AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ಭದ್ರತಾ ಪಡೆಗಳ ದಾಳಿಗೆ ಡಿಎನ್​​ಎಲ್​​ಎ ಸಂಘಟನೆಯ 7 ಉಗ್ರರು ಬಲಿ..

ಎನ್​ಕೌಂಟರ್​​ನಲ್ಲಿ ಡಿಎನ್​​ಎಲ್​ಎ ಉಗ್ರರು ಸಾವನ್ನಪ್ಪಿದ್ದಾರೆ. ಸಂಘಟನೆಯ ಇಬ್ಬರು ಮುಖಂಡರು ತೀವ್ರವಾಗಿ ಗಾಯಗೊಂಡಿದ್ದರ ಬಗ್ಗೆಯೂ ಮಾಹಿತಿ ಸಿಕ್ಕಿದೆ.

ಅಸ್ಸಾಂನಲ್ಲಿ ಭದ್ರತಾ ಪಡೆಗಳ ದಾಳಿಗೆ ಡಿಎನ್​​ಎಲ್​​ಎ ಸಂಘಟನೆಯ 7 ಉಗ್ರರು ಬಲಿ..
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 23, 2021 | 3:31 PM

Share

ದಿಫು: ಇಲ್ಲಿನ ಪಶ್ಚಿಮ ಕರ್ಬಿ ಅಂಗ್ಲಾಂಗ್​ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ದಾಳಿಗೆ ದೀಮಾಸ ನ್ಯಾಷನಲ್​ ಲಿಬರೇಶನ್​ ಆರ್ಮಿ (DNLA)ಸಂಘಟನೆಯ ಸುಮಾರು 7 ಉಗ್ರರು ಮೃತಪಟ್ಟಿದ್ದಾರೆ. ಅಸ್ಸಾಂ-ನಾಗಾಲ್ಯಾಂಡ್​ ಗಡಿ ಭಾಗದಲ್ಲಿ ಎನ್​ಕೌಂಟರ್​ ನಡೆದಿತ್ತು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ಉಗ್ರರಿಂದ ಎಕೆ 47 ಸೇರಿ, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪಶ್ಚಿಮ ಕರ್ಬಿ ಆಂಗ್ಲಾಂಗ್​ ಪ್ರದೇಶದಲ್ಲಿ ಡಿಎನ್​ಎಲ್​ಎ ಸಂಘಟನೆಯ ಇನ್ನಷ್ಟು ಉಗ್ರರು ಇರುವ ಬಗ್ಗೆ ಮಾಹಿತಿ ಇದ್ದು, ಅವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದೆ ಎಂದೂ ಅಧಿಕಾರಿ ಹೇಳಿದ್ದಾರೆ.

ಡಿಎನ್​ಎಲ್​ಎ ಉಗ್ರರು ಸಾವನ್ನಪ್ಪಿರುವ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ಕೂಡ ಪ್ರತಿಕ್ರಿಯೆ ನೀಡಿದ್ದು, ಎನ್​ಕೌಂಟರ್​​ನಲ್ಲಿ ಡಿಎನ್​​ಎಲ್​ಎ ಉಗ್ರರು ಸಾವನ್ನಪ್ಪಿದ್ದಾರೆ. ಸಂಘಟನೆಯ ಇಬ್ಬರು ಮುಖಂಡರು ತೀವ್ರವಾಗಿ ಗಾಯಗೊಂಡಿದ್ದರ ಬಗ್ಗೆಯೂ ಮಾಹಿತಿ ಸಿಕ್ಕಿದೆ ಎಂದು ಹೇಳಿದ್ದಾರೆ.

ಗುಪ್ತಚರ ದಳದ ಮಾಹಿತಿಯ ಮೇರೆಗೆ ಜಿಲ್ಲಾ ಪೊಲೀಸ್​ ತಂಡ ಮತ್ತು ಅಸ್ಸಾಂ ರೈಫಲ್ಸ್​ ಸಿಬ್ಬಂದಿ ಸೇರಿ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಪಶ್ಚಿಮ ಕರ್ಬಿ ಅಂಗ್ಲಾಂಗ್​ ಜಿಲ್ಲೆಯ ಎಎಸ್​​ಪಿ ಪ್ರಕಾಶ್​ ಸೋನೋವಾಲ್​ ನೇತೃತ್ವ ವಹಿಸಿದ್ದರು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಮೇ 14ರಂದು ಅಸ್ಸಾಂನ ತಿನ್ಸುಕಿಯಾದಲ್ಲಿ ಈ ಸಂಘಟನೆಯ ಉಗ್ರರು ನಡೆಸಿದ್ದ ಗ್ರೆನೇಡ್​ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದರು.

ಇದನ್ನೂ ಓದಿ: ತೋಟದಲ್ಲೇ ಬಾಡುತ್ತಿದೆ ಮಾವು; 1983 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಹಣ್ಣಿಗೆ ಬೆಲೆ ಸಿಗದೆ ರೈತರು ಕಂಗಾಲು

Corona Warrior : ನಿಮ್ಮ ಧ್ವನಿಗೆ ನಮ್ಮ ಧ್ವನಿಯೂ : 85ರ ಅಜ್ಜಿಯ ನಗುವೂ ಮತ್ತು ಬೆಡ್​ ಒಂದರ ಕಥೆಯೂ

Seven terrorists of Dimasa National Liberation Army Terrorists Killed By Security Forces in Assam

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ