AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನ ಹದಿಹರೆಯದ ಮಗಳ ಮೇಲೆ ಅತ್ಯಾಚಾರವೆಸಗಿದ ದೆಹಲಿ ಅಧಿಕಾರಿ, ಗರ್ಭಪಾತಕ್ಕೆ ಪತ್ನಿ ಸಹಕಾರ: ಕೇಸು ದಾಖಲು

2020 ಮತ್ತು 2021 ರ ನಡುವೆ ಈತ ಬಾಲಕಿ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಾಲಕಿ ಗರ್ಭಿಣಿಯಾದಾಗ, ಆರೋಪಿಯು ಈ ಹೆಂಡತಿಗೆ ಹೇಳಿದ್ದಾನೆ . ಅಧಿಕಾರಿಯ ಪತ್ನಿ ತಮ್ಮ ಮಗನಲ್ಲಿ ಔಷಧಿ ತರಲು ಹೇಳಿ ಮನೆಯಲ್ಲಿಯೇ ಗರ್ಭಪಾತ ಮಾಡಿದ್ದಾರೆ ಎಂದು ಅಪ್ರಾಪ್ತ ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಸ್ನೇಹಿತನ ಹದಿಹರೆಯದ ಮಗಳ ಮೇಲೆ ಅತ್ಯಾಚಾರವೆಸಗಿದ ದೆಹಲಿ ಅಧಿಕಾರಿ, ಗರ್ಭಪಾತಕ್ಕೆ ಪತ್ನಿ ಸಹಕಾರ: ಕೇಸು ದಾಖಲು
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Aug 20, 2023 | 4:59 PM

Share

ದೆಹಲಿ ಆಗಸ್ಟ್ 20: ದೆಹಲಿ (Delhi) ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಮ್ಮ ಸ್ನೇಹಿತನ 14 ವರ್ಷದ ಮಗಳ ಮೇಲೆ ಹಲವು ತಿಂಗಳುಗಳ ಕಾಲ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇದೀಗ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣವನ್ನು ಎದುರಿಸುತ್ತಿದ್ದಾರೆ. ದೆಹಲಿ ಪೊಲೀಸರು ಹಿರಿಯ ಅಧಿಕಾರಿ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಹಲವಾರು ಸೆಕ್ಷನ್‌ಗಳು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪರಿಶೀಲಿಸಲು ಕಠಿಣ ಪೋಕ್ಸೊ ಕಾಯ್ದೆಯ (POCSO Act) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಮಗುವಿನ ಮೇಲಿನ ದೌರ್ಜನ್ಯಕ್ಕೆ ಸಹಾಯ ಮಾಡಿದ ಆರೋಪದ ಮೇಲೆ ಅಧಿಕಾರಿಯ ಪತ್ನಿಯ ಮೇಲೂ ಆರೋಪ ಹೊರಿಸಲಾಗಿದೆ.

ಬಾಲಕಿ 12ನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಆಕೆ 2020 ರಲ್ಲಿ ತನ್ನ ತಂದೆಯನ್ನು ಕಳೆದುಕೊಂಡಿದ್ದು, ಆಕೆಯನ್ನು ಈ ಅಧಿಕಾರಿ ಅವರ ಮನೆಗೆ ಕರೆ ತಂದಿದ್ದರು.

2020 ಮತ್ತು 2021 ರ ನಡುವೆ ಈತ ಬಾಲಕಿ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಾಲಕಿ ಗರ್ಭಿಣಿಯಾದಾಗ, ಆರೋಪಿಯು ಈ ಹೆಂಡತಿಗೆ ಹೇಳಿದ್ದಾನೆ . ಅಧಿಕಾರಿಯ ಪತ್ನಿ ತಮ್ಮ ಮಗನಲ್ಲಿ ಔಷಧಿ ತರಲು ಹೇಳಿ ಮನೆಯಲ್ಲಿಯೇ ಗರ್ಭಪಾತ ಮಾಡಿದ್ದಾರೆ ಎಂದು ಅಪ್ರಾಪ್ತ ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ತ್ರಿಪುರಾ: ವಿವಾಹೇತರ ಸಂಬಂಧ ಆರೋಪ; ಜೋಡಿಯನ್ನು ಇಲೆಕ್ಟ್ರಿಕ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ

ಸದ್ಯ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದು, ಮ್ಯಾಜಿಸ್ಟ್ರೇಟ್ ಮುಂದೆ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕಿದೆ. ಉನ್ನತ ಅಧಿಕಾರಿ ವಿರುದ್ಧದ ಗಂಭೀರ ಆರೋಪಗಳ ಕುರಿತು ದೆಹಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಕೌನ್ಸೆಲಿಂಗ್ ವೇಳೆ  ಘಟನೆಯನ್ನು ವಿವರಿಸಿದ ಬಾಲಕಿ ಇತ್ತೀಚೆಗೆ ಬಾಲಕಿ ಆತಂಕಕ್ಕೊಳಾಗಿಗಿ ಆಸ್ಪತ್ರೆಗೆ ದಾಖಲಾಗಿದ್ದಳು. ಈ ವೇಳೆ  ಆಪ್ತಸಮಾಲೋಚಕರಿಗೆ ಘಟನೆಯನ್ನು ವಿವರಿಸಿದಾಗ  ಈ  ವಿಷಯ ಬೆಳಕಿಗೆ ಬಂದಿದೆ.

ಪೊಲೀಸರ ಪ್ರಕಾರ, ಹುಡುಗಿ ತನ್ನ ತಾಯಿಯನ್ನು ಭೇಟಿಯಾಗಲು ಬಂದಾಗ 2021 ರ ಜನವರಿಯಲ್ಲಿ ಮನೆಗೆ ಮರಳಿದಳು. ಈ ವರ್ಷದ ಆಗಸ್ಟ್‌ನಲ್ಲಿ ಆಕೆಗೆ ಆಂತಕದ ಆಘಾತವಾಗಿತ್ತು.ಆಕೆಯ ತಾಯಿ ಅವಳನ್ನು ಸೇಂಟ್ ಸ್ಟೀಫನ್ಸ್ ಆಸ್ಪತ್ರೆಗೆ ದಾಖಲಿಸಿದರು, ಅಲ್ಲಿ ಹುಡುಗಿ ಕೌನ್ಸೆಲಿಂಗ್ ಸಮಯದಲ್ಲಿ ಇಡೀ ಘಟನೆಯನ್ನು ವಿವರಿಸಿದ್ದಾಳೆ ಎಂದು ಅಧಿಕಾರಿ ಹೇಳಿದ್ದಾರೆ.

ಆಸ್ಪತ್ರೆಯವರು ಬುರಾರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತನ್ನ ದೂರಿನಲ್ಲಿ, ಅಧಿಕಾರಿ ತನ್ನ ಮೇಲೆ ಹಲವಾರು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಅವನ ಹೆಂಡತಿ ಗರ್ಭಪಾತಕ್ಕಾಗಿ ಪಿಲ್ಸ್ ನೀಡಿದ್ದಾರೆ ಎಂದು ಬಾಲಕಿ ಹೇಳಿದ್ದಾಳೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Sun, 20 August 23

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು