50 ಸಾವಿರ ಗಡಿ ದಾಟಿಯೇ ಬಿಟ್ಟಿತು ಭಾರತೀಯ ಷೇರು ಮಾರುಕಟ್ಟೆ ಸೂಚ್ಯಂಕ..! ರಿಲಯನ್ಸ್​, ಇನ್ಪೋಸಿಸ್​ ಷೇರುಗಳಿಗೆ ಹೆಚ್ಚು ಲಾಭ

ಮಹಾಮಾರಿ ಕೊರೊನಾ ನಡುವೆಯೂ ಷೇರುಪೇಟೆ ಸೂಚ್ಯಂಕ 50 ಸಾವಿರದ ಗಡಿ ದಾಟುವ ಮೂಲಕ ದಾಖಲೆ ಬರೆದಿದೆ. ಷೇರುಪೇಟೆ ಸೂಚ್ಯಂಕ 50,096ಕ್ಕೆ ಏರಿಕೆಯಾಗಿದ್ದು ಭಾರತೀಯ ಷೇರು ಮಾರುಕಟ್ಟೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.

50 ಸಾವಿರ ಗಡಿ ದಾಟಿಯೇ ಬಿಟ್ಟಿತು ಭಾರತೀಯ ಷೇರು ಮಾರುಕಟ್ಟೆ ಸೂಚ್ಯಂಕ..! ರಿಲಯನ್ಸ್​, ಇನ್ಪೋಸಿಸ್​ ಷೇರುಗಳಿಗೆ ಹೆಚ್ಚು ಲಾಭ
ಷೇರು ಮಾರುಕಟ್ಟೆಯಲ್ಲಿ ಭಾರಿ ದಾಖಲೆ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jan 21, 2021 | 9:41 AM

ಬೆಂಗಳೂರು: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರಿ ದಾಖಲೆ ಕಂಡು ಬಂದಿದೆ. ಷೇರುಪೇಟೆ ಸೂಚ್ಯಂಕ 50 ಸಾವಿರದ ಗಡಿ ದಾಟಿದೆ. ಕೊವಿಡ್ ಹೊಡೆತದ ನಡುವೆಯೂ ಷೇರುಪೇಟೆ ಹೊಸ ಮೈಲುಗಲ್ಲು ದಾಟಿದೆ.

ಮಹಾಮಾರಿ ಕೊರೊನಾ ನಡುವೆಯೂ ಷೇರುಪೇಟೆ ಸೂಚ್ಯಂಕ 50 ಸಾವಿರದ ಗಡಿ ದಾಟುವ ಮೂಲಕ ದಾಖಲೆ ಬರೆದಿದೆ. ಷೇರುಪೇಟೆ ಸೂಚ್ಯಂಕ 50,096ಕ್ಕೆ ಏರಿಕೆಯಾಗಿದ್ದು ಭಾರತೀಯ ಷೇರು ಮಾರುಕಟ್ಟೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ನರೇಂದ್ರ ಮೋದಿ 2019ರಲ್ಲಿ ಅಧಿಕಾರಕ್ಕೇರಿದಾಗ 38,000 ಸೂಚ್ಯಂಕ ಇತ್ತು. ಈಗ ಕೊವಿಡ್ ಸಂಕಟದ ಮಧ್ಯೆಯೂ ಷೇರುಪೇಟೆ ಚಿಗುರಿದೆ.

ಜೋ ಬೈಡೆನ್​ ಅತ್ತ ಅಮೆರಿಕಾದ ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇಂದು ಭಾರತೀಯ ಷೇರು ಪೇಟೆಯಲ್ಲಿ ನವ ಚೈತನ್ಯ ಪುಟಿದೆದ್ದಿದೆ. ಜೋ ಬೈಡೆನ್ ಅಧ್ಯಕ್ಷರಾಗುವ ಮೂಲಕ ಅಮೆರಿಕದಲ್ಲಿ ಅಸ್ಥಿರತೆ ದೂರವಾಗಿದ್ದು, ಹೊಸ ಯುಗಕ್ಕೆ ನಾಂದಿ ಹಾಡಿದಂತಿದೆ. ಇದೂ ಭಾರತದ ಷೇರುಪೇಟೆ ಮೇಲೆ ಪರಿಣಾಮ ಬೀರಿದೆ.

ಇದೇ ವೇಳೆ ನಿಫ್ಟಿ NIFTY ಸೂಚ್ಯಂಕ ಸಹ ಏರಿದ್ದು, 14,700ಕ್ಕೆ ಜಿಗಿದಿದೆ. ರಿಲಯನ್ಸ್​ ಇಂಡಸ್ಟ್ರೀಸ್ ಮತ್ತು ಇನ್ಪೋಸಿಸ್ ಕಂಪನಿಯ ಷೇರುಗಳು ಇದರ ಹೆಚ್ಚಿನ ಲಾಭ ಪಡೆದುಕೊಂಡಿವೆ.

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಇದು ಸೂಕ್ತ ಸಮಯವೇ? ಇಲ್ಲಿದೆ ಸಂಪೂರ್ಣ ಮಾಹಿತಿ

Published On - 9:33 am, Thu, 21 January 21

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್