AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಜೆಡಿಯು ಪಕ್ಷ ವಿಭಜನೆಯ ಅಂಚಿನಲ್ಲಿದೆ: ಸುಶೀಲ್ ಮೋದಿ

ಹೇಳಿದ್ದಾರೆ. ನಿತೀಶ್ ಕುಮಾರ್ ಅವರು ತೇಜಸ್ವಿ ಯಾದವ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಘೋಷಿಸಿದಾಗಿನಿಂದ ಅವರು ತಮ್ಮ ಮತ್ತು ಪಕ್ಷದ ಭವಿಷ್ಯವನ್ನು ಕತ್ತಲೆಯಲ್ಲಿ ನೋಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರು ಟಿಕೆಟ್ ಪಡೆಯುವುದಿಲ್ಲ ಎಂದು ಅವರಿಗೆ ತಿಳಿದಿದೆ ಎಂದು ಮೋದಿ ಹೇಳಿದರು.

ಬಿಹಾರದಲ್ಲಿ ಜೆಡಿಯು ಪಕ್ಷ ವಿಭಜನೆಯ ಅಂಚಿನಲ್ಲಿದೆ: ಸುಶೀಲ್ ಮೋದಿ
ನಿತೀಶ್ ಕುಮಾರ್
Follow us
ರಶ್ಮಿ ಕಲ್ಲಕಟ್ಟ
|

Updated on:Jul 04, 2023 | 5:46 PM

ದೆಹಲಿ/ಪಾಟ್ನಾ: ಮಹಾರಾಷ್ಟ್ರದಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ (Ajit Pawar) ಬಂಡಾಯದ ನಂತರ, ಬಿಹಾರದಲ್ಲಿ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿಯ ಸುಶೀಲ್ ಮೋದಿ (Sushil Modi) ಹೇಳಿದ್ದಾರೆ. ಜನತಾ ದಳ ಯುನೈಟೆಡ್ (JDU) ನ ಹಲವಾರು ಸಂಸದರು ಮತ್ತು ಶಾಸಕರು ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದು ನಿತೀಶ್ ಕುಮಾರ್ ಅವರ ಪಕ್ಷವು ವಿಭಜನೆಯ ಅಂಚಿನಲ್ಲಿದೆ ಎಂದು ಸುಶೀಲ್ ಮೋದಿ ಹೇಳಿದ್ದಾರೆ. “ಜೆಡಿಯು ಪಕ್ಷದಲ್ಲಿ ವಿಭಜನೆಯ ನಿರೀಕ್ಷೆಗಳನ್ನು ಎದುರಿಸುತ್ತಿದೆ, ಮುಂಬರುವ ದಿನಗಳಲ್ಲಿ ಏನು ಬೇಕಾದರೂ ಆಗಗಬಹುದು. ಜೆಡಿಯು ಬಂಡಾಯಗಾರರನ್ನು ಒಪ್ಪಿಕೊಳ್ಳುವ ಬಗ್ಗೆ ಪಕ್ಷ ಇನ್ನೂ ನಿರ್ಧರಿಸಿಲ್ಲ .ಇದು ಅನೇಕ ಅಂಶಗಳನ್ನು ಅವಲಂಬಿಸಿರುತ್ತದೆ. ಆದರೆ, ನಿತೀಶ್ ಕುಮಾರ್ ಅವರಿಗೆ ಬಿಜೆಪಿ ಬಾಗಿಲು ಮುಚ್ಚಿದೆ ಎಂದು ಮೋದಿ ಹೇಳಿದ್ದಾರೆ.

ನಿತೀಶ್ ಕುಮಾರ್ ಬಿಜೆಪಿಗೆ ಬೆನ್ನಿಗೆ ಚೂರಿಹಾಕಿದ ರೀತಿಗೆ ಜೆಡಿಯು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಮೋದಿ ಹೇಳಿದ್ದಾರೆ. ನಿತೀಶ್ ಕುಮಾರ್ ಅವರು ತೇಜಸ್ವಿ ಯಾದವ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಘೋಷಿಸಿದಾಗಿನಿಂದ ಅವರು ತಮ್ಮ ಮತ್ತು ಪಕ್ಷದ ಭವಿಷ್ಯವನ್ನು ಕತ್ತಲೆಯಲ್ಲಿ ನೋಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರು ಟಿಕೆಟ್ ಪಡೆಯುವುದಿಲ್ಲ ಎಂದು ಅವರಿಗೆ ತಿಳಿದಿದೆ.

‘ಕಳೆದ ವರ್ಷ ಜೆಡಿಯು 17 ಸ್ಥಾನ ಪಡೆದಿತ್ತು. ಇಂದಿನ ಪರಿಸ್ಥಿತಿಯಲ್ಲಿ ಜೆಡಿಯು 8-10ಕ್ಕಿಂತ ಹೆಚ್ಚು ಸ್ಥಾನ ಪಡೆಯುವ ಅವಕಾಶವಿಲ್ಲ.ಎಲ್ಲರೂ ತಮ್ಮ ಭವಿಷ್ಯವನ್ನು ಅಂಧಕಾರದಲ್ಲಿ ನೋಡುತ್ತಿದ್ದಾರೆ.ಹೀಗಾಗಿ ಭಯಭೀತರಾಗುವ ಪರಿಸ್ಥಿತಿ ಇದೆ.ಎಂಪಿ,ಎಂಎಲ್ಎಗಳು ಬೇರೆ ಪಕ್ಷಗಳನ್ನು ಸಂಪರ್ಕಿಸುತ್ತಿದ್ದಾರೆ ಎಂದು ಸುಶೀಲ್ ಮೋದಿ ಹೇಳಿದರು.

ಅಜಿತ್ ಪವಾರ್ ಬಂಡಾಯ ನಂತರ ಜೆಡಿಯು ಸಂಸದರು ಮತ್ತು ಶಾಸಕರೊಂದಿಗೆ ನಿತೀಶ್ ಕುಮಾರ್ ಅವರು ಒಬ್ಬೊಬ್ಬರನ್ನು ಭೇಟಿಯಾಗುವ ಸಭೆಗಳನ್ನು ಉಲ್ಲೇಖಿಸಿದ ಮೋದಿ, ಅವರು ಇತರ ಪಕ್ಷಗಳಿಗೆ ಬದಲಾಗುತ್ತಾರೆ ಎಂಬ “ಭಯ”ದಿಂದಾಗಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:  ಸಚಿವ ಸಂಪುಟ ಮೇಜರ್ ಸರ್ಜರಿಗೆ ಮೋದಿ ತಯಾರಿ: ಕರ್ನಾಟಕದವರು ಯಾರು ಔಟ್? ಯಾರು ಇನ್?

ಸುಶೀಲ್ ಮೋದಿ ಅವರ ಹೇಳಿಕೆಯನ್ನು ಬಿಜೆಪಿಯ ಪ್ರಚಾರ ಎಂದು ಜೆಡಿಯು ತಳ್ಳಿಹಾಕಿದೆ. “ಸುಶೀಲ್ ಮೋದಿ ಮೂರ್ಖರ ಸ್ವರ್ಗದಲ್ಲಿ ಬದುಕಲಿ, ಜೆಡಿಯು ಅಖಂಡವಾಗಿದೆ” ಎಂದು ನಿತೀಶ್ ಕುಮಾರ್ ಅವರ ಆಪ್ತ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಲಾಲನ್ ಸಿಂಗ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Tue, 4 July 23

ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್