ಪಾಟ್ನಾದಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಪ್ಲಾನ್ ಮಾಡಿದ್ದ ಉಗ್ರರ ಬಂಧನ; 8 ಪುಟಗಳ ಪತ್ರದಲ್ಲಿತ್ತು ಶಾಕಿಂಗ್ ವಿಚಾರ

ಜಾರ್ಖಂಡ್​ನ ನಿವೃತ್ತ ಪೊಲೀಸ್ ಅಧಿಕಾರಿ ಜಲಾಲುದ್ದೀನ್ ಪಾಟ್ನಾದಲ್ಲಿರುವ ತನ್ನ ಮನೆಯಲ್ಲಿ ಉಗ್ರರಿಗೆ ಶಸ್ತ್ರಾಸ್ತ್ರಗಳ ಮತ್ತು ಮಾರ್ಷಲ್ ಆರ್ಟ್ಸ್​​ನ ತರಬೇತಿ ನೀಡುತ್ತಿದ್ದ. ಈ ತಂಡ ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಸಂಚು ರೂಪಿಸಿತ್ತು ಎನ್ನಲಾಗಿದೆ.

ಪಾಟ್ನಾದಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಪ್ಲಾನ್ ಮಾಡಿದ್ದ ಉಗ್ರರ ಬಂಧನ; 8 ಪುಟಗಳ ಪತ್ರದಲ್ಲಿತ್ತು ಶಾಕಿಂಗ್ ವಿಚಾರ
ನರೇಂದ್ರ ಮೋದಿ
Image Credit source: Hindustan Times
TV9kannada Web Team

| Edited By: Sushma Chakre

Jul 14, 2022 | 12:32 PM

ಪಾಟ್ನಾ: ಬಿಹಾರದ ಪಾಟ್ನಾದಲ್ಲಿ ಶಂಕಿತ ಭಯೋತ್ಪಾದಕರ ತಂಡವನ್ನು ಭೇದಿಸಲಾಗಿದ್ದು, ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಪೊಲೀಸರ ದಾಳಿಯ ವೇಳೆ 8 ಪುಟಗಳ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರಲ್ಲಿ 2047ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಬೇಕೆಂಬುದರ ಬಗ್ಗೆ ಬರೆಯಲಾಗಿದೆ. ಇದುವರೆಗೆ ಮೊಹಮ್ಮದ್ ಜಲಾವುದ್ದೀನ್ (Md Jalaluddin) ಮತ್ತು ಅತ್ತರ್ ಪರ್ವೇಜ್ (Athar Parvez) ಎಂಬ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಅಚ್ಚರಿಯ ಸಂಗತಿಯೆಂದರೆ, ಬಂಧಿತರಾಗಿರುವ ಜಲಾವುದ್ದೀನ್ ಜಾರ್ಖಂಡ್​ನ ನಿವೃತ್ತ ಪೊಲೀಸ್ ಅಧಿಕಾರಿಯಾಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರನ್ನು ಈ ಉಗ್ರರ ತಂಡ ಗುರಿಯಾಗಿಸಿಕೊಂಡಿತ್ತು, ಮೋದಿಯವರ ಹತ್ಯೆಗೆ ಸಂಚು ರೂಪಿಸಿತ್ತು ಎನ್ನಲಾಗಿದೆ.

ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಶಂಕಿತರನ್ನು ಬಂಧಿಸಲಾಗಿದೆ. ಬಿಹಾರ ರಾಜಧಾನಿ ಪಾಟ್ನಾದಲ್ಲಿ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ. ಜುಲೈ 12ರಂದು ಬಿಹಾರಕ್ಕೆ ಮೋದಿ ಭೇಟಿ ವೇಳೆ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಜುಲೈ 6, 7ರಂದು ಸಂಚು ರೂಪಿಸಲು ಸಭೆ ಕರೆದಿದ್ದರು. ಬಂಧಿತ ಶಂಕಿತರಿಂದ ಪಿಎಫ್​​ಐಗೆ ಸೇರಿದ 25 ಕರಪತ್ರ ವಶಕ್ಕೆ ಪಡೆಯಲಾಗಿದೆ.

ಜುಲೈ 12ರಂದು ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆ ಮಾಡುವ ಸಂಚು ಮಾಡಿದ್ದ ಉಗ್ರರು ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತರನ್ನು ಅತ್ತರ್ ಪರ್ವೇಜ್ ಮತ್ತು ಎಂಡಿ ಜಲಾಲುದ್ದೀನ್ ಎಂದು ಗುರುತಿಸಲಾಗಿದೆ. ಬಿಹಾರಕ್ಕೆ ಪ್ರಧಾನಿ ಮೋದಿ ಅವರ ಭೇಟಿಗೆ 15 ದಿನಗಳ ಮೊದಲು ಶಂಕಿತ ಭಯೋತ್ಪಾದಕರಿಗೆ ಫುಲ್ವಾರಿ ಷರೀಫ್‌ನಲ್ಲಿ ತರಬೇತಿ ನೀಡಲಾಗುತ್ತಿತ್ತು. ಅವರು ಜುಲೈ 6 ಮತ್ತು 7ರಂದು ಪ್ರಧಾನಿ ಮೋದಿಯನ್ನು ಗುರಿಯಾಗಿಸಲು ಸಂಚು ರೂಪಿಸಲು ಸಭೆಗಳನ್ನು ನಡೆಸಿದ್ದರು. ಶಂಕಿತ ಉಗ್ರರ ಫುಲ್ವಾರಿ ಷರೀಫ್ ಕಚೇರಿ ಮೇಲೆ ಬಿಹಾರ ಪೊಲೀಸರು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ; ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮ, ಇಬ್ಬರು ಪೊಲೀಸರಿಗೆ ಗಾಯ

ದಾಳಿಯ ಸಮಯದಲ್ಲಿ ಪೊಲೀಸರಿಗೆ ಅನೇಕ ಮಹತ್ವದ ದಾಖಲೆಗಳು ಸಿಕ್ಕಿವೆ. ‘2047ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ದೇಶವಾಗಿ ಮಾಡಬೇಕು’ ಎಂಬ ಬಗ್ಗೆ ಇರುವ 8 ಪುಟಗಳ ದಾಖಲೆಯನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಜಾರ್ಖಂಡ್​ನ ನಿವೃತ್ತ ಪೊಲೀಸ್ ಅಧಿಕಾರಿ ಜಲಾಲುದ್ದೀನ್ ಪಾಟ್ನಾದಲ್ಲಿರುವ ತನ್ನ ಮನೆಯಲ್ಲಿ ಉಗ್ರರಿಗೆ ಶಸ್ತ್ರಾಸ್ತ್ರಗಳ ಮತ್ತು ಮಾರ್ಷಲ್ ಆರ್ಟ್ಸ್​​ನ ತರಬೇತಿ ನೀಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಆ ಉಗ್ರರಿಂದ 25 ಪಿಎಫ್‌ಐ ಕರಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಟ್ನಾದ ಫುಲ್ವಾರಿ ಷರೀಫ್ ಪ್ರದೇಶದಲ್ಲಿ ಭಯೋತ್ಪಾದಕ ಘಟಕ ಕಾರ್ಯ ನಿರ್ವಹಿಸುತ್ತಿದೆ ಎಂದು ಗುಪ್ತಚರ ದಳಕ್ಕೆ ಮಾಹಿತಿ ಸಿಕ್ಕಿತ್ತು. ಹೀಗಾಗಿ, ಪೊಲೀಸರು ಮತ್ತು ಕೇಂದ್ರ ಏಜೆನ್ಸಿಗಳು ಜುಲೈ 11ರಂದು ನಯಾ ಟೋಲಾ ಪ್ರದೇಶದ ಮೇಲೆ ದಾಳಿ ನಡೆಸಿ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದಾರೆ.

ಈ ಸ್ಥಳಕ್ಕೆ ಭೇಟಿ ನೀಡಿದ್ದ ಹೆಚ್ಚಿನ ಯುವಕರು ಕೇರಳ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ತಮಿಳುನಾಡು ಮತ್ತು ಇತರ ಹಲವು ರಾಜ್ಯಗಳಿಂದ ಭಯೋತ್ಪಾದಕ ಸಂಚು ರೂಪಿಸಲು ತರಬೇತಿ ಪಡೆಯಲು ಬರುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಕಾಬೂಲ್ ಗುರುದ್ವಾರ ದಾಳಿಯ ಹೊಣೆ ಹೊತ್ತ ಐಸಿಸ್ ಉಗ್ರರು: ಮೃತರ ಸಂಖ್ಯೆಯನ್ನು ಮನಸೋಯಿಚ್ಛೆ ಹೆಚ್ಚಿಸಿ ಹೇಳಿದ ಭಯೋತ್ಪಾದಕರು

ಬಂಧಿತ ದಂಪತಿಗಳು ಪಾಕಿಸ್ತಾನ, ಬಾಂಗ್ಲಾದೇಶ, ಟರ್ಕಿ ಸೇರಿದಂತೆ ಹಲವು ಇಸ್ಲಾಮಿಕ್ ರಾಷ್ಟ್ರಗಳಿಂದ ದೇಶದಲ್ಲಿ ತಂಗಿದ್ದಾಗ ದೇಶವಿರೋಧಿ ಅಭಿಯಾನ ನಡೆಸಲು ಹಣ ಪಡೆಯುತ್ತಿದ್ದರು ಎಂಬ ವಿಚಾರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

“ಬಂಧಿತರನ್ನು ಜಾರ್ಖಂಡ್‌ನ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಜಲಾವುದ್ದೀನ್ ಮತ್ತು ಅಥರ್ ಪರ್ವೇಜ್ ಎಂದು ಗುರುತಿಸಲಾಗಿದೆ. ಅವರು PFI ಯೊಂದಿಗೆ ಸಂಪರ್ಕ ಹೊಂದಿದ್ದಾರೆ. ಜಲಾವುದ್ದೀನ್ ಈ ಹಿಂದೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI) ಯೊಂದಿಗೆ ಸಂಬಂಧ ಹೊಂದಿದ್ದರು” ಎಂದು ಫುಲ್ವಾರಿ ಷರೀಫ್ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್​ಪಿ) ಮನೀಶ್ ಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada