ತೆಲಂಗಾಣ: ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣದ ವ್ಯಾನ್ ಉರುಳಿ 7 ಜನ ಮೃತಪಟ್ಟಿದ್ದಾರೆ.
ಜಿಲ್ಲೆಯ ಗೋಕವರಂ ಮಂಡಲದ ತಂಟಿಕೊಂಡ ಘಾಟ್ ರಸ್ತೆಯ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮದುವೆ ಮುಗಿಸಿಕೊಂಡು ವಾಪಸಾಗುವಾಗ ಬ್ರೇಕ್ ವೈಫಲ್ಯದಿಂದಾಗಿ ತಂಟಿಕೊಂಡ ಬಳಿ ಬೆಟ್ಟದಿಂದ ವ್ಯಾನ್ ಉರುಳಿ ಬಿದ್ದು ಈ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಗೋಕವರಂ ವಲಯದ ತಕುರ್ಪಲೆಂ ಗ್ರಾಮಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನೆಯ ಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ.