AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Senthil Balaji: ಮದ್ರಾಸ್ ಹೈಕೋರ್ಟ್​ನ ವಿಭಜಿತ ಆದೇಶದ ವಿರುದ್ಧ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ ಸಚಿವ ಸೆಂಥಿಲ್ ಬಾಲಾಜಿ

ಸಚಿವ ವಿ ಸೆಂಥಿಲ್ ಬಾಲಾಜಿ ಮತ್ತು ಅವರ ಪತ್ನಿ ಮೇಗಾಲಾ ಅವರನ್ನು ಇ.ಡಿ ಕಸ್ಟಡಿಯಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಆದೇಶ ನೀಡಿದ ಮದ್ರಾಸ್ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್​ಗೆ ಸಚಿವ ವಿ ಸೆಂಥಿಲ್ ಬಾಲಾಜಿ ಮೇಲ್ಮನವಿ ಸಲ್ಲಿಸಿದ್ದಾರೆ.

Senthil Balaji: ಮದ್ರಾಸ್ ಹೈಕೋರ್ಟ್​ನ ವಿಭಜಿತ ಆದೇಶದ ವಿರುದ್ಧ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ ಸಚಿವ ಸೆಂಥಿಲ್ ಬಾಲಾಜಿ
ಸೆಂಥಿಲ್ ಬಾಲಾಜಿImage Credit source: Zee news
ಅಕ್ಷಯ್​ ಪಲ್ಲಮಜಲು​​
|

Updated on:Jul 18, 2023 | 2:20 PM

Share

ಚೆನ್ನೈ, ಜು.18: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಬಂಧನದಲ್ಲಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ (Senthil Balaji) ಮತ್ತು ಅವರ ಪತ್ನಿ ಮೇಗಾಲಾ ಅವರನ್ನು ಇ.ಡಿ ಕಸ್ಟಡಿಯಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ವಿಭಜಿತ ತೀರ್ಪು ನೀಡಿದ ಮದ್ರಾಸ್ ಹೈಕೋರ್ಟ್​ನ ವಿರುದ್ಧ ಸುಪ್ರೀಂ ಕೋರ್ಟ್​ಗೆ ಸಚಿವ ವಿ ಸೆಂಥಿಲ್ ಬಾಲಾಜಿ ಮೇಲ್ಮನವಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿಗಳಾದ ನಿಶಾ ಬಾನು ಮತ್ತು ಡಿ ಭರತ ಚಕ್ರವರ್ತಿ ಅವರು ವಿಭಜಿತ ತೀರ್ಪು ನೀಡಿದರು. ನ್ಯಾಯಮೂರ್ತಿ ನಿಶಾ ಬಾನು ಅವರು ಬಾಲಾಜಿ ಬಿಡುಗಡೆಗಾಗಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ ಮನವಿಯನ್ನು ಸಮರ್ಥನೀಯವಾಗಿದೆ, ಅವರನ್ನು ಬಿಡುಗಡೆ ಮಾಡಬಹುದು ಎಂದು ತಿಳಿಸಿದ್ದಾರೆ, ಆದರೆ ನ್ಯಾಯಮೂರ್ತಿ ಡಿ ಭರತ ಚಕ್ರವರ್ತಿ ಅವರು ನ್ಯಾಯಮೂರ್ತಿ ಬಾನು ಅವರ ಅಭಿಪ್ರಾಯವನ್ನು ಒಪ್ಪಲು ಸಾಧ್ಯವಿಲ್ಲ, ಎದೆನೋವಿಗೆ ಚಿಕಿತ್ಸೆ ಪಡೆಯುತ್ತಿರುವ ಬಾಲಾಜಿ ಆಸ್ಪತ್ರೆಯಲ್ಲಿರುವಷ್ಟು ದಿನ ಇಡಿ ಕಸ್ಟಡಿಯಿಂದ ಹೊರಗಿರಲಿದ್ದಾರೆ. ಅಷ್ಟರೊಳಗೆ ಬಾಲಾಜಿ ಫಿಟ್ ಆಗಿದ್ದರೆ ಹತ್ತು ದಿನಗಳಲ್ಲಿ ಮತ್ತೆ ಇಡಿ ಕಸ್ಟಡಿಗೆ ತೆರಳಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸೆಂಥಿಲ್ ಬಾಲಾಜಿ ಬಿಡುಗಡೆ ಕೋರಿ ಅರ್ಜಿ, ಮದ್ರಾಸ್ ಹೈಕೋರ್ಟ್​ನಿಂದ ವಿಭಜಿತ ತೀರ್ಪು

ಸೋಮವಾರ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಸೆಂಥಿಲ್ ಬಾಲಾಜಿ ಅವರನ್ನು ಚೆನ್ನೈನ ಪುಝಲ್ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಯಿದೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಇಡಿ ಬಾಲಾಜಿ ಅವರನ್ನು ಬಂಧಿಸಿತ್ತು. ಇತ್ತೀಚೆಗೆ ನ್ಯಾಯಾಲಯ ಅವರ ಬಂಧನವನ್ನು ಜುಲೈ 26 ರವರೆಗೆ ವಿಸ್ತರಿಸಿತ್ತು.

ಜೂನ್​​ 12ರಂದು ಜಾರಿ ನಿರ್ದೇಶನಾಲಯ ಸಚಿವ ವಿ ಸೆಂಥಿಲ್ ಬಾಲಾಜಿ ಮನೆ ಮತ್ತು ಅವರ ಆಪ್ತರ ಮೇಲೆ ದಾಳಿ ನಡೆಸಿತ್ತು, ನಂತರ ಎಐಎಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದಾಗ ನಡೆದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸುಮಾರು 19 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇ.ಡಿ ಅಧಿಕಾರಿಗಳು ಅವರನ್ನು ಬಂಧಿಸಿದರು.

Published On - 1:50 pm, Tue, 18 July 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ