Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಗಾಳಿಯ ಗುಣಮಟ್ಟ ತೀರಾ ಕಳಪೆ, ನವೆಂಬರ್ 10ರವರೆಗೆ ಶಾಲೆಗಳು ಬಂದ್

ದೆಹಲಿಯ ಗಾಳಿಯ ಗುಣಮಟ್ಟ ತೀರಾ ಕಳಪೆಯಾಗಿದ್ದು, ನವೆಂಬರ್ 10ರವರೆಗೆ ಶಾಲೆಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ದೆಹಲಿ ಶಿಕ್ಷಣ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅತಿಶಿ ಭಾನುವಾರ ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಈ ಘೋಷಣೆ ಮಾಡಿದ್ದಾರೆ.

ದೆಹಲಿಯ ಗಾಳಿಯ ಗುಣಮಟ್ಟ ತೀರಾ ಕಳಪೆ, ನವೆಂಬರ್ 10ರವರೆಗೆ ಶಾಲೆಗಳು ಬಂದ್
ವಾಯು ಮಾಲಿನ್ಯImage Credit source: India Today
Follow us
ನಯನಾ ರಾಜೀವ್
|

Updated on: Nov 05, 2023 | 11:40 AM

ದೆಹಲಿಯ ಗಾಳಿಯ ಗುಣಮಟ್ಟ ತೀರಾ ಕಳಪೆಯಾಗಿದ್ದು, ನವೆಂಬರ್ 10ರವರೆಗೆ ಶಾಲೆಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ದೆಹಲಿ ಶಿಕ್ಷಣ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅತಿಶಿ ಭಾನುವಾರ ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಈ ಘೋಷಣೆ ಮಾಡಿದ್ದಾರೆ.

6-12ನೇ ತರಗತಿವರೆಗೆ ಆನ್​ಲೈನ್​ ತರಗತಿಗೆ ಅವಕಾಶವನ್ನು ನೀಡಲಾಗುತ್ತದೆ ಎಂದು ಅತಿಶಿ ಹೇಳಿದ್ದಾರೆ. ಇದಕ್ಕೂ ಮೊದಲು, ದೆಹಲಿ ಸರ್ಕಾರವು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳನ್ನು ನವೆಂಬರ್ 2 ರವರೆಗೆ ಮುಚ್ಚಲು ಆದೇಶಿಸಿತ್ತು. ಮಾಲಿನ್ಯ ಮಟ್ಟ ಹದಗೆಡುತ್ತಿರುವ ಕಾರಣ ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚುವುದಾಗಿ ಘೋಷಿಸಿದ್ದಾರೆ.

ಬೆಳಗ್ಗೆ 7 ಗಂಟೆ ಸುಮಾರಿಗೆ ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ 460 ಇತ್ತು. ಕೃಷಿ ಬೆಂಕಿ ಮತ್ತು ಪ್ರತಿಕೂಲ ಹವಾಮಾನ, ಗಾಳಿಯ ವೇಗ ಕಡಿಮೆಯಾಗುವ ಹಿನ್ನೆಲೆ ದೆಹಲಿಯಲ್ಲಿ ಮುಂದಿನ 15-20 ದಿನಗಳ ಕಾಲ ತೀವ್ರ ಪ್ರಮಾಣದಲ್ಲಿ ವಾಯು ಮಾಲಿನ್ಯ ಕಂಡು ಬರಲಿದೆ ಎಂದು ಎಚ್ಚರಿಸಲಾಗಿತ್ತು. ವರದಿ ಬೆನ್ನಲ್ಲೇ ದೆಹಲಿಯಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗಿದ್ದು, ಜನರು ಉಸಿರಾಡಲು ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮತ್ತಷ್ಟು ಓದಿ: ದೆಹಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ: ಶಾಲೆಗಳಿಗೆ 2 ದಿನ ರಜೆ; ನಿರ್ಮಾಣ ಕೆಲಸಕ್ಕೆ ನಿಷೇಧ

ಭತ್ತದ ಹುಲ್ಲು ಸುಡುವುದನ್ನು ತಡೆಯುವ ರಾಜ್ಯದ ಕ್ರಿಯಾ ಯೋಜನೆಯ ಪ್ರಕಾರ ರಾಜ್ಯದಲ್ಲಿ ಸುಮಾರು 31 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿದೆ. ಇದು ಸುಮಾರು 16 ಮಿಲಿಯನ್ ಟನ್‌ಗಳಷ್ಟು ಭತ್ತದ ಹುಲ್ಲು ಉತ್ಪಾದಿಸುತ್ತದೆ.

ಹರ್ಯಾಣದಲ್ಲಿ ಸುಮಾರು 14.82 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಭತ್ತ ಬೆಳೆಯಲಾಗುತ್ತಿದೆ ಎಂದು ಅಂದಾಜಿಸಲಾಗಿದೆ. ಇದು 7.3 ಮಿಲಿಯನ್ ಟನ್‌ಗಳಷ್ಟು ಭತ್ತದ ಹುಲ್ಲು ಉತ್ಪಾದಿಸುವ ನಿರೀಕ್ಷೆಯಿದೆ.

ನವದೆಹಲಿ ಮುನ್ಸಿಪಲ್ ಕೌನ್ಸಿಲ್ (NDMC) ನಗರದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯವನ್ನು ಎದುರಿಸಲು ಬಹು ಕ್ರಮಗಳನ್ನು ತೆಗೆದುಕೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ