2017ರ ಭಯೋತ್ಪಾದನೆ ಪ್ರಕರಣ: ದೆಹಲಿ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡ ಯಾಸಿನ್ ಮಲಿಕ್

ಈ ಪ್ರಕರಣದಲ್ಲಿ ಮಲಿಕ್ ಮತ್ತು ಇತರರ ವಿರುದ್ಧ ಯುಎಪಿಎ ಅಡಿಯಲ್ಲಿ ಆರೋಪಗಳನ್ನು ಹೊರಿಸುವಂತೆ ನ್ಯಾಯಾಲಯವು ಈ ವರ್ಷದ ಮಾರ್ಚ್‌ನಲ್ಲಿ ಆದೇಶಿಸಿತ್ತು.

2017ರ ಭಯೋತ್ಪಾದನೆ ಪ್ರಕರಣ: ದೆಹಲಿ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡ ಯಾಸಿನ್ ಮಲಿಕ್
ಯಾಸಿನ್ ಮಲಿಕ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 10, 2022 | 10:36 PM

2017 ರ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸಂಬಂಧಿಸಿದ  ಪ್ರಕರಣಗಳಲ್ಲಿ ಪ್ರತ್ಯೇಕತಾವಾದಿ ನಾಯಕ ಮೊಹಮ್ಮದ್ ಯಾಸಿನ್ ಮಲಿಕ್ (Mohammad Yasin Malik)ಮಂಗಳವಾರ ದೆಹಲಿ ನ್ಯಾಯಾಲಯದ ಮುಂದೆ ಎಲ್ಲಾ ಆರೋಪಗಳನ್ನು ಒಪ್ಪಿಕೊಂಡಿದ್ದಾರೆ. ಇದರಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿರುವ ಆರೋಪಗಳು ಸೇರಿವೆ. ನ್ಯಾಯಾಲಯದ ಮೂಲಗಳ ಪ್ರಕಾರ, ಈಗ ನಿಷೇಧಕ್ಕೊಳಗಾಗಿರುವ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್‌ನ (Jammu and Kashmir Liberation Front) ಮುಖ್ಯಸ್ಥ ಮಲಿಕ್ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 16 (ಭಯೋತ್ಪಾದನಾ ಕಾಯ್ದೆ), 17 (ಭಯೋತ್ಪಾದನೆಗಾಗಿ ನಿಧಿ ಸಂಗ್ರಹಿಸುವುದು), 18 (ಭಯೋತ್ಪಾದಕ ಕೃತ್ಯ ಎಸಗಲು ಪಿತೂರಿ), ಮತ್ತು 20 (ಭಯೋತ್ಪಾದಕ ಗುಂಪು ಅಥವಾ ಸಂಘಟನೆಯ ಸದಸ್ಯ) ಯುಎಪಿಎ ಮತ್ತು ಸೆಕ್ಷನ್ 120-ಬಿ (ಅಪರಾಧದ ಪಿತೂರಿ) ಮತ್ತು 124-ಎ (ದೇಶದ್ರೋಹ) ಆರೋಪಗಳನ್ನು ಪ್ರಶ್ನಿಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಪ್ರವೀಣ್ ಸಿಂಗ್ ಅವರು ಮಲಿಕ್‌ಗೆ ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸಲು ಮೇ 19 ರಂದು ಮತ್ತೊಮ್ಮೆ ವಿಚಾರಣೆ ನಡೆಸಲಿದ್ದಾರೆ. ಪ್ರತ್ಯೇಕತಾವಾದಿ ನಾಯಕನ ವಿರುದ್ಧದ ಅಪರಾಧಗಳಿಗೆ ಗರಿಷ್ಠ ಶಿಕ್ಷೆ ಜೀವಾವಧಿ ಶಿಕ್ಷೆಯಾಗಿದೆ.

ಈ ಪ್ರಕರಣದಲ್ಲಿ ಮಲಿಕ್ ಮತ್ತು ಇತರರ ವಿರುದ್ಧ ಯುಎಪಿಎ ಅಡಿಯಲ್ಲಿ ಆರೋಪಗಳನ್ನು ಹೊರಿಸುವಂತೆ ನ್ಯಾಯಾಲಯವು ಈ ವರ್ಷದ ಮಾರ್ಚ್‌ನಲ್ಲಿ ಆದೇಶಿಸಿತ್ತು.

ಏತನ್ಮಧ್ಯೆ, ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕರಾದ ಫಾರೂಕ್ ಅಹ್ಮದ್ ದಾರ್ ಅಲಿಯಾಸ್ ಬಿಟ್ಟಾ ಕರಾಟೆ, ಶಬ್ಬೀರ್ ಶಾ, ಮಸರತ್ ಆಲಂ, ಮೊಹಮ್ಮದ್ ಯೂಸುಫ್ ಶಾ, ಅಫ್ತಾಬ್ ಅಹ್ಮದ್ ಶಾ, ಅಲ್ತಾಫ್ ಅಹ್ಮದ್ ಷಾ, ನಯೀಮ್ ಖಾನ್, ಎಂಡಿ ಅಕ್ಬರ್ ಖಾಂಡೆ, ರಾಜಾ ಮೆಹರಾಜುದ್ದೀನ್ ಕಲ್ವಾಲ್, ಬಶೀರ್ ಅಹ್ಮದ್ ಭಟ್, ಜಹೂರ್ ಅಹ್ಮದ್ ಶಾ ವತಾಲಿ, ಶಬೀರ್ ಅಹ್ಮದ್ ಶಾ, ಅಬ್ದುಲ್ ರಶೀದ್ ಶೇಖ್, ಮತ್ತು ನವಲ್ ಕಿಶೋರ್ ಕಪೂರ್  ವಿರುದ್ಧ ನ್ಯಾಯಾಲಯ ಮಂಗಳವಾರ ಅಧಿಕೃತವಾಗಿ ಆರೋಪಗಳನ್ನು ಮಾಡಿದೆ.

ಇದನ್ನೂ ಓದಿ
Image
ತಿಹಾರ್ ಜೈಲಿನಲ್ಲಿ ಆಯುರ್ವೇದ ಚಿಕಿತ್ಸೆಗೆ ಬೇಡಿಕೆ ಇಟ್ಟ ಉಗ್ರ ಯಾಸಿನ್ ಭಟ್ಕಳ್

ಪ್ರಕರಣದಲ್ಲಿ ಘೋಷಿತ ಅಪರಾಧಿಗಳು ಎಂದು ಘೋಷಿಸಲಾದ ಲಷ್ಕರ್-ಎ-ತೊಯ್ಬಾ ಸಂಸ್ಥಾಪಕ ಹಫೀಜ್ ಸಯೀದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾವುದ್ದೀನ್ ವಿರುದ್ಧವೂ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.

Published On - 10:16 pm, Tue, 10 May 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ