Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಥಾಣೆಯಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊ ವೈರಲ್

ಇಂತಹ ವರ್ತನೆಯನ್ನು ನಾವು ಸಹಿಸುವುದಿಲ್ಲ ಹಿರಿಯ ವಿದ್ಯಾರ್ಥಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲೆ ಸುಚಿತ್ರಾ ನಾಯ್ಕ್ ತಿಳಿಸಿದ್ದಾರೆ.

ಮಹಾರಾಷ್ಟ್ರ: ಥಾಣೆಯಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊ ವೈರಲ್
ವೈರಲ್ ವಿಡಿಯೊದ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on: Aug 03, 2023 | 9:03 PM

ಮುಂಬೈ  ಆಗಸ್ಚ್ 03: ಮುಂಬೈ(Mumbai) ಸಮೀಪದ ಥಾಣೆಯ ಕೆಜಿ ಜೋಶಿ ಕಾಲೇಜ್ ಆಫ್ ಆರ್ಟ್ಸ್ ಮತ್ತು ಎನ್‌ಜಿ ಬೇಡಕರ್ ಕಾಲೇಜ್ ಆಫ್ ಕಾಮರ್ಸ್ (ಸ್ವಾಯತ್ತ)ದಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್ (NCC) ತರಬೇತಿ ವೇಳೆ ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮುಂಬೈನಲ್ಲಿ ಸುರಿಯುತ್ತಿರುವ ಮಳೆಯ ನಡುವೆ, ಎಂಟು ಯುವಕರನ್ನು ಕೆಸರು ನೀರಿನಲ್ಲಿ ಪುಶ್-ಅಪ್‌ ಮಾಡುವಂತೆ ಒತ್ತಾಯಿಸಲಾಗುತ್ತದೆ. ಆ ಹುಡುಗರ ಮುಖವನ್ನು ನೀರಲ್ಲಿ ಮುಳುಗಿಸಿ ಆಮೇಲೆ ಯುವಕನೊಬ್ಬ ದೊಡ್ಡ ಕೋಲಿನಿಂದ ಅವರ ಬೆನ್ನಿಗೆ ಬಾರಿಸುತ್ತಿರುವುದು ವಿಡಿಯೊದಲ್ಲಿದೆ.

ಕೋಲು ಹಿಡಿದು ಬಾರಿಸುತ್ತಿರುವವ ಹಿರಿಯ ಎನ್‌ಸಿಸಿ ಕೆಡೆಟ್. ಕಠಿಣ ಕಸರತ್ತನ್ನು ಪೂರ್ಣಗೊಳಿಸಲು ವಿಫಲರಾದ ಎನ್‌ಸಿಸಿ ಕೆಡೆಟ್‌ಗಳಿಗೆ ಈ ರೀತಿ ಶಿಕ್ಷೆ ನೀಡಲಾಗಿದ್ದು, ಇದನ್ನು ಕಾಲೇಜಿನ ವಿದ್ಯಾರ್ಥಿಯೊಬ್ಬ ಮೊಬೈಲ್ ಫೋನ್ ನಲ್ಲಿ ಚಿತ್ರೀಕರಿಸಿದ್ದಾನೆ.

ಇಂತಹ ವರ್ತನೆಯನ್ನು ನಾವು ಸಹಿಸುವುದಿಲ್ಲ ಹಿರಿಯ ವಿದ್ಯಾರ್ಥಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲೆ ಸುಚಿತ್ರಾ ನಾಯ್ಕ್ ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ: ಮತದಾನದ ವೇಳೆ ವಿಪಕ್ಷ ಸಂಸದರಿಂದ ಸಭಾತ್ಯಾಗ

ಎನ್‌ಸಿಸಿ ಇಲ್ಲಿ ಸಾಕಷ್ಟು ಉತ್ತಮ ಕೆಲಸಗಳಲ್ಲಿ ತೊಡಗಿದೆ. ಸುಮಾರು 40 ವರ್ಷಗಳಿಂದ ಇಲ್ಲಿ ಎನ್‌ಸಿಸಿ ತರಬೇತಿ ನಡೆಯುತ್ತಿದೆ. ಶಿಕ್ಷಕರ ಅನುಪಸ್ಥಿತಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಮಾಡಿದ್ದನ್ನು ಮಾನಸಿಕ ಅಸ್ವಸ್ಥರು ಮಾತ್ರ ಮಾಡಬಲ್ಲರು ಎಂಬುದು ಈ ಕೃತ್ಯದಿಂದ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ