ಅಮಿತ್ ಶಾ ಅವರನ್ನು ಭೇಟಿ ಮಾಡಿದ ಅದಾರ್ ಪೂನಾವಾಲಾ; ಅಕ್ಟೋಬರ್​​ನಲ್ಲಿ ಕೊವೊವಾಕ್ಸ್ ಲಸಿಕೆ ಪ್ರಾರಂಭ ಸಾಧ್ಯತೆ

Adar Poonawalla: ಪೂನಾವಾಲಾ ಅವರು ಶುಕ್ರವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಸತ್ತಿನಲ್ಲಿ ಭೇಟಿಯಾದರು ಮತ್ತು ಇಬ್ಬರ ನಡುವಿನ ಸಭೆ 30 ನಿಮಿಷಗಳ ಕಾಲ ನಡೆಯಿತು.

ಅಮಿತ್ ಶಾ ಅವರನ್ನು ಭೇಟಿ ಮಾಡಿದ ಅದಾರ್ ಪೂನಾವಾಲಾ; ಅಕ್ಟೋಬರ್​​ನಲ್ಲಿ ಕೊವೊವಾಕ್ಸ್ ಲಸಿಕೆ ಪ್ರಾರಂಭ ಸಾಧ್ಯತೆ
ಅಮಿತ್ ಶಾ- ಅದಾರ್ ಪೂನಾವಾಲಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 06, 2021 | 11:54 PM

ದೆಹಲಿ: ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಅದಾರ್ ಪೂನಾವಾಲಾ ಅವರು ಶುಕ್ರವಾರ ತಮ್ಮ ಕಂಪನಿಯು ಭಾರತದಲ್ಲಿ ತಯಾರಿಸುತ್ತಿರುವ ಇನ್ನೊಂದು ಕೊವಿಡ್-19 ಲಸಿಕೆಯನ್ನು ಕೊವೊವಾಕ್ಸ್ 2022 ರ ಮೊದಲ ತ್ರೈಮಾಸಿಕದ ವೇಳೆಗೆ ವಯಸ್ಕರಿಗೆ ಮತ್ತು ಮಕ್ಕಳಿಗಾಗಿ ಲಭ್ಯವಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಸೆರಮ್ ಇನ್‌ಸ್ಟಿಟ್ಯೂಟ್‌ಗೆ ಒದಗಿಸಿದ ಎಲ್ಲಾ ಬೆಂಬಲಕ್ಕಾಗಿ ಅವರು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಬೇಡಿಕೆಯನ್ನು ಪೂರೈಸಲು ಕಂಪನಿಯು ತನ್ನ ಕೊವಿಶೀಲ್ಡ್ ಉತ್ಪಾದನಾ ಸಾಮರ್ಥ್ಯವನ್ನು ವಿಸ್ತರಿಸಲು ಯಾವಾಗಲೂ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಪೂನಾವಾಲಾ ಅವರು ಶುಕ್ರವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಸತ್ತಿನಲ್ಲಿ ಭೇಟಿಯಾದರು ಮತ್ತು ಇಬ್ಬರ ನಡುವಿನ ಸಭೆ 30 ನಿಮಿಷಗಳ ಕಾಲ ನಡೆಯಿತು. “ಸರ್ಕಾರವು ನಮಗೆ ಸಹಾಯ ಮಾಡುತ್ತಿದೆ ಮತ್ತು ನಾವು ಯಾವುದೇ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿಲ್ಲ. ಎಲ್ಲಾ ಸಹಕಾರ ಮತ್ತು ಬೆಂಬಲಕ್ಕಾಗಿ ನಾವು ಪ್ರಧಾನಿ ನರೇಂದ್ರ ಮೋದಿಗೆ ಕೃತಜ್ಞರಾಗಿರುತ್ತೇವೆ” ಎಂದು ಪೂನಾವಾಲಾ ತಮ್ಮ ಭೇಟಿಯ ನಂತರ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.

ಮಕ್ಕಳಿಗಾಗಿರುವ ಲಸಿಕೆಗಳ ಬಗ್ಗೆ ಕೇಳಿದಾಗ ಮಕ್ಕಳಿಗೆ ಕೊವೊವಾಕ್ಸ್ ಲಸಿಕೆಯನ್ನು ಮುಂದಿನ ವರ್ಷದ ಮೊದಲ ತ್ರೈಮಾಸಿಕದಲ್ಲಿ ಹೆಚ್ಚಾಗಿ ಜನವರಿ-ಫೆಬ್ರವರಿಯಲ್ಲಿ ಆರಂಭಿಸಲಾಗುವುದು ಎಂದಿದ್ದಾರೆ ಪೂನಾವಾಲಾ.

ಡಿಸಿಜಿಐ ಅನುಮೋದನೆಗಳನ್ನು ಅವಲಂಬಿಸಿ ವಯಸ್ಕರಿಗೆ ಕೊವೊವಾಕ್ಸ್ ಅನ್ನು ಅಕ್ಟೋಬರ್‌ನಲ್ಲಿ ಪ್ರಾರಂಭಿಸುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ. ಇದು ಎರಡು ಡೋಸ್ ಲಸಿಕೆಯಾಗಿದ್ದು, ಪ್ರಾರಂಭದ ಸಮಯದಲ್ಲಿ ಬೆಲೆಯನ್ನು ನಿರ್ಧರಿಸಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ: ಕೊವಿಡ್ -19 ಲಸಿಕೆಗಳಿಗೆ ಡೆಲ್ಟಾ ಪ್ರಸರಣವನ್ನು ನಿಲ್ಲಿಸಲು ಸಾಧ್ಯವಾಗದೇ ಇರಬಹುದು: ಎಚ್ಚರಿಕೆ ನೀಡಿದ ಬ್ರಿಟನ್

ಇದನ್ನೂ ಓದಿ: Corona Vaccine Shortage: ಕೊವಿಡ್ ಲಸಿಕೆ ಸಿಗದೆ ರೊಚ್ಚಿಗೆದ್ದ ಸಾರ್ವಜನಿಕರು, ಹಾಸನ ಡಿಸಿ ಮನೆಗೆ ಮುತ್ತಿಗೆ

(Serum Institute of India CEO Adar Poonawalla met Home Minister Amit Shah Says Covovax Vaccine Will be launched in October )

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM