Sharad Pawar: ಶರದ್ ಪವಾರ್ ಬಣಕ್ಕೆ ಹೊಸ ಹೆಸರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಶರದ್ಚಂದ್ರ ಪವಾರ್

ಎನ್​​ಸಿಪಿ ಪಕ್ಷ ಅಜಿತ್ ಪವಾರ್ ಬಣ ಮತ್ತು ಶರದ್ ಪವಾರ್ ಬಣ ಎಂದು ಒಡೆದು ಹೋದ ನಂತರ ಚುನಾವಣಾ ಆಯೋಗವು ಮಂಗಳವಾರ ಅಜಿತ್ ಪವಾರ್ ನೇತೃತ್ವದ ಬಣವೇ ನಿಜವಾದ ಎನ್​​ಸಿಪಿ ಎಂದು ಹೇಳಿತ್ತು. ಅದೇ ವೇಳೆ ಶರದ್ ಪವಾರ್ ಬಣಕ್ಕೆ ಹೊಸ ಹೆಸರು ಸೂಚಿಸುವಂತೆ ಆಯೋಗ ಪ್ರಸ್ತುತ ಬಣಕ್ಕೆ ಹೇಳಿದ್ದು ಈಗ ಹೊಸ ಹೆಸರನ್ನು ಚುನಾವಣಾ ಆಯೋಗ ನೀಡಿದೆ. ಇನ್ಮುಂದೆ ಶರದ್ ಪವಾರ್ ಬಣ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಶರದ್ಚಂದ್ರ ಪವಾರ್ ಎಂದು ಗುರುತಿಸಲ್ಪಡಲಿದೆ.

Sharad Pawar: ಶರದ್ ಪವಾರ್ ಬಣಕ್ಕೆ ಹೊಸ ಹೆಸರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಶರದ್ಚಂದ್ರ ಪವಾರ್
ಶರದ್ ಪವಾರ್
Follow us
ರಶ್ಮಿ ಕಲ್ಲಕಟ್ಟ
|

Updated on:Feb 07, 2024 | 7:50 PM

ಮುಂಬೈ: ತಾವು ಸ್ಥಾಪಿಸಿದ ಪಕ್ಷವಾದ ಎನ್‌ಸಿಪಿಯ (NCP) ಹೆಸರು ಮತ್ತು ಚಿಹ್ನೆಗಾಗಿ ನಡೆದ ಜಗಳದಲ್ಲಿ ಭಾರಿ ಹಿನ್ನಡೆಯನ್ನು ಎದುರಿಸಿದ ಒಂದು ದಿನದ ನಂತರ, ಹಿರಿಯ ನಾಯಕ ಶರದ್ ಪವಾರ್ (Sharad Pawar) ಅವರ ಬಣಕ್ಕೆ ಚುನಾವಣಾ ಆಯೋಗವು ಬುಧವಾರ ಹೊಸ ಹೆಸರನ್ನು ನಿಗದಿಪಡಿಸಿದೆ. ಶರದ್ ಪವಾರ್ ಬಣಕ್ಕೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ – ಶರದ್ಚಂದ್ರ ಪವಾರ್ ಎಂಬ ಹೆಸರು ಸಿಕ್ಕಿದೆ. ಚುನಾವಣಾ ಸಂಸ್ಥೆಯು ಅಜಿತ್ ಪವಾರ್ (Ajit pawar) ಬಣವನ್ನು ನಿಜವಾದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಎಂದು ಘೋಷಿಸಿದ ಒಂದು ದಿನದ ನಂತರ ಇದು ಬರುತ್ತದೆ. ಚುನಾವಣಾ ಆಯೋಗವು ಪಕ್ಷದ ಚಿಹ್ನೆಯಾದ ‘ಗೋಡೆ ಗಡಿಯಾರ’ವನ್ನು ಅಜಿತ್ ಪವಾರ್ ನೇತೃತ್ವದ ಗುಂಪಿಗೆ ನೀಡಿತ್ತು.

ಚುನಾವಣಾ ಆಯೋಗದ ನಿರ್ಧಾರವು ಮಹಾರಾಷ್ಟ್ರ ಮತ್ತು ಮರಾಠಿ ಜನರ ವಿರುದ್ಧದ ಪಿತೂರಿ ಎಂದು ಶರದ್ ಪವಾರ್ ಬಣದ ನಾಯಕರು  ಆರೋಪಿಸಿದ್ದಾರೆ . ಎನ್‌ಸಿಪಿ ಸಂಸದ ಮತ್ತು ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಚುನಾವಣಾ ಆಯೋಗದ ನಿರ್ಧಾರವನ್ನು “ಅದೃಶ್ಯ ಶಕ್ತಿಯ ವಿಜಯ” ಎಂದು ಬಣ್ಣಿಸಿದ್ದಾರೆ.  ಚುನಾವಣಾ ಆಯೋಗ ಮಂಗಳವಾರದ  ತೀರ್ಪು ಮತ್ತು ಶಿವಸೇನಾ ಪ್ರಕರಣದಲ್ಲಿ ಚುನಾವಣಾ ಆಯೋಗದ ಹಿಂದಿನ ಆದೇಶದ ನಡುವೆ ಸಾಮ್ಯತೆ ಇದೆ. ಅಲ್ಲಿ ಅವರು ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದ ನಂತರ ಏಕನಾಥ್ ಶಿಂಧೆ ನೇತೃತ್ವದ ಗುಂಪನ್ನು ನಿಜವಾದ ಸೇನೆ ಎಂದು ಗುರುತಿಸಿದರು. ದಿವಂಗತ ಬಾಳ್‌ ಠಾಕ್ರೆ ಕುಟುಂಬದ ವಿರುದ್ಧ ಹೂಡಿದ ಪಿತೂರಿ ಈಗ ಶರದ್‌ ಪವಾರ್‌ ವಿರುದ್ಧವೂ ಮರುಕಳಿಸುತ್ತಿದೆ ಎಂದು ಸುಳೆ ಹೇಳಿದ್ದಾರೆ.

ಚುನಾವಣಾ ಆಯೋಗದ ಆದೇಶಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್, ಇದು ಪ್ರಜಾಪ್ರಭುತ್ವದ ಕೊಲೆಯಾಗಿದೆ. ನಡೆದಿರುವುದು ದುರದೃಷ್ಟಕರ. ಮೇಲಿನ ಒತ್ತಡದ ಮೇರೆಗೆ ಇಸಿ ಈ ತೀರ್ಪು ನೀಡಿದೆ”. ಏತನ್ಮಧ್ಯೆ, ಮಹಾರಾಷ್ಟ್ರ ಎನ್‌ಸಿಪಿ ಮುಖ್ಯಸ್ಥ (ಶರದ್ ಪವಾರ್ ಗುಂಪು) ಜಯಂತ್ ಪಾಟೀಲ್ ಅವರು ಇಸಿ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಹೇಳಿದ್ದಾರೆ. ಎನ್‌ಸಿಪಿಯನ್ನು ಶರದ್ ಪವಾರ್ ಸ್ಥಾಪಿಸಿದ್ದು, ಅವರು ಅದನ್ನು ತಳಮಟ್ಟದಿಂದ ಅಭಿವೃದ್ಧಿಪಡಿಸಿದರು. ಅನೇಕ ನಾಯಕರು ತಮ್ಮ ರಾಜಕೀಯ ಜೀವನದಲ್ಲಿ ಬೆಳೆಯಲು ಸಹಾಯ ಮಾಡಿದರು.

ಇದನ್ನೂ ಓದಿ: NCP: ಅಜಿತ್ ಪವಾರ್ ಬಣ ನಿಜವಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ: ಚುನಾವಣಾ ಆಯೋಗ

1999 ರಲ್ಲಿ ಶರದ್ ಪವಾರ್ ಸ್ಥಾಪಿಸಿದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷವು ಕಳೆದ ವರ್ಷ ಜುಲೈನಲ್ಲಿ ಅವರ ಸೋದರಳಿಯ ಮತ್ತು ಹಿರಿಯ ನಾಯಕ ಅಜಿತ್ ಪವಾರ್ ಬಿಜೆಪಿ ಮತ್ತು ಶಿವಸೇನಾ (ಏಕನಾಥ್ ಶಿಂಧೆ ಬಣ) ನೇತೃತ್ವದ ಸರ್ಕಾರಕ್ಕೆ ಪಕ್ಷದ ಎಂಟು ಶಾಸಕರೊಂದಿಗೆ ಸೇರಿದ ನಂತರ ವಿಭಜನೆಯಾಯಿತು.

ಚುನಾವಣಾ ಆಯೋಗದ ನಿರ್ಧಾರಕ್ಕೆ ಅಜಿತ್ ಪವಾರ್ ಸ್ವಾಗತ

ಚುನಾವಣಾ ತೀರ್ಪು ಪ್ರಜಾಪ್ರಭುತ್ವದಲ್ಲಿ ಬಹುಮತಕ್ಕೆ ನೀಡಲಾದ ಆದ್ಯತೆಯನ್ನು ಒತ್ತಿಹೇಳುತ್ತದೆ ಎಂದು ಅಜಿತ್ ಪವಾರ್ ಮಂಗಳವಾರ ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಹುಮತಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಈ ಕಾರಣಕ್ಕಾಗಿಯೇ ಚುನಾವಣಾ ಆಯೋಗ ತನ್ನ ಬಣಕ್ಕೆ ಪಕ್ಷದ ಹೆಸರು ಹಾಗೂ ಚಿಹ್ನೆಯನ್ನು ನೀಡಿದೆ ಎಂದರು. ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ ಕೂಡ ಈ ನಿರ್ಧಾರವನ್ನು ಸ್ವಾಗತಿಸಿದ್ದು  ಪಕ್ಷದ ಬಹುಪಾಲು ಕಾರ್ಯಕರ್ತರು ಮತ್ತು ಚುನಾಯಿತ ಪ್ರತಿನಿಧಿಗಳು ಅಜಿತ್ ಪವಾರ್ ಅವರೊಂದಿಗೆ ಇದ್ದಾರೆ ಎಂದು ಚುನಾವಣಾ ಆಯೋಗ ತೀರ್ಪು ಸಾಬೀತುಪಡಿಸುತ್ತದೆ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:19 pm, Wed, 7 February 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ