ದೆಹಲಿ: ಛತ್ತೀಸ್‌ಗಢದ (Chhattisgarh) ಕಂಕೇರ್ ಜಿಲ್ಲೆಯಲ್ಲಿ ಇಂದು (ಗುರುವಾರ) ಆಟೋಗೆ ಟ್ರಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ (Accident)ಏಳು ಶಾಲಾ ಮಕ್ಕಳು ಸಾವಿಗೀಡಾಗಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಟೋರಿಕ್ಷಾ ಚಾಲಕನ ಪರಿಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿದ್ದು, ಇಬ್ಬರು ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಆರೋಗ್ಯ ಇಲಾಖೆಯಿಂದ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ. ಕುಟುಂಬ ಸದಸ್ಯರಿಗೆ ದೇವರು ಧೈರ್ಯ ನೀಡಲಿ ಎಂದು ಸಿಎಂ ಭೂಪೇಶ್ ಬಘೇಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
कांकेर जिला के कोरर चिलहटी चौक पर ऑटो और ट्रक की टक्कर से दुर्घटना में 5 स्कूली बच्चों की आकस्मिक मौत का समाचार बेहद दुखद है।
4 बच्चे गंभीर रूप से घायल हैं, स्वास्थ्य विभाग द्वारा हर मुमकिन मदद दी जा रही है।
ईश्वर परिवारजनों को हिम्मत दे। प्रशासन को हर संभव मदद के निर्देश हैं।
— Bhupesh Baghel (@bhupeshbaghel) February 9, 2023
ಶಾಲಾ ಮುಗಿಸಿ ಮಕ್ಕಳೆಲ್ಲ ಆಟೋದಲ್ಲಿ ಮನೆಗೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಚಿಲ್ಹಾಟಿ ಚೌಕ್ ಬಳಿ ಅತೀ ವೇಗದಲ್ಲಿ ಬಂದ ಟ್ರಕ್ ಎದುರಿನಿಂದ ಬಂದು ಆಟೋಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಆಟೋ ಬಿಡಿಭಾಗಗಳು ಹಾರಿ ಹೋಗಿದ್ದು, 5 ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದೇ ವೇಳೆ ಅಪಘಾತದಲ್ಲಿ ಗಾಯಗೊಂಡ 4 ಮಕ್ಕಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ: ನೆಹರು ಬಗ್ಗೆ ಸಾಕಷ್ಟು ಹೇಳ್ತೀರಿ, ಅವರ ಸರ್ನೇಮ್ ಯಾಕೆ ಬಳಸುತ್ತಿಲ್ಲ?: ಗಾಂಧಿ ಕುಟುಂಬಕ್ಕೆ ಪ್ರಧಾನಿ ಮೋದಿ ಪ್ರಶ್ನೆ
ಅಪಘಾತದಲ್ಲಿ ಆಟೋ ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಅವರ ಸ್ಥಿತಿಯೂ ಚಿಂತಾಜನಕವಾಗಿದೆ. ಗಾಯಗೊಂಡವರನ್ನು ಕೊರೂರಿನ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಇಲ್ಲಿ ಆಟೋಗೆ ಡಿಕ್ಕಿ ಹೊಡೆಯುವ ಭರದಲ್ಲಿ ಟ್ರಕ್ ಕೂಡ ಅತಿವೇಗದಿಂದ ಮೈದಾನಕ್ಕೆ ನುಗ್ಗಿದೆ. ಅಪಘಾತದ ನಂತರ ಟ್ರಕ್ ಚಾಲಕ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಘಟನೆ ಬಳಿಕ ಮಕ್ಕಳ ಸಂಬಂಧಿಕರು ಅಳಲು ತೋಡಿಕೊಂಡಿದ್ದಾರೆ. ಗಾಯಗೊಂಡಿರುವ ಇಬ್ಬರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಗಾಯಗೊಂಡ ಇಬ್ಬರೂ ಮಕ್ಕಳನ್ನು ಉತ್ತಮ ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ಕಳುಹಿಸಲಾಗಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:30 pm, Thu, 9 February 23