ಗುಜರಾತ್​​ನಲ್ಲಿ ತೀವ್ರ ಉಷ್ಣ ಅಲೆ ವಾತಾವರಣ; ರಾಜ್ಯಾದ್ಯಂತ ಹಳದಿ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ

ಉಷ್ಣ ಅಲೆ ಹೆಚ್ಚಳದ ಬಗ್ಗೆ ಎಚ್ಚರಿಕೆ ನೀಡಿದ ಗುಜರಾತ್​ ಹವಾಮಾನ ಇಲಾಖೆ ನಿರ್ದೇಶಕಿ ಮನೋರಮಾ ಮೊಹಂತಿ, ಗುಜರಾತ್​​ನಾದ್ಯಂತ ಇನ್ನು ಕೆಲವು ದಿನಗಳಲ್ಲಿ ಬೇಸಿಗೆಯ ತೀವ್ರತೆ ಇನ್ನಷ್ಟು ಹೆಚ್ಚಲಿದೆ ಎಂದು ಹೇಳಿದ್ದಾರೆ.

ಗುಜರಾತ್​​ನಲ್ಲಿ ತೀವ್ರ ಉಷ್ಣ ಅಲೆ ವಾತಾವರಣ; ರಾಜ್ಯಾದ್ಯಂತ ಹಳದಿ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Mar 17, 2022 | 9:28 AM

ಗುಜರಾತ್​​ನಲ್ಲಿ ಉಷ್ಣ ಅಲೆ (Heat Wave) ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅಲ್ಲಿ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್​ ಘೋಷಿಸಿದೆ. ದೇಶಾದ್ಯಂತ ಬೇಸಿಗೆ ಶುರುವಾಗಿದೆ. ಅದರಲ್ಲೂ ಗುಜರಾತ್​​ನಲ್ಲಿ ದಾಖಲೆಯ ತಾಪಮಾನ ಈಗಲೇ ಕಾಣಿಸಿಕೊಂಡಿದೆ. ರಾಜ್ಯದ ಸುಮಾರು 10 ನಗರಗಳಲ್ಲಿ, ಉಷ್ಣತೆ  40 ಡಿಗ್ರಿ ಸೆಲ್ಸಿಯಸ್​ ದಾಟಿದೆ.  20 ವರ್ಷಗಳಲ್ಲಿ ಇದೇ ಮೊದಲಬಾರಿಗೆ ಅಹ್ಮದಾಬಾದ್​​ನಲ್ಲಿ, ಮಾರ್ಚ್ 15ರಂದು ಉಷ್ಣತೆ 41.5 ಡಿಗ್ರಿ ಸೆಲ್ಸಿಯಸ್​ ದಾಟಿತ್ತು.ಸುರೇಂದ್ರನಗರದಲ್ಲಿ ಗರಿಷ್ಠ 41.7 ಡಿಗ್ರಿ ಸೆಲ್ಸಿಯಸ್​ ಆಗಿತ್ತು. 

ಉಷ್ಣ ಅಲೆ ಹೆಚ್ಚಳದ ಬಗ್ಗೆ ಎಚ್ಚರಿಕೆ ನೀಡಿದ ಗುಜರಾತ್​ ಹವಾಮಾನ ಇಲಾಖೆ ನಿರ್ದೇಶಕಿ ಮನೋರಮಾ ಮೊಹಂತಿ, ಗುಜರಾತ್​​ನಾದ್ಯಂತ ಇನ್ನು ಕೆಲವು ದಿನಗಳಲ್ಲಿ ಬೇಸಿಗೆಯ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಜನರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು ಇರಬೇಕು, ತಾಪಮಾನದಿಂದ ಆದಷ್ಟು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಗುಜರಾತ್​​ನಲ್ಲಿ ತೀವ್ರ ಉಷ್ಣ ಅಲೆ ಪರಿಸ್ಥಿತಿ ಇನ್ನಷ್ಟು ದಿನಗಳ ಕಾಲ ಇರಲಿದೆ. ಅದರಲ್ಲಿ ಸೌರಾಷ್ಟ್ರ ಮತ್ತು ಕುಚ್​ ಪ್ರದೇಶದಲ್ಲಿ ಇನ್ನು 24 ಗಂಟೆಗಳ ಕಾಲ ಇದೇ ಪರಿಸ್ಥಿತಿ ಇರಲಿದ್ದು ಉತ್ತರ ಗುಜರಾತ್​​ನಲ್ಲಿ ಇನ್ನೆರಡು ದಿನ ಗರಿಷ್ಠ ಉಷ್ಣತೆ ಇರಲಿದೆ. ಅದಾದ ಬಳಿಕ ಉಷ್ಣ ಅಲೆ ಸ್ವಲ್ಪ ದುರ್ಬಲಗೊಂಡರೂ, ತಾಪಮಾನ ಕಡಿಮೆಯಾಗುವುದಿಲ್ಲ ಎಂದು ಮೊಹಂತಿ ಎಚ್ಚರಿಸಿದ್ದಾರೆ.

ಮಾರ್ಚ್​ 16ರಂದು ಟ್ವೀಟ್ ಮಾಡಿರುವ ಭಾರತೀಯ ಹವಾಮಾನ ಇಲಾಖೆ, ಇನ್ನೆರಡು ದಿನಗಳ ಕಾಲ ರಾಜಸ್ಥಾನದಲ್ಲಿ ಗಂಭೀರ ಸ್ವರೂಪದ ಉಷ್ಣ ಅಲೆ ಮತ್ತು ಜಮ್ಮು ವಿಭಾಗ, ಹಿಮಾಚಲ ಪ್ರದೇಶ, ಗುಜರಾತ್​, ಕೊಂಕಣ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ತೆಲಂಗಾಣ ಮತ್ತು ಒಡಿಶಾಗಳಲ್ಲಿ ಸಾಮಾನ್ಯ ಉಷ್ಣ ಅಲೆ ಏಳಲಿದೆ ಎಂದು ಎಚ್ಚರಿಕೆ ನೀಡಿತ್ತು.

ಇದನ್ನೂ ಓದಿ: Cyclone Asani: ಮುಂದಿನವಾರ ಅಪ್ಪಳಿಸಲಿದೆ ಅಸನಿ ಚಂಡಮಾರುತ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು