Mallikarjuna Kharge Threat call ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ನಿಮ್ಮನ್ನು ಬಿಡಲ್ಲ -ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ

ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ನಿಮ್ಮನ್ನು ಬಿಡಲ್ಲ. ಪ್ರಧಾನಿ ಮೋದಿಯವರ ವಿರುದ್ಧ ಯಾಕೆ ಮಾತಾಡುತ್ತೀರಾ? ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದಿದೆ. Mallikarjuna Kharge gets threat call

Mallikarjuna Kharge Threat call ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ನಿಮ್ಮನ್ನು ಬಿಡಲ್ಲ -ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ
ಮಲ್ಲಿಕಾರ್ಜುನ ಖರ್ಗೆ
Follow us
KUSHAL V
|

Updated on:Feb 08, 2021 | 6:46 PM

ದೆಹಲಿ: ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ನಿಮ್ಮನ್ನು ಬಿಡಲ್ಲ. ಪ್ರಧಾನಿ ಮೋದಿಯವರ ವಿರುದ್ಧ ಯಾಕೆ ಮಾತಾಡುತ್ತೀರಾ? ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದಿದೆ. Mallikarjuna Kharge gets threat call

ಮಧ್ಯಪ್ರದೇಶದಿಂದ ಮಲ್ಲಿಕಾರ್ಜುನ ಖರ್ಗೆಗೆ ಅಪರಿಚಿತರಿಂದ ಬೆದರಿಕೆ ಕರೆ ಬಂದಿದೆ. ಮೋದಿ ವಿರುದ್ಧ ಮಾತನಾಡದಂತೆ ಹಿರಿಯ ಮುಖಂಡನಿಗೆ ಬೆದರಿಕೆ ಕರೆ ಬಂದಿದೆ.

ಇನ್ನು ಖರ್ಗೆ ಅವರಿಗೆ ಬಂದ ಫೋನ್​ ಕಾಲ್​ನಲ್ಲಿ ನಾವು ನಿಮ್ಮನ್ನು ಸರಿಯಾದ ರೀತಿಯಲ್ಲಿ ನೋಡಿಕೊಳ್ಳುತ್ತೇವೆ ಎಂದು ಬೆದರಿಸಿದ ಅಪರಿಚಿತ ಬಳಿಕ ಮುಖಂಡರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಸದ್ಯ, ಈ ಕುರಿತು, ದೆಹಲಿಯ ತುಘಲಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್​ ಸಂಸದ ನಾಸಿರ್ ಹುಸೇನ್ ಪ್ರಧಾನಿ ಮೋದಿ ಭಾಷಣದ ಬಳಿಕ ಸುದ್ದಿಗೋಷ್ಠಿ ನಡೆಸಿದ್ದೆವು. ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿದ್ದೆವು. ಈ ಸುದ್ದಿಗೋಷ್ಠಿಯ ಬಳಿಕ ಮಧ್ಯಪ್ರದೇಶದಿಂದ ಕರೆ ಬಂದಿದೆ. ಖರ್ಗೆಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ್ದಾರೆ. ಖರ್ಗೆ ಜೀವಕ್ಕೆ ಹಾನಿ ಮಾಡುವ ಬೆದರಿಕೆ ಹಾಕಲಾಗಿದೆ ಎಂದು ಹೇಳಿದರು.

ಹಿಂದೆಯೂ ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ ಬಂದಿತ್ತು. ಆಗಲೂ FIR ದಾಖಲಾಗಿತ್ತು. ಆದರೆ ಯಾವುದೇ ಕ್ರಮ ಆಗಿಲ್ಲ. ಒಟ್ಟು 3 ಬಾರಿ ಖರ್ಗೆಯವರಿಗೆ ಬೆದರಿಕೆ ಕರೆ ಬಂದಿದೆ. ಆದರೆ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ. ಈಗಲೂ ಸಹ ದೂರು ನೀಡುತ್ತಿದ್ದೇವೆ ಎಂದು ನಾಸಿರ್ ಹುಸೇನ್ ಹೇಳಿದರು.

BBMP Director ACB raid ಕಂತೆ ಕಂತೆ ನೋಟು, ಸ್ಟಾಂಪ್, ದುಬಾರಿ ಕಾರುಗಳು, ಮದ್ಯದ ಬಾಟಲಿಗಳು -ಇದು BBMP ಸಹಾಯಕ ನಿರ್ದೇಶಕನ ಕಾರು ಬಾರು

Published On - 6:38 pm, Mon, 8 February 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ