ಬಿಹಾರದ ಸಾರಣ್ ಜಿಲ್ಲೆಯಲ್ಲಿ ದೋಣಿ ಮುಳುಗಿ 18 ಮಂದಿ ನಾಪತ್ತೆ; 3 ಸಾವು

|

Updated on: Nov 01, 2023 | 9:34 PM

ಮಾಂಝಿ ಪ್ರದೇಶದಲ್ಲಿ ಘಟನಾ ಸ್ಥಳಕ್ಕೆ ಧಾವಿಸಿದ ಸಾರಣ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮನ್ ಸಮೀರ್, ಮುಳುಗುಗಾರರು ಮೂರು ಮೃತದೇಹಗಳನ್ನು ಹೊರತೆಗೆದಿರುವುದಾಗಿ ಹೇಳಿದರು. ಉತ್ತರ ಪ್ರದೇಶದ ಗಡಿಯಿಂದ ಸ್ವಲ್ಪ ದೂರದಲ್ಲಿರುವ ಮಟಿಯಾರ್ ಘಾಟ್ ಬಳಿ ದೋಣಿಯಲ್ಲಿ ಸುಮಾರು 24-25 ಜನರು ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ

ಬಿಹಾರದ ಸಾರಣ್ ಜಿಲ್ಲೆಯಲ್ಲಿ ದೋಣಿ ಮುಳುಗಿ 18 ಮಂದಿ ನಾಪತ್ತೆ; 3 ಸಾವು
ಪ್ರಾತಿನಿಧಿಕ ಚಿತ್ರ
Follow us on

ಪಾಟ್ನಾ ನವೆಂಬರ್ 01: ಬಿಹಾರದ (Bihar) ರಾಜಧಾನಿ ಪಾಟ್ನಾದಿಂದ (Patna) ಪಶ್ಚಿಮಕ್ಕೆ 100 ಕಿಮೀ ದೂರದಲ್ಲಿರುವ ಸಾರಣ್ ( Saran) ಜಿಲ್ಲೆಯ ಸರಯೂ ನದಿಯಲ್ಲಿ ದೋಣಿಯೊಂದು ಮುಳುಗಿ ಹದಿನೆಂಟು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೀರಿನ ರಭಸಕ್ಕೆ ದೋಣಿ ಮಗುಚಿ ಬಿದ್ದಾಗ ಸ್ಥಳೀಯರು ಮೂವರನ್ನು ರಕ್ಷಿಸಿದ್ದಾರೆ. ಉಳಿದವರು ಕೊಚ್ಚಿ ಹೋಗಿದ್ದು ಅವರನ್ನು ಪತ್ತೆ ಹಚ್ಚಲು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಮಾಂಝಿ ಪ್ರದೇಶದಲ್ಲಿ ಘಟನಾ ಸ್ಥಳಕ್ಕೆ ಧಾವಿಸಿದ ಸಾರಣ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮನ್ ಸಮೀರ್, ಮುಳುಗುಗಾರರು ಮೂರು ಮೃತದೇಹಗಳನ್ನು ಹೊರತೆಗೆದಿರುವುದಾಗಿ ಹೇಳಿದರು. ಉತ್ತರ ಪ್ರದೇಶದ ಗಡಿಯಿಂದ ಸ್ವಲ್ಪ ದೂರದಲ್ಲಿರುವ ಮಟಿಯಾರ್ ಘಾಟ್ ಬಳಿ ದೋಣಿಯಲ್ಲಿ ಸುಮಾರು 24-25 ಜನರು ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೋಣಿ ಮಗಚಿದ್ದು ಹೇಗೆ ಎಂಬುದಕ್ಕೆ ಕಾರಣ ಇನ್ನೂ ಪತ್ತೆಯಾಗಿಲ್ಲ.

ಇದನ್ನೂ ಓದಿ:  ಬಿಜೆಪಿ ಎಲ್ಲಾ ವಿರೋಧ ಪಕ್ಷಗಳ ಧ್ವನಿ ಅಡಗಿಸಲು ಪ್ರಯತ್ನಿಸುತ್ತಿದೆ: ಮಮತಾ ಬ್ಯಾನರ್ಜಿ

ಬೋಟ್ ಮಗಚಿದಾಗ ದೋಣಿಯಲ್ಲಿದ್ದ ಜನರು ಹಠಾತ್ತನೆ ದೋಣಿಯ ಒಂದು ಬದಿಗೆ ತೆರಳಿದ್ದಾರೆ ಎಂದು ಪ್ರಾಥಮಿಕ ವಿಚಾರಣೆಗಳು ಸೂಚಿಸಿವೆ ಎಂದು ಅಮನ್ ಸಮೀರ್ ಹೇಳಿದರು. ಜನ ಯಾಕೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ ಎಂಬುದು ತಿಳಿಯುತ್ತಿಲ್ಲ.

ಗುರುವಾರವೂ ಶೋಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:26 pm, Wed, 1 November 23