Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Accident: ಅರ್ಧ ರಾತ್ರಿಯಲ್ಲಿ ಆಂಧ್ರದಲ್ಲಿ ಲಾರಿ ಪಲ್ಟಿಯಾಗಿ 7 ಕಾರ್ಮಿಕರ ಸಾವು

ಲಾರಿ ಪಲ್ಟಿಯಾಗಿ ಸ್ಥಳದಲ್ಲೇ 7 ಕೂಲಿ ಕಾರ್ಮಿಕರು ಮೃತಪಟ್ಟ ಘಟನೆ ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ದೇವರಪಲ್ಲಿ ತಾಲೂಕಿನ ಚಿಲಕವಾರಿಪಾಕಲ ಎಂಬ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Andhra Accident: ಅರ್ಧ ರಾತ್ರಿಯಲ್ಲಿ ಆಂಧ್ರದಲ್ಲಿ ಲಾರಿ ಪಲ್ಟಿಯಾಗಿ 7 ಕಾರ್ಮಿಕರ ಸಾವು
ರಾಮನಗರ: ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ದುರ್ಮರಣ
Follow us
ಆಯೇಷಾ ಬಾನು
|

Updated on:Sep 11, 2024 | 9:17 AM

ದೇವರಪಲ್ಲಿ, ಸೆ.11: ಪೂರ್ವ ಗೋದಾವರಿ ಜಿಲ್ಲೆಯ ದೇವರಪಲ್ಲಿ ತಾಲೂಕಿನ ಚಿಲಕವಾರಿಪಾಕಲ ಎಂಬ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದೆ. ಲಾರಿ ಪಲ್ಟಿಯಾಗಿ ಸ್ಥಳದಲ್ಲೇ 7 ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರ ಪೈಕಿ 6 ಕಾರ್ಮಿಕರು ತಾಡಿಮಳ್ಳ ಗ್ರಾಮದ ನಿವಾಸಿಗಳು. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗೋಡಂಬಿ ಲೋಡ್​​ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ದುರಂತ ಸಂಭವಿಸಿದೆ.

ಮಂಗಳವಾರ ರಾತ್ರಿ ಈ ರಸ್ತೆ ಅಪಘಾತ ಸಂಭವಿಸಿದೆ. ನರಸಾಪುರಂ ಮಂಡಲದ ಬೊರ್ರಂಪಾಲೆಂನಿಂದ ನಿಡದವೋಲು ಮಂಡಲದ ತಾಡಿಮಲ್ಲ ಕಡೆಗೆ ಲಾರಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಚಿನ್ನಾಯಗುಡೆಂ ಉಪನಗರದಲ್ಲಿ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದೆ. ಅಪಘಾತವಾದ ಲಾರಿಯಲ್ಲಿ 10 ಮಂದಿ ಪ್ರಯಾಣಿಸುತ್ತಿದ್ದರು. ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಮಲ್ಲೇಶ್ವರ ಬಿಜೆಪಿ ಕಚೇರಿ ಮೇಲೆ ಉಗ್ರರ ಕಣ್ಣು; ಭದ್ರತೆ ಹೆಚ್ಚಿಸಿದ ಗೃಹ ಇಲಾಖೆ

ದೇವರಪಲ್ಲಿ ಪೊಲೀಸರು ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕೊವ್ವೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರೆಲ್ಲರೂ ನೀಡದವೋಲು ಮಂಡಲದ ತಾಡಿಮಲ್ಲ ಗ್ರಾಮದವರು. ತಮ್ಮಿ ರೆಡ್ಡಿ ಸತ್ಯನಾರಾಯಣ (45), ದೇಶಭಟ್ಟುಲ ವೆಂಕಟರಾವ್ (40), ಬೊಕ್ಕ ಪ್ರಸಾದ್ (32), ಪೆನುಗುರ್ತಿ ಚಿನ್ನ ಮುಸಲಯ್ಯ (35), ಕತ್ತಿವ ಕೃಷ್ಣ (40), ಕತ್ತಿವ ಸತ್ತಿಪಂಡು (40), ತಾಡಿ ಕೃಷ್ಣ (45) ಮೃತರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಮತ್ತೊಂದೆಡೆ ಕರ್ನೂಲ್ ಜಿಲ್ಲೆಯ ಆಲೂರು ವಿಧಾನಸಭಾ ಕ್ಷೇತ್ರದ ಹುಲೇಬೀಡು ಗ್ರಾಮದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದರು. ಮೃತರನ್ನು ಸಬೇರಾ (60), ಮೇಸ್ತ್ರಿ ಗೌಸ್ (45) ಮತ್ತು ನಸ್ರೀನ್ (32) ಎಂದು ಗುರುತಿಸಲಾಗಿದೆ. ಮೃತರು ಮತ್ತು ಗಾಯಗೊಂಡವರೆಲ್ಲರೂ ಆದೋನಿಯ ಫರೀಶಾ ಮೊಹಲ್ಲಾ ನಿವಾಸಿಗಳು. ಮಾಹಿತಿಯ ಪ್ರಕಾರ, ಭಾನುವಾರ ಬೆಳಿಗ್ಗೆ ಒಂಬತ್ತು ಸದಸ್ಯರ ಕುಟುಂಬವು ತಮ್ಮ ಸಂಬಂಧಿಕರ ಸಮಾರಂಭದಲ್ಲಿ ಪಾಲ್ಗೊಳ್ಳಲು ಕರ್ನಾಟಕ ರಾಜ್ಯದ ಬಳ್ಳಾರಿಗೆ ಕಾರಿನಲ್ಲಿ ತೆರಳಿದ್ದರು.

ಅದೇ ದಿನ ಸಂಜೆ ಹಿಂತಿರುಗುತ್ತಿದ್ದಾಗ ಹುಲೇಬೀಡು ಗ್ರಾಮದ ಬಳಿ ಕಾರು ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಸೀಮಾ, ಅಹಮದ್ ರಾಜಾ, ಚಾಲಕ ಕಾದರ್ ಮತ್ತು ಶಬಾನಾ ಬೇಗಂ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:21 am, Wed, 11 September 24