AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುಗ್ರಾಮ: ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರು ಸಾವು

ನಿರ್ಮಾಣ ಹಂತದ ಗೋಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಸೋಮವಾರ ಸಂಜೆ ಸಿಧ್ರಾವಲಿ ಪ್ರದೇಶದ ಸಿಗ್ನೇಚರ್ ಗ್ಲೋಬಲ್ ಸೊಸೈಟಿಯಲ್ಲಿ ಈ ಘಟನೆ ಸಂಭವಿಸಿದೆ. ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಹಲವಾರು ಕಾರ್ಮಿಕರು ಟನ್‌ಗಳಷ್ಟು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರುಗ್ರಾಮ: ನಿರ್ಮಾಣ ಹಂತದ  ಗೋಡೆ ಕುಸಿದು 7 ಕಾರ್ಮಿಕರು ಸಾವು
ಕಟ್ಟಡ ಕಾರ್ಮಿಕರು ಸಾವು
ನಯನಾ ರಾಜೀವ್
|

Updated on: Mar 10, 2026 | 10:58 AM

Share

ಗುರುಗ್ರಾಮ, ಮಾರ್ಚ್​ 10: ನಿರ್ಮಾಣ ಹಂತದ ಗೋಡೆ(Wall) ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಸೋಮವಾರ ಸಂಜೆ ಸಿಧ್ರಾವಲಿ ಪ್ರದೇಶದ ಸಿಗ್ನೇಚರ್ ಗ್ಲೋಬಲ್ ಸೊಸೈಟಿಯಲ್ಲಿ ಈ ಘಟನೆ ಸಂಭವಿಸಿದೆ. ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಹಲವಾರು ಕಾರ್ಮಿಕರು ಟನ್‌ಗಳಷ್ಟು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೋಡೆ ಇದ್ದಕ್ಕಿದ್ದಂತೆ ಕುಸಿದಾಗ ಸುಮಾರು 12 ರಿಂದ 15 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಹೂತುಹೋದರು, ಸಿಲುಕಿಕೊಂಡಿದ್ದ ಕಾರ್ಮಿಕರನ್ನು ಭಿವಾಡಿಯ ಆಸ್ಪತ್ರೆಗೆ ಕಳುಹಿಸಲಾಯಿತು. ಅದರಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ. ಮೃತರನ್ನು ಸತೀಶ್, ಭಾಗೀರಥ, ಮಿಲನ್, ಶಿವಶಂಕರ್, ಮಂಗಲ್ ಮತ್ತು ಪರಮೇಶ್ವರ್ ಎಂದು ಗುರುತಿಸಲಾಗಿದೆ. ಎಲ್ಲಾ ಮೃತರ ಕುಟುಂಬಗಳನ್ನು ಸಂಪರ್ಕಿಸಲು ಇನ್ನೂ ಪ್ರಯತ್ನಗಳು ನಡೆಯುತ್ತಿವೆ.

ಚೋಟೆಲಾಲ್, ದೀನದಯಾಳ್, ಶಿವಕಾಂತ್ ಮತ್ತು ಇಂದ್ರಜೀತ್ ಎಂದು ಗುರುತಿಸಲಾದ ನಾಲ್ವರು ಕಾರ್ಮಿಕರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡ ಕುಸಿತದ ಕಾರಣವನ್ನು ಅಧಿಕಾರಿಗಳು ತನಿಖೆ ಮುಂದುವರಿಸಿರುವುದರಿಂದ ವೈದ್ಯಕೀಯ ತಂಡಗಳು ಅವರನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಓದಿ: ಸಿಮೆಂಟ್ ಮಿಕ್ಸರ್ ಲಾರಿ ಅವಾಂತರ, ಕುಸಿದ ಗೋಡೆ, ತಾಯಿಯ ಎದುರೇ ಉಸಿರು ಚೆಲ್ಲಿದ ಮಗು

ಮತ್ತೊಂದು ಘಟನೆ ಮಾರ್ಚ್ 7 ರಂದು, ಹರಿಯಾಣದ ಜಿಂದ್ ಜಿಲ್ಲೆಯಲ್ಲಿ ಹೋಳಿ ಬಣ್ಣ ತಯಾರಿಸುವ ಕಾರ್ಖಾನೆಯಲ್ಲಿ ಸಂಭವಿಸಿದ ದೊಡ್ಡ ಬೆಂಕಿ ಅವಘಡದಲ್ಲಿ ನಾಲ್ವರು ಮಹಿಳಾ ಕಾರ್ಮಿಕರು ಸಾವನ್ನಪ್ಪಿದ್ದರು ಮತ್ತು 20 ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದರು. ಸಫಿಡಾನ್‌ನ ಭಟ್ ಕಾಲೋನಿ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡ ಸಮಯದಲ್ಲಿ ಕಾರ್ಖಾನೆಯೊಳಗೆ ಸುಮಾರು 30 ಕಾರ್ಮಿಕರು ಇದ್ದರು ಎಂದು ವರದಿಯಾಗಿದೆ. ಆರಂಭಿಕ ಮಾಹಿತಿಯ ಪ್ರಕಾರ, ಎಂದಿನಂತೆ ಕೆಲಸ ನಡೆಯುತ್ತಿರುವಾಗ ಸೌಲಭ್ಯದಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿತು.

ಕೆಲವೇ ನಿಮಿಷಗಳಲ್ಲಿ, ಜ್ವಾಲೆ ಆವರಣದಾದ್ಯಂತ ಹರಡಿ, ಕಟ್ಟಡವನ್ನು ದಟ್ಟ ಹೊಗೆಯಿಂದ ತುಂಬಿಸಿ ಕಾರ್ಮಿಕರಲ್ಲಿ ಭೀತಿಯನ್ನು ಉಂಟುಮಾಡಿತ್ತು. ಬೆಂಕಿ ಅವಘಡ ಸಂಭವಿಸಿದಾಗ ಕಾರ್ಖಾನೆಯ ಮುಖ್ಯ ದ್ವಾರವನ್ನು ಹೊರಗಿನಿಂದ ಲಾಕ್ ಮಾಡಲಾಗಿತ್ತು, ಇದರಿಂದಾಗಿ ಕಾರ್ಮಿಕರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು ಎಂಬ ಆರೋಪಗಳು ಕೇಳಿಬಂದಿವೆ. ಪರಿಣಾಮವಾಗಿ, ಹಲವಾರು ಕಾರ್ಮಿಕರು ಕಟ್ಟಡದೊಳಗೆ ಸಿಲುಕಿಕೊಂಡರು. ಮಾಹಿತಿ ಪಡೆದ ನಂತರ, ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?