AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಹುದ್ದೆಯ ಸಭ್ಯತೆ ಕಾಪಾಡಿಕೊಳ್ಳಿ; ಅಮಿತ್ ಶಾ ವಿರುದ್ಧ ಶರದ್ ಪವಾರ್ ಆಕ್ರೋಶ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧದ ಹೇಳಿಕೆಗಳಿಗೆ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಇಂದು ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವು 1978ರಲ್ಲಿ ತಾವು ಆರಂಭಿಸಿದ ದ್ರೋಹದ ರಾಜಕೀಯವನ್ನು ಕೊನೆಗೊಳಿಸಿದೆ ಎಂದು ಅಮಿತ್ ಶಾ ಭಾನುವಾರ ಹೇಳಿದ್ದರು. ಕೇಂದ್ರ ಸಚಿವ ಅಮಿತ್ ಶಾ 'ಗೃಹ ಸಚಿವ ಹುದ್ದೆಯ ಗೌರವ' ಕಾಯ್ದುಕೊಳ್ಳಬೇಕೆಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ನಿಮ್ಮ ಹುದ್ದೆಯ ಸಭ್ಯತೆ ಕಾಪಾಡಿಕೊಳ್ಳಿ; ಅಮಿತ್ ಶಾ ವಿರುದ್ಧ ಶರದ್ ಪವಾರ್ ಆಕ್ರೋಶ
Sharad Pawar
ಸುಷ್ಮಾ ಚಕ್ರೆ
|

Updated on: Jan 14, 2025 | 5:07 PM

Share

ಮುಂಬೈ: ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ತಮ್ಮ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶರದ್ ಪವಾರ್ ಅವರು 40 ಶಾಸಕರನ್ನು ಹೊಂದಿರುವ ವಸಂತದಾದಾ ಪಾಟೀಲ್ ನೇತೃತ್ವದ ಸರ್ಕಾರವನ್ನು ತೊರೆದು ನಂತರ 1978ರಲ್ಲಿ ಸ್ವತಃ ಮುಖ್ಯಮಂತ್ರಿಯಾದ ಬಗ್ಗೆ ಅಮಿತ್ ಶಾ ತಮ್ಮ ಹೇಳಿಕೆಗಳಲ್ಲಿ ಉಲ್ಲೇಖಿಸಿದ್ದರು. ಅಮಿತ್ ಶಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಶರದ್ ಪವಾರ್, ಅಮಿತ್ ಶಾ ತಮ್ಮ ಹುದ್ದೆಯ ಸಭ್ಯತೆಯನ್ನು ಕಾಪಾಡಿಕೊಳ್ಳಬೇಕು ಎಂದಿದ್ದಾರೆ.

ಭಾನುವಾರ ಶಿರಡಿಯಲ್ಲಿ ನಡೆದ ಬಿಜೆಪಿಯ ರಾಜ್ಯಮಟ್ಟದ ಸಮಾವೇಶದಲ್ಲಿ ಅಮಿತ್ ಶಾ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವು 1978ರಿಂದ ಶರದ್ ಪವಾರ್ ಆರಂಭಿಸಿದ ಮೋಸದ ರಾಜಕೀಯವನ್ನು ಕೊನೆಗೊಳಿಸಿದೆ ಎಂದು ಹೇಳಿದ್ದರು. ಇದಕ್ಕೆ ಶರದ್ ಪವಾರ್ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ‘ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ’; ಮಹಾರಾಷ್ಟ್ರ ಚುನಾವಣೆಗೂ ಮುನ್ನ ಶರದ್ ಪವಾರ್ ಮಹತ್ವದ ಘೋಷಣೆ

ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ ಶರದ್ ಪವಾರ್, “ಅಮಿತ್ ಶಾ ಅವರ ಟೀಕೆ ನನ್ನ ಮೇಲೆ ಪರಿಣಾಮ ಬೀರುವುದಿಲ್ಲ. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಅವರ ವಿಧಾನವು ವಿಭಿನ್ನವಾಗಿತ್ತು. ಅದರ ಫಲಿತಾಂಶವನ್ನು ಏನೆಂದು ನಾವೆಲ್ಲರೂ ನೋಡಿದ್ದೇವೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲೂ ಅವರ ಪ್ರಯತ್ನಗಳು ನಿರೀಕ್ಷೆಗೆ ತಕ್ಕಂತೆ ಇರಲಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಎನ್​ಸಿಪಿ ಸಭೆಯಲ್ಲಿ ಆರ್​ಎಸ್​ಎಸ್​ಗೆ ಶರದ್ ಪವಾರ್ ಪ್ರಶಂಸೆ

“ನಾನು 1978ರಲ್ಲಿ ಮುಖ್ಯಮಂತ್ರಿಯಾಗಿದ್ದೆ. ಆಗ ಅಮಿತ್ ಶಾ ಎಲ್ಲಿದ್ದರು ಎಂದು ನನಗೆ ತಿಳಿದಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ, ಜನಸಂಘದ ಉತ್ತಮರಾವ್ ಪಾಟೀಲ್ ಅವರಂತಹವರು ಕೂಡ ನಾನು ಸಿಎಂ ಆಗಿದ್ದಾಗ ಸಂಪುಟದಲ್ಲಿ ಇದ್ದರು. ಈ ದೇಶವು ಅನೇಕ ಅತ್ಯುತ್ತಮ ಗೃಹ ಮಂತ್ರಿಗಳನ್ನು ಕಂಡಿದೆ, ಆದರೆ ಅವರಲ್ಲಿ ಯಾರನ್ನೂ ಅವರ ರಾಜ್ಯದಿಂದ ಹೊರಹಾಕಲಾಗಿಲ್ಲ” ಎಂದು ಅಮಿತ್ ಶಾ ವಿರುದ್ಧ ಶರದ್ ಪವಾರ್ ತೀವ್ರ ವಾಗ್ದಾಳಿ ನಡೆಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ