AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ ಕ್ರೀಡಾ ಸಚಿವ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ, ದೂರು ದಾಖಲು

ಹರ್ಯಾಣದ ಕ್ರೀಡಾ ಸಚಿವ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.ಇಂಡಿಯನ್ ನ್ಯಾಷನಲ್ ಲೋಕದಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಹಿಳೆ ಬಿಜೆಪಿ ನಾಯಕ ಸಿಂಗ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಹರ್ಯಾಣ ಕ್ರೀಡಾ ಸಚಿವ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ, ದೂರು ದಾಖಲು
Sandeep Singh
TV9 Web
| Updated By: ನಯನಾ ರಾಜೀವ್|

Updated on: Jan 01, 2023 | 10:28 AM

Share

ಹರ್ಯಾಣದ ಕ್ರೀಡಾ ಸಚಿವ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಇಂಡಿಯನ್ ನ್ಯಾಷನಲ್ ಲೋಕದಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಹಿಳೆ ಬಿಜೆಪಿ ನಾಯಕ ಸಿಂಗ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದೀಗ ಸಚಿವ ವಿರುದ್ಧ ದೂರು ದಾಖಲಿಸಲಾಗಿದೆ.  ಆದರೆ ಸಚಿವರು ಇದನ್ನು ಆಧಾರ ರಹಿತ ಎಂದು ಹೇಳಿದ್ದು, ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಮಹಿಳಾ ಕೋಚ್ ಪೊಲೀಸರ ಮುಂದೆ ಹಾಜರಾಗಿ ಬಿಜೆಪಿ ಸಚಿವರ ವಿರುದ್ಧ ಲಿಖಿತ ದೂರು ನೀಡಿದ್ದಾರೆ.

ದೂರುದಾರರು, ತಾನು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ. ನನಗೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇವೆ, ಚಂಡೀಗಢ ಪೊಲೀಸರು ನನ್ನ ದೂರಿನ ಬಗ್ಗೆ ನ್ಯಾಯವಾದ ತನಿಖೆ ನಡೆಸುತ್ತಾರೆ ಎಂದು ಭಾವಿಸಿದ್ದೇನೆ ಎಂದರು.

ಜಿಮ್​ನಲ್ಲಿ ಅವರು ನನ್ನನ್ನು ಮೊದಲ ಬಾರಿಗೆ ನೋಡಿದ್ದರು, ಬಳಿಕ ಇನ್​ಸ್ಟಾಗ್ರಾಂನಲ್ಲಿ ಸಂಪರ್ಕಿಸಿದ್ದರು. ಅವರು ಕಳುಹಿಸಿದ ಸಂದೇಶವು ಕಣ್ಮರೆಯಾಗುತ್ತಿರುವ ಮೋಡ್​ನಲ್ಲಿದ್ದಿದ್ದರಿಂದ ಎಲ್ಲವೂ ಡಿಲೀಟ್ ಆಗಿದೆ ಎಂದರು.

ತನಗೆ ಭದ್ರತೆ ನೀಡುವಂತೆ ಮಹಿಳೆ ಒತ್ತಾಯಿಸಿದ್ದಾರೆ, ದೂರಿನ ಸ್ವೀಕೃತಿಯನ್ನು ಹಿರಿಯ ಪೊಲೀಸ್ ಅಧಿಕಾರಿ ಖಚಿತಪಡಿಸಿದ್ದಾರೆ. ಏತನ್ಮಧ್ಯೆ, ರೋಹ್ಟಕ್‌ನಲ್ಲಿ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಈ ಬಗ್ಗೆ ನ್ಯಾಯಯುತ ತನಿಖೆಗೆ ಒತ್ತಾಯಿಸಿದರು. ರಾಜ್ಯ ಸಚಿವರ ವಿರುದ್ಧದ ಆರೋಪಗಳ ಕುರಿತ ಪ್ರಶ್ನೆಗಳಿಗೆ ಹೂಡಾ ಉತ್ತರಿಸಿದರು.

ಹರ್ಯಾಣ ಮುಖ್ಯಮಂತ್ರಿಯನ್ನು ಭೇಟಿಯಾಗಲು ಪ್ರಯತ್ನಿಸುತ್ತಿರುವುದಾಗಿ ಹೇಳಿದರು. ತನ್ನ ಪೊಲೀಸ್ ದೂರಿನಲ್ಲಿ, ಸಚಿವರ ವಿರುದ್ಧ ಮಾಡಿದ ಹೆಚ್ಚಿನ ಆರೋಪಗಳನ್ನು ಉಲ್ಲೇಖಿಸಿದ್ದಾರೆ ಮತ್ತು ಬಿಜೆಪಿ ನಾಯಕನ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ