ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಅಧ್ಯಕ್ಷ ಶರದ್ ಪವಾರ್ (Sharad Pawar) ವಿರೋಧ ಪಕ್ಷದ ಮೈತ್ರಿಯ ನೇತೃತ್ವ ವಹಿಸಲಿದ್ದಾರೆ ಎಂಬುದನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಬೆಂಬಲಿಸಿದ್ದು, ಅದಕ್ಕಿಂತ ಸಂತೋಷಕರವಾದದ್ದು ಬೇರೊಂದಿಲ್ಲ ಎಂದು ಹೇಳಿದರು. ಮುಂಬೈನಲ್ಲಿ ಶರದ್ ಪವಾರ್ ಅವರನ್ನು ಭೇಟಿ ಮಾಡಿದ ನಂತರ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಿತೀಶ್ ಕುಮಾರ್, ನಾವು ದೊಡ್ಡ ಒಕ್ಕೂಟವನ್ನು ರಚಿಸಲು ಶ್ರಮಿಸುತ್ತಿದ್ದೇವೆ. ಹೆಚ್ಚು ವಿರೋಧ ಪಕ್ಷಗಳು ಒಗ್ಗೂಡಿದರೆ ಅದು ದೇಶದ ಹಿತಾಸಕ್ತಿಯಲ್ಲಿ ಉತ್ತಮವಾಗಿದೆ ಎಂದಿದ್ದಾರೆ. 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ವಿರೋಧ ಪಕ್ಷಗಳ ಒಗ್ಗಟ್ಟನ್ನು ಬಲಪಡಿಸುವ ಪ್ರಯತ್ನಗಳ ನಡುವೆ ನಿತೀಶ್ ಕುಮಾರ್ ಅವರು ತಮ್ಮ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರೊಂದಿಗೆ ದಕ್ಷಿಣ ಮುಂಬೈನಲ್ಲಿರುವ ಪವಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು.
ಇಂದು ಬಿಜೆಪಿ ಮಾಡುತ್ತಿರುವುದು ದೇಶದ ಹಿತಾಸಕ್ತಿಯಲ್ಲ. ಇಂತಹ ಪರಿಸ್ಥಿತಿಯಲ್ಲಿ ಹೆಚ್ಚು ಹೆಚ್ಚು ವಿರೋಧ ಪಕ್ಷಗಳು ಒಗ್ಗೂಡಿದರೆ ದೇಶಕ್ಕೆ ಒಳ್ಳೆಯದಾಗುತ್ತದೆ ಎಂದರು. ಇದು ದೇಶದ ಹಿತಾಸಕ್ತಿಯಲ್ಲಿ ನಡೆಯುತ್ತಿದೆ ಎಂದು ನಾನು ಈಗ ಹೇಳಬಲ್ಲೆ ಎಂದಿದ್ದಾರೆ ಕುಮಾರ್.
ಪ್ರತಿಪಕ್ಷಗಳ ಮೈತ್ರಿಕೂಟದ ಪ್ರಮುಖ ಮುಖ ಪವಾರ್ ಆಗುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರ್, ಅದಕ್ಕಿಂತ ಸಂತೋಷಕರವಾದದ್ದೇನೂ ಇರುವುದಿಲ್ಲ. ಅವರು ತಮ್ಮ ಪಕ್ಷಕ್ಕಾಗಿ ಮಾತ್ರವಲ್ಲದೆ ಇಡೀ ದೇಶಕ್ಕಾಗಿ ಹೆಚ್ಚು ಹುರುಪಿನಿಂದ ಕೆಲಸ ಮಾಡಬೇಕು ಎಂದು ನಾನು ಅವರಿಗೆ ಹೇಳಿದ್ದೇನೆ.
#WATCH | When asked if Sharad Pawar will be the main face of the Opposition alliance, Bihar CM Nitish Kumar says, “There will be nothing more delightful than that…I have told him that he has to work strongly not only for his party but the entire country.”
Sharad Pawar says,… pic.twitter.com/pIsludqmbj
— ANI (@ANI) May 11, 2023
ಈ ಚರ್ಚೆಗಳು ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಭಾಗವಾಗಿದೆ ಎಂದು ಪವಾರ್ ಹೇಳಿದರು. ಕುಮಾರ್ ಮತ್ತು ಪವಾರ್ ಇಬ್ಬರೂ ತಮ್ಮ ತಮ್ಮ ರಾಜ್ಯಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ.
ಪ್ರಜಾಪ್ರಭುತ್ವವನ್ನು ಉಳಿಸಲು, ಒಟ್ಟಾಗಿ ಕೆಲಸ ಮಾಡುವುದು ಮುಖ್ಯ. ದೇಶದ ಸ್ಥಿತಿಯನ್ನು ನೋಡಿದ ನಂತರ, ನಾವು ಒಟ್ಟಾಗಿ ಕೆಲಸ ಮಾಡಿದರೆ, ಪರ್ಯಾಯಕ್ಕೆ ಬೆಂಬಲವಿದೆ ಎಂದು ತೋರುತ್ತದೆ ಎನ್‌ಸಿಪಿ ಮುಖ್ಯಸ್ಥರು ಹೇಳಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆ ಬಗ್ಗೆ ಮಾತನಾಡಿದ ಅವರು ನನ್ನ ಮಾಹಿತಿಯ ಪ್ರಕಾರ ಅಲ್ಲಿನ ಜನರು ಬಿಜೆಪಿಯನ್ನು ಕಿತ್ತೊಗೆದು ಜಾತ್ಯತೀತ ಸರ್ಕಾರವನ್ನು ಆಯ್ಕೆ ಮಾಡುತ್ತಾರೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ ಸೇವಾ ಕಾರ್ಯದರ್ಶಿಯನ್ನು ಹುದ್ದೆಯಿಂದ ತೆಗೆದುಹಾಕಿದ ಕೇಜ್ರಿವಾಲ್ ಸರ್ಕಾರ
ಇಂದು ನನ್ನ ಮುಂಬೈ ನಿವಾಸದಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಿ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಜಿ ಅವರನ್ನು ಸ್ವಾಗತಿಸುತ್ತೇನೆ. ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಏಕತೆಯನ್ನು ಬಲಪಡಿಸಲು ನಾವು ಸಂಕ್ಷಿಪ್ತವಾಗಿ ಚರ್ಚಿಸಿದ್ದೇವೆ ಎಂದು ಶರದ್ ಪವಾರ್ ನಿತೀಶ್ ಕುಮಾರ್ ಅವರನ್ನು ಭೇಟಿಯಾದ ನಂತರ ಟ್ವೀಟ್ ಮಾಡಿದ್ದಾರೆ.
2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ವಿರುದ್ಧ ಬಣವನ್ನು ಬಲಪಡಿಸಲು ವಿರೋಧ ಪಕ್ಷದ ನಾಯಕರನ್ನು ಒಂದೇ ಸೂರಿನಡಿ ತರುವ ಪ್ರಯತ್ನಗಳ ಭಾಗವಾಗಿ ಇಂದು ಬೆಳಗ್ಗೆ ಕುಮಾರ್ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಮುಂಬೈನ ‘ಮಾತೋಶ್ರೀ’ ಯಲ್ಲಿ ಭೇಟಿಯಾದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ