಟಿ ಹಿರಿಯ ನಾಗರಿಕರು ಯೋಜನೆಯ ಲಾಭ ಪಡೆಯಲಿದ್ದಾರೆ.
ಒಂದೇ ಕುಟುಂಬದ ಎಷ್ಟು ಜನರು ಆಯುಷ್ಮಾನ್ ಕಾರ್ಡ್ ಅನ್ನು ಪಡೆಯಬಹುದು ಎಂಬುದು ಸಾಕಷ್ಟು ಮಂದಿಗೆ ತಿಳಿದಿಲ್ಲ. ಅಲ್ಲದೆ, ಈ ಸರ್ಕಾರಿ ಯೋಜನೆಯ ಫಲಾನುಭವಿಯಾಗುವವರಿಗೆ ಯಾವುದೇ ಮಿತಿ ನಿಗದಿಪಡಿಸಿಲ್ಲ. ಕುಟುಂಬ ಎಲ್ಲಾ ಸದಸ್ಯರು ಈ ಯೋಜನೆ ಪ್ರಯೋಜನ ಪಡೆಯಬಹುದು ಹೀಗೂ ಅರ್ಜಿ ಸಲ್ಲಿಸಬಹುದು
ಆನ್ಲೈನಲ್ನಲ್ಲಿ ಅರ್ಜಿ ಸುವುದು ಹೇಗೆ? ಹಂತ 1: pmjay.gov.in ಅಧಿಕೃತ ವೆಬ್‌ಸೈಟ್ ಓಪನ್ ಮಾಡಿ.
ಹಂತ 2: ಆಮ್ ಐ ಎಲಿಜಿಬಲ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಹಂತ 3: ಕ್ಯಾಪ್ಚಾ ಎಂಟರ್ ಮಾಡಬೇಕು, ಅದರ ಕೆಳಗೆ 10 ಅಂಕಿಯ ಮೊಬೈಲ್ ಸಂಖ್ಯೆ ನಮೂದಿಸಿ ಒಟಿಪಿ ಪಡೆಯಬೇಕು. ಹಂತ 4: ಒಟಿಪಿ ಎಂಟರ್ ಮಾಡಿದ ನಂತರ ಮತ್ತೊಂದು ಕ್ಯಾಪ್ಚಾ ನಮೂದಿಸಬೇಕು.
ಹಂತ 5: ಈಗ ಪರದೆಯ ಮೇಲೆ ನಿಮ್ಮ ರಾಜ್ಯವನ್ನು ಆಯ್ಕೆ ಮಾಡಿ, ನಂತರ ಮೊಬೈಲ್ ಸಂಖ್ಯೆ ಮತ್ತು ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ.
ಹಂತ 6: ಬಳಿಕ ನೀವು ಅರ್ಹರಾಗಿದ್ದೀರಾ ಅಥವಾ ಇಲ್ಲವೇ ಎಂಬುದು ನಿಮ್ಮ ಪರದೆಯ ಮೇಲೆ ಕಾಣುತ್ತದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ