Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರಕ್ಕೊಳಗಾದ ಹೆಣ್ಣಿಗೆ ಗರ್ಭಪಾತದ ಹಕ್ಕಿದೆ; ಅಲಹಾಬಾದ್​ ಹೈಕೋರ್ಟ್​ ಮಹತ್ವದ ತೀರ್ಪು

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಯುವತಿ ಅಥವಾ ಮಹಿಳೆ ಒಂದುವೇಳೆ ಗರ್ಭಿಣಿಯಾದರೆ ಆಕೆಗೆ ತನ್ನ ಗರ್ಭಧಾರಣೆಯನ್ನು ಅಂತ್ಯಗೊಳಿಸುವ ಹಕ್ಕಿದೆ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಲೈಂಗಿಕ ದೌರ್ಜನ್ಯಕ್ಕೊಳಗಾದ 17 ವರ್ಷದ ಬಾಲಕಿ ಸಲ್ಲಿಸಿದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಅಪ್ರಾಪ್ತ ವಯಸ್ಕಳಾಗಿರುವುದರಿಂದ ಆಕೆ ತನಗೆ ಮಗುವಿನ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಅತ್ಯಾಚಾರಕ್ಕೊಳಗಾದ ಹೆಣ್ಣಿಗೆ ಗರ್ಭಪಾತದ ಹಕ್ಕಿದೆ; ಅಲಹಾಬಾದ್​ ಹೈಕೋರ್ಟ್​ ಮಹತ್ವದ ತೀರ್ಪು
Allahabad High Court
Follow us
ಸುಷ್ಮಾ ಚಕ್ರೆ
|

Updated on: Feb 12, 2025 | 10:11 PM

ಅಲಹಾಬಾದ್: ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿದ್ದ 17 ವರ್ಷದ ಬಾಲಕಿಗೆ ಮಗುವನ್ನು ಇಟ್ಟುಕೊಳ್ಳಬೇಕೆ ಅಥವಾ ಬೇಡವೇ ಎಂಬುದನ್ನು ಆಯ್ಕೆ ಮಾಡಲು ಅವಕಾಶ ನೀಡಿರುವ ಅಲಹಾಬಾದ್ ಹೈಕೋರ್ಟ್ ತಾನು ತಾಯಿಯಾಗಬೇಕೇ ಅಥವಾ ಗರ್ಭಪಾತ ಮಾಡಿಸಿಕೊಳ್ಳಬೇಕೇ ಎಂಬುದನ್ನು ನಿರ್ಧರಿಸಲು ಅವಕಾಶ ನೀಡಿದೆ. ನ್ಯಾಯಮೂರ್ತಿಗಳಾದ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರನ್ನೊಳಗೊಂಡ ಇಬ್ಬರು ನ್ಯಾಯಾಧೀಶರ ಪೀಠವು 17 ವರ್ಷದ ಅತ್ಯಾಚಾರ ಸಂತ್ರಸ್ತೆಯ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಅಂತ್ಯಗೊಳಿಸಲು ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದೆ.

ಅತ್ಯಾಚಾರದಿಂದ ಯುವತಿ ಅಥವಾ ಮಹಿಳೆ ಗರ್ಭಿಣಿಯಾದರೆ ಆ ಮಗುವನ್ನು ಉಳಿಸಿಕೊಳ್ಳಬೇಕೇ, ಬೇಡವೇ ಎಂದು ನಿರ್ಧರಿಸಲು ಆಕೆಗೆ ಹಕ್ಕಿದೆ. ಕಾನೂನು ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಗೆ ತನ್ನ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಅಂತ್ಯಗೊಳಿಸಲು ಹಕ್ಕನ್ನು ಒದಗಿಸುತ್ತದೆ ಎಂದು ಕೋರ್ಟ್ ಹೇಳಿದೆ.

ವೈದ್ಯಕೀಯ ಗರ್ಭಪಾತ ಕಾಯ್ದೆಯ ಸೆಕ್ಷನ್ 3(2) ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಗೆ ತನ್ನ ಗರ್ಭಾವಸ್ಥೆಯನ್ನು ವೈದ್ಯಕೀಯವಾಗಿ ಅಂತ್ಯಗೊಳಿಸುವ ಹಕ್ಕನ್ನು ಒದಗಿಸುತ್ತದೆ. ಆಕೆಗೆ ವೈದ್ಯಕೀಯವಾಗಿ ಗರ್ಭಪಾತವನ್ನು ಮಾಡಿಸಿಕೊಳ್ಳುವ ಅಥವಾ ಆ ಮಗುವನ್ನು ಹೆತ್ತು ಅದರ ಜವಾಬ್ದಾರಿ ವಹಿಸಿಕೊಳ್ಳುವ ಎರಡೂ ಹಕ್ಕುಗಳಿರುತ್ತದೆ. ಆಕೆಯ ಮಾತೃತ್ವದ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಹಕ್ಕನ್ನು ನಿರಾಕರಿಸುವುದು ಅವಳ ಘನತೆಯಿಂದ ಬದುಕುವ ಮಾನವ ಹಕ್ಕನ್ನು ನಿರಾಕರಿಸುವುದಕ್ಕೆ ಸಮಾನವಾಗಿರುತ್ತದೆ ಎಂದು ನ್ಯಾಯಪೀಠ ಹೇಳಿದೆ. ಒಂದುವೇಳೆ ಆ ಮಗುವನ್ನು ಆಕೆ ಹೆರಲೇಬೇಕೆಂದು ಒತ್ತಾಯಿಸಿದರೆ ಅದು ಆಕೆಗೆ ಜೀವನಪರ್ಯಂತ ನೋವು, ದುಃಖ ನೀಡುವ ಸಂಗತಿಯಾಗುವುದರಿಂದ ಕೋರ್ಟ್ ಈ ತೀರ್ಪು ನೀಡಿದೆ ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ಚರಂಡಿಯಲ್ಲಿ ಪತ್ತೆಯಾಯ್ತು ಭ್ರೂಣ, ಅಪ್ರಾಪ್ತನೊಂದಿಗಿನ ಸಂಬಂಧದಿಂದ ಗರ್ಭಿಣಿಯಾಗಿದ್ದ ಬಾಲಕಿ

17 ವರ್ಷದ ಬಾಲಕಿ ನೀಡಿದ ದೂರಿನ ಅನ್ವಯ, ಆಕೆ ಪ್ರೀತಿಸುತ್ತಿದ್ದ ಆರೋಪಿಯು ತನ್ನೊಂದಿಗೆ ಮನೆ ಬಿಟ್ಟು ಬರುವಂತೆ ಆಮಿಷವೊಡ್ಡಿದ್ದ. ಆದರೆ, ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಬಳಿಕ ಅವಳಿಂದ ದೂರವಾಗಿದ್ದ. ನಂತರ ಆಕೆಯ ತಂದೆ ನೀಡಿದ ದೂರಿನ ಮೇರೆಗೆ ಆಕೆಗೆ ಪೊಲೀಸರು ಆಕೆಯನ್ನು ಪತ್ತೆಹಚ್ಚಿದ್ದರು. ಆದರೆ, ತೀವ್ರ ಹೊಟ್ಟೆನೋವಿನಿಂದ ಆಕೆ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಾಗ ಆಕೆ ಮೂರೂವರೆ ತಿಂಗಳ ಗರ್ಭಿಣಿಯಾಗಿರುವುದು ಗೊತ್ತಾಯಿತು. ಆಕೆ ತಾನು ನಂಬಿ ಹೋದ ಪ್ರೇಮಿ ಪದೇಪದೆ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಹೇಳಿದ್ದಾಳೆ.

ಆದರೆ, ಆಕೆಯಿನ್ನೂ ಅಪ್ರಾಪ್ತೆಯಾಗಿರುವ ಕಾರಣದಿಂದ ತಾನು ಮಗುವಿನ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಬಯಸುವುದಿಲ್ಲ ಎಂದು ಹೇಳುವ ಮೂಲಕ ಅವಳು ಕೋರ್ಟ್ ಮೆಟ್ಟಿಲೇರಿದ್ದಳು. ಅವಳು ಈಗ 19 ವಾರಗಳ ಗರ್ಭಿಣಿಯಾಗಿದ್ದಾಳೆ. ಈ ಗರ್ಭಧಾರಣೆಯು ತನಗೆ ದುಃಖವನ್ನು ಉಂಟುಮಾಡುತ್ತಿದೆ ಮತ್ತು ಮಾನಸಿಕ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂದು ವಾದದಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: ಅತ್ತಿಗೆಯ ಸಹೋದರಿಯನ್ನು ಅತ್ಯಾಚಾರ ಮಾಡಿ, ಗರ್ಭಿಣಿಯಾದಾಗ ನಡುನೀರಿನಲ್ಲಿ ಕೈಬಿಟ್ಟು ಹೋದ ವ್ಯಕ್ತಿ

ಇಂತಹ ಪ್ರಕರಣಗಳಲ್ಲಿ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸಲು ಅವಕಾಶ ನೀಡುವ ಸುಪ್ರೀಂ ಕೋರ್ಟ್ ಮತ್ತು ದೆಹಲಿ ಹೈಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿದ ಹೈಕೋರ್ಟ್, ಲೈಂಗಿಕ ದೌರ್ಜನ್ಯದಿಂದ ಗರ್ಭ ಧರಿಸಿದ ಮಹಿಳೆ ಆ ಮಗುವನ್ನು ಇಟ್ಟುಕೊಳ್ಳುವುದಕ್ಕೆ ಒಪ್ಪುವ ಅಥವಾ ನಿರಾಕರಿಸುವ ಹಕ್ಕನ್ನು ಹೊಂದಿದ್ದಾಳೆ. ಆ ಮಗುವನ್ನು ಇಟ್ಟುಕೊಳ್ಳಬೇಕೆ ಅಥವಾ ಬೇಡವೇ ಎಂಬುದನ್ನು ಆ ಮಹಿಳೆಯೇ ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒತ್ತುವರಿ ತೆರವು ಕಾರ್ಯಾಚರಣೆಯಿಂದ ಕುಮಾರಸ್ವಾಮಿ ಭಯಗೊಂಡಿಲ್ಲ: ಮಂಜು
ಒತ್ತುವರಿ ತೆರವು ಕಾರ್ಯಾಚರಣೆಯಿಂದ ಕುಮಾರಸ್ವಾಮಿ ಭಯಗೊಂಡಿಲ್ಲ: ಮಂಜು
ಯಾದಗಿರಿ ಜಿಲ್ಲೆಯ ಜನ ಹನಿಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ: ಶರಣಗೌಡ
ಯಾದಗಿರಿ ಜಿಲ್ಲೆಯ ಜನ ಹನಿಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ: ಶರಣಗೌಡ
ಗ್ಯಾರಂಟಿ ಯೋಜನೆಗಳ ಬಗ್ಗೆ ತನ್ನದೇನೂ ತಕರಾರಿಲ್ಲವೆಂದ ಶರಣಗೌಡ ಕಂದ್ಕೂರ್
ಗ್ಯಾರಂಟಿ ಯೋಜನೆಗಳ ಬಗ್ಗೆ ತನ್ನದೇನೂ ತಕರಾರಿಲ್ಲವೆಂದ ಶರಣಗೌಡ ಕಂದ್ಕೂರ್
ಮಜಾ ಟಾಕೀಸ್​ಗೆ ಮಜಾ ಹೆಚ್ಚಿಸೋಕೆ ಬಂದ ಕ್ರಿಕೆಟ್ ಕಾಮೆಂಟೇಟರ್ಸ್
ಮಜಾ ಟಾಕೀಸ್​ಗೆ ಮಜಾ ಹೆಚ್ಚಿಸೋಕೆ ಬಂದ ಕ್ರಿಕೆಟ್ ಕಾಮೆಂಟೇಟರ್ಸ್
ಬಿಜೆಪಿ ಯಾವತ್ತಿಗೂ ಮುಸ್ಲಿಂ ವಿರೋಧಿ ಪಕ್ಷ ಅಲ್ಲ: ವಿಜಯೇಂದ್ರ
ಬಿಜೆಪಿ ಯಾವತ್ತಿಗೂ ಮುಸ್ಲಿಂ ವಿರೋಧಿ ಪಕ್ಷ ಅಲ್ಲ: ವಿಜಯೇಂದ್ರ
ದರ್ಶನ್ ಮಾದರಿ ಅನುಸರಿಸುವಂತೆ ಬೇರೆ ಸದಸ್ಯರನ್ನು ಕೋರಿದ ಖಾದರ್
ದರ್ಶನ್ ಮಾದರಿ ಅನುಸರಿಸುವಂತೆ ಬೇರೆ ಸದಸ್ಯರನ್ನು ಕೋರಿದ ಖಾದರ್
ಖಾಸಗಿ ಸಂಸ್ಥೆಯ ಸಿಬ್ಬಂದಿ ಇದ್ದ ವಾಹನಕ್ಕೆ ಬೆಂಕಿ, ನಾಲ್ಕು ಮಂದಿ ಸಜೀವ ದಹನ
ಖಾಸಗಿ ಸಂಸ್ಥೆಯ ಸಿಬ್ಬಂದಿ ಇದ್ದ ವಾಹನಕ್ಕೆ ಬೆಂಕಿ, ನಾಲ್ಕು ಮಂದಿ ಸಜೀವ ದಹನ
ಬಹಳಷ್ಟು ಪಡಿತರ ಅಂಗಡಿಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ವಂಚನೆ
ಬಹಳಷ್ಟು ಪಡಿತರ ಅಂಗಡಿಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ವಂಚನೆ
ಕಾಳಿಂಗ ಸರ್ಪದೊಂದಿಗೆ ಭೀಕರ ಕಾಳಗ: ಮಕ್ಕಳ ಜೀವ ಉಳಿಸಿ ಪ್ರಾಣ ಬಿಟ್ಟ ಶ್ವಾನ
ಕಾಳಿಂಗ ಸರ್ಪದೊಂದಿಗೆ ಭೀಕರ ಕಾಳಗ: ಮಕ್ಕಳ ಜೀವ ಉಳಿಸಿ ಪ್ರಾಣ ಬಿಟ್ಟ ಶ್ವಾನ
ಬಾಹ್ಯಾಕಾಶದಿಂದ ಭೂಮಿಗೆ ಮರಳಿದ ಬಳಿಕ ಕ್ಯಾಪ್ಸುಲ್​ನಿಂದ ಹೊರ ಬಂದ ಸುನಿತಾ
ಬಾಹ್ಯಾಕಾಶದಿಂದ ಭೂಮಿಗೆ ಮರಳಿದ ಬಳಿಕ ಕ್ಯಾಪ್ಸುಲ್​ನಿಂದ ಹೊರ ಬಂದ ಸುನಿತಾ