ಬರಲಿದೆ ಮತ್ತೊಂದು ಕೊರೊನಾ ಲಸಿಕೆ.. ಭಾರತದ ಸೆರಮ್​ ಸಂಸ್ಥೆಯಿಂದಲೇ ಉತ್ಪಾದನೆ: 200 ಕೋಟಿ ಡೋಸ್​ ಲಸಿಕೆ ಬಿಡುಗಡೆಗೆ ಸಿದ್ಧತೆ

ಸೆರಮ್​ ಸಂಸ್ಥೆ ನೋವಾವ್ಯಾಕ್ಸ್​ನೊಂದಿಗೆ 2020ರ ಸೆಪ್ಟೆಂಬರ್​ ತಿಂಗಳಿನಲ್ಲಿಯೇ ಒಪ್ಪಂದವನ್ನೂ ಮಾಡಿಕೊಂಡಿದ್ದು, ಕೊವಾವ್ಯಾಕ್ಸ್​ ಹೆಸರಲ್ಲಿ ಭಾರತದಲ್ಲಿ ಲಸಿಕೆ ಬಿಡುಗಡೆ ಮಾಡಲು ಯೋಚಿಸಿದೆ.

ಬರಲಿದೆ ಮತ್ತೊಂದು ಕೊರೊನಾ ಲಸಿಕೆ.. ಭಾರತದ ಸೆರಮ್​ ಸಂಸ್ಥೆಯಿಂದಲೇ ಉತ್ಪಾದನೆ: 200 ಕೋಟಿ ಡೋಸ್​ ಲಸಿಕೆ ಬಿಡುಗಡೆಗೆ ಸಿದ್ಧತೆ
ಅಮೆರಿಕಾದ ನೋವಾವ್ಯಾಕ್ಸ್​ ಭಾರತದಲ್ಲಿ ಕೊವಾವ್ಯಾಕ್ಸ್​
Follow us
Skanda
| Updated By: ಸಾಧು ಶ್ರೀನಾಥ್​

Updated on: Jan 30, 2021 | 5:07 PM

ದೆಹಲಿ: ಭಾರತದಲ್ಲಿ ಸೆರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ತಯಾರಿಸಿದ ಕೊವಿಶೀಲ್ಡ್​ ಮತ್ತು ಭಾರತ್​ ಬಯೋಟೆಕ್​ ಸಂಸ್ಥೆ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್​ ಲಸಿಕೆಗಳನ್ನು ಈಗಾಗಲೇ ಪ್ರಯೋಗಿಸಲಾಗುತ್ತಿದೆ. ಇದರ ಬೆನ್ನಲ್ಲೇ ಅಮೆರಿಕಾ ಮೂಲದ ಸಂಸ್ಥೆಯೊಂದರ ಕೊರೊನಾ ಲಸಿಕೆ ದೇಶಕ್ಕೆ ಕಾಲಿಡಲು ಸನ್ನದ್ಧವಾಗಿದ್ದು, ಇದನ್ನೂ ಪುಣೆಯ ಸೆರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ಸಂಸ್ಥೆಯೇ ಉತ್ಪಾದಿಸಲು ಉತ್ಸಾಹ ತೋರಿದೆ.

ಅಮೆರಿಕಾದ ನೋವಾವ್ಯಾಕ್ಸ್ ಸಂಸ್ಥೆಯ ಕೊರೊನಾ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸಲು ಅನುಮತಿ ಕೋರಿ ಸೆರಮ್​ ಇನ್​ಸ್ಟಿಟ್ಯೂಟ್ ಆಫ್​ ಇಂಡಿಯಾ ಈಗಾಗಲೇ ಅರ್ಜಿ ಸಲ್ಲಿಸಿದೆ. ಕೆಲ ವರದಿಗಳ ಪ್ರಕಾರ ಜೂನ್​ ವೇಳೆಗೆ ನೋವಾವ್ಯಾಕ್ಸ್ ಲಸಿಕೆ ಬಳಕೆಗೆ ಲಭ್ಯವಾಗಲಿದ್ದು, ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಅನುಮತಿ ಸಿಕ್ಕರೆ ಫೆಬ್ರವರಿಯಿಂದಲೇ ಪ್ರಯೋಗ ಆರಂಭಿಸುವುದಾಗಿ ಸಂಸ್ಥೆ ತಿಳಿಸಿದೆ.

ಅಮೆರಿಕಾದಲ್ಲಿ ನೋವಾವ್ಯಾಕ್ಸ್​ ಕೊರೊನಾ ವೈರಾಣುವಿನ ವಿರುದ್ಧ ಶೇ. 89.3ರಷ್ಟು ಪರಿಣಾಮಕಾರಿಯಾಗಿದೆ ಎಂದು ವರದಿಗಳು ತಿಳಿಸಿವೆ. ಸೆರಮ್​ ಸಂಸ್ಥೆ ನೋವಾವ್ಯಾಕ್ಸ್​ನೊಂದಿಗೆ 2020ರ ಸೆಪ್ಟೆಂಬರ್​ ತಿಂಗಳಿನಲ್ಲಿಯೇ ಒಪ್ಪಂದವನ್ನೂ ಮಾಡಿಕೊಂಡಿದ್ದು, ಕೊವಾವ್ಯಾಕ್ಸ್​ ಹೆಸರಲ್ಲಿ ಭಾರತದಲ್ಲಿ ಆರಂಭದಲ್ಲೇ 200 ಕೋಟಿ ಡೋಸ್​ ಲಸಿಕೆ ಬಿಡುಗಡೆ ಮಾಡಲು ಯೋಚಿಸಿದೆ ಎಂದು ತಿಳಿದುಬಂದಿದೆ.

ಏಪ್ರಿಲ್‌ ಅಂತ್ಯಕ್ಕೆ ಹೆಮ್ಮಾರಿ ಆಟ ಅಂತ್ಯ?

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ