AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕತಾವಾದಿಗಳಿಗೆ ಶಿಕ್ಷೆಯಾಗಬೇಕು; ಕೆನಡಾದಲ್ಲಿ ಹಿಂದೂ ದೇವಾಲಯದ ದಾಳಿಗೆ ಭಾರತ ಟೀಕೆ

ಕೆನಡಾದ ಒಂಟಾರಿಯೊದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ಸಭಾ ದೇವಾಲಯದಲ್ಲಿ ಭಾನುವಾರ ಭಾರತೀಯ ಕಾನ್ಸುಲರ್ ಶಿಬಿರದ ಮೇಲೆ ದಾಳಿ ನಡೆದಿದೆ. ಈ ಹಿಂಸಾತ್ಮಕ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಕೆನಡಾದ ಬ್ರಾಂಪ್ಟನ್ ಪ್ರದೇಶದಲ್ಲಿ ಹಿಂದೂ ದೇವಾಲಯದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಭಾರತ ಇಂದು ಪ್ರತಿಕ್ರಿಯಿಸಿದೆ. ಈ ದಾಳಿಯನ್ನು ಖಂಡಿಸಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಕೆನಡಾ ಸರ್ಕಾರಕ್ಕೆ ದೇಶದ ಎಲ್ಲಾ ದೇವಾಲಯಗಳಿಗೆ ಹಾಗೂ ಹಿಂದೂಗಳಿಗೆ ರಕ್ಷಣೆ ನೀಡುವಂತೆ ಕರೆ ನೀಡಿದೆ.

ಪ್ರತ್ಯೇಕತಾವಾದಿಗಳಿಗೆ ಶಿಕ್ಷೆಯಾಗಬೇಕು; ಕೆನಡಾದಲ್ಲಿ ಹಿಂದೂ ದೇವಾಲಯದ ದಾಳಿಗೆ ಭಾರತ ಟೀಕೆ
ಸಚಿವ ಜೈಶಂಕರ್
ಸುಷ್ಮಾ ಚಕ್ರೆ
|

Updated on:Nov 04, 2024 | 7:57 PM

Share

ನವದೆಹಲಿ: ಭಾರತ ಮತ್ತು ಕೆನಡಾ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲಿನ ದಾಳಿಯು ಎರಡು ರಾಷ್ಟ್ರಗಳ ನಡುವೆ ಹೊಸ ಕಿಡಿಯನ್ನು ಹೆಚ್ಚಿಸಿದೆ. ಈ ಘಟನೆಗೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಭಾರತ ಸರ್ಕಾರವು ಹಿಂದೂ ದೇವಾಲಯವನ್ನು ಗುರಿಯಾಗಿಸಿಕೊಂಡ ಉಗ್ರರು ಮತ್ತು ಪ್ರತ್ಯೇಕತಾವಾದಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದೆ.

“ನಾವು ನಿನ್ನೆ ಒಂಟಾರಿಯೊದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ಸಭಾ ದೇವಾಲಯದಲ್ಲಿ ಉಗ್ರಗಾಮಿಗಳು ಮತ್ತು ಪ್ರತ್ಯೇಕತಾವಾದಿಗಳು ನಡೆಸಿದ ಹಿಂಸಾಚಾರವನ್ನು ಖಂಡಿಸುತ್ತೇವೆ. ಎಲ್ಲಾ ಪೂಜಾ ಸ್ಥಳಗಳನ್ನು ಇಂತಹ ದಾಳಿಗಳಿಂದ ರಕ್ಷಿಸಲು ನಾವು ಕೆನಡಾ ಸರ್ಕಾರಕ್ಕೆ ಒತ್ತಾಯಿಸುತ್ತೇವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ಕೆನಡಾ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಕೂಡ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿ ಉಗ್ರಗಾಮಿಗಳು ನಡೆಸಿದ ದಾಳಿಯನ್ನು ಖಂಡಿಸಿದ್ದಾರೆ. ಕೆನಡಾದಲ್ಲಿರುವ ಪ್ರತಿಯೊಬ್ಬರಿಗೆ ತಮ್ಮ ನಂಬಿಕೆಯನ್ನು ಮುಕ್ತವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ಹಕ್ಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ವಿರುದ್ಧ ಟ್ರೂಡೊ ಸುಳ್ಳು ಹೇಳಿಕೆ; ಕೆನಡಾದ ವಿಪಕ್ಷಗಳಿಂದಲೇ ಟೀಕೆ

“ಬ್ರಾಂಪ್ಟನ್‌ನ ಹಿಂದೂ ಸಭಾ ಮಂದಿರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಸ್ವೀಕಾರಾರ್ಹವಲ್ಲ. ಪ್ರತಿಯೊಬ್ಬ ಕೆನಡಿಯನ್ ತನ್ನ ನಂಬಿಕೆಯನ್ನು ಮುಕ್ತವಾಗಿ ಮತ್ತು ಸುರಕ್ಷಿತವಾಗಿ ಅಭ್ಯಾಸ ಮಾಡುವ ಹಕ್ಕನ್ನು ಹೊಂದಿದ್ದಾನೆ. ಸಮುದಾಯವನ್ನು ರಕ್ಷಿಸಲು ಮತ್ತು ಈ ಘಟನೆಯನ್ನು ತನಿಖೆ ಮಾಡಲು ತ್ವರಿತವಾಗಿ ಪ್ರತಿಕ್ರಿಯಿಸಿದ್ದಕ್ಕಾಗಿ ಪೀಲ್ ಪ್ರಾದೇಶಿಕ ಪೊಲೀಸರಿಗೆ ಧನ್ಯವಾದಗಳು” ಎಂದು ಟ್ರೂಡೊ ಸೋಮವಾರ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೆನಡಾದ ಹಿಂದೂ ದೇವಾಲಯದಲ್ಲಿ ಖಲಿಸ್ತಾನಿಗಳಿಂದ ಭಕ್ತರ ಮೇಲೆ ಹಲ್ಲೆ

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಖಲಿಸ್ತಾನ್ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ “ಸಂಭಾವ್ಯ” ಒಳಗೊಳ್ಳುವಿಕೆಯ ಬಗ್ಗೆ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಆರೋಪಿಸಿದ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧದಲ್ಲಿ ಬಿರುಕು ಹೆಚ್ಚಾಗಿತ್ತು. ಟ್ರುಡೊ ಅವರ ಆರೋಪಗಳನ್ನು ಭಾರತ “ಅಸಂಬದ್ಧ” ಎಂದು ತಿರಸ್ಕರಿಸಿತು. ಕೆನಡಾದ ನೆಲದಿಂದ ನಿರ್ಭಯವಾಗಿ ಕಾರ್ಯನಿರ್ವಹಿಸುತ್ತಿರುವ ಖಲಿಸ್ತಾನ್ ಪರವಾದ ಘಟಕಗಳಿಗೆ ಕೆನಡಾ ಅವಕಾಶ ನೀಡುವುದು ಉಭಯ ದೇಶಗಳ ನಡುವಿನ ಪ್ರಮುಖ ಸಮಸ್ಯೆಯಾಗಿದೆ ಎಂದು ಭಾರತ ಸಮರ್ಥಿಸಿಕೊಂಡಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:57 pm, Mon, 4 November 24

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​