Sign In

By signing in or creating an account, you agree with Associated Broadcasting Company's Terms & Conditions and Privacy Policy.

Anandolan Jeevi: ಆಂದೋಲನ ಜೀವಿಯಾಗಿದ್ದಕ್ಕೆ ಹೆಮ್ಮೆ ಪಡುತ್ತೇನೆ: ಕಾಂಗ್ರೆಸ್ ನಾಯಕ ಪಿ.ಚಿದಂಬರಂ

Anandolanjeevi: ನಾನು ಆಂದೋಲನ ಜೀವಿ ಎಂದು ಹೇಳಲು ಹೆಮ್ಮೆ ಪಡುತ್ತೇನೆ. ಮಹಾತ್ಮ ಗಾಂಧೀಜಿ ಶ್ರೇಷ್ಠ ಆಂದೋಲನ ಜೀವಿ ಎಂದು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಟ್ವೀಟ್ ಮಾಡಿದ್ದಾರೆ.

Anandolan Jeevi: ಆಂದೋಲನ ಜೀವಿಯಾಗಿದ್ದಕ್ಕೆ ಹೆಮ್ಮೆ ಪಡುತ್ತೇನೆ: ಕಾಂಗ್ರೆಸ್ ನಾಯಕ ಪಿ.ಚಿದಂಬರಂ
ಪಿ. ಚಿದಂಬರಂ (ಸಂಗ್ರಹ ಚಿತ್ರ)
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 10, 2021 | 3:57 PM

ನವದೆಹಲಿ: ಆಂದೋಲನ ಜೀವಿಯಾಗಿದ್ದಕ್ಕೆ ನಾನು ಹೆಮ್ಮೆ ಪಡುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನೇತಾರ ಪಿ.ಚಿದಂಬರಂ ಹೇಳಿದ್ದಾರೆ. ಎರಡು ದಿನಗಳ ಹಿಂದೆ ರಾಜ್ಯಸಭೆಯಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಆಂದೋಲನ ಜೀವಿಗಳು ಪ್ರತೀ ಪ್ರತಿಭಟನೆಯಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ಹೇಳಿದ್ದರು. ಪ್ರಧಾನಿಯವರು ಉಲ್ಲೇಖಿಸಿದ ‘ಆಂದೋಲನ ಜೀವಿ’ ಎಂಬ ಪದದ ಬಗ್ಗೆ ವ್ಯಾಪಕ ಚರ್ಚೆ ಆಗಿತ್ತು.

ಮೋದಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಚಿದಂಬರಂ ನಾನು ಆಂದೋಲನ ಜೀವಿ ಎಂದು ಹೇಳಲು ಹೆಮ್ಮೆ ಪಡುತ್ತೇನೆ. ಮಹಾತ್ಮ ಗಾಂಧೀಜಿ ಶ್ರೇಷ್ಠ ಆಂದೋಲನ ಜೀವಿ ಎಂದು ಟ್ವೀಟ್ ಮಾಡಿ #iamanandolanjeevi ಎಂಬ ಹ್ಯಾಷ್​ಟ್ಯಾಗ್ ಬಳಸಿದ್ದಾರೆ.

ಸೋಮವಾರ ಸಂಸತ್ತಿನಲ್ಲಿ ರಾಷ್ಟ್ರಪತಿ ಭಾಷಣಕ್ಕೆ ಧನ್ಯವಾದ ಅರ್ಪಿಸಿ ಮಾತನಾಡಿದ ನರೇಂದ್ರ ಮೋದಿ ಇದೀಗ ಹೊಸ ವರ್ಗದ ಜನರು ಕಾಣಿಸಿಕೊಳ್ಳುತ್ತಿದ್ದಾರೆ. ಎಲ್ಲಿ ಪ್ರತಿಭಟನೆ ನಡೆಯುತ್ತಿರುತ್ತೋ ಅಲ್ಲಿ ಅವರು ಕಾಣಿಸುತ್ತಾರೆ. ಅದು ವಕೀಲರ ಪ್ರತಿಭಟನೆ, ವಿದ್ಯಾರ್ಥಿಗಳ ಪ್ರತಿಭಟನೆ ಅಥವಾ ಕಾರ್ಮಿಕರದ್ದೇ ಪ್ರತಿಭಟನೆಯಾಗಿರಲಿ. ಅಲ್ಲಿ ಅವರು ಕಾಣಿಸಿಕೊಳ್ಳುತ್ತಾರೆ. ಪ್ರತಿಭಟನೆಗಳನ್ನು ಬಿಟ್ಟು ಅವರು ಬದುಕುವುದೇ ಇಲ್ಲ. ನಾವು ಅಂಥವರನ್ನು ಗುರುತಿಸಿ, ದೇಶವನ್ನು ಅವರಿಂದ ರಕ್ಷಿಸಬೇಕಿದೆ. ಅವರು ಒಂದು ರೀತಿಯ ಪರಾವಲಂಬಿ ಜೀವಿಗಳು ಎಂದು ಹೇಳಿದ್ದರು.

ದೆಹಲಿಯ ಗಡಿಪ್ರದೇಶವಾದ ಸಿಂಘು , ಟಿಕ್ರಿ ಮತ್ತು ಗಾಜಿಪುರ್ ನಲ್ಲಿ ಸಾವಿರಾರು ರೈತರು ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ 11 ಬಾರಿ ಮಾತುಕತೆ ನಡೆಸಿದರೂ ಸಫಲವಾಗಿಲ್ಲ.

ಪಿ.ಚಿದಂಬರಂ ಟ್ವೀಟ್​ ಇಲ್ಲಿದೆ..

ಇದನ್ನೂ ಓದಿ: ಏನಿದು ಆಂದೋಲನ​ ಜೀವಿ? ಪ್ರಧಾನಿ ಮೋದಿ ಬಳಕೆ ಮಾಡಿದ ಹೊಸ ಶಬ್ದದ ಅರ್ಥವೇನು?

Published On - 3:56 pm, Wed, 10 February 21

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ