ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ಸಂಜಯ್​ ರಾವತ್​​ ಬಗ್ಗೆ ಮಾತನಾಡಿದ್ದೇನೆ: ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್

ಸಂಜಯ್ ರಾವತ್​, ಅವರ ಪತ್ನಿ, ಕುಟುಂಬದ ಇನ್ನಿತರ ಸದಸ್ಯರ ಹೆಸರಲ್ಲಿ ಇದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿದೆ. ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವೂ ದಾಖಲಾಗಿದೆ. 

ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ಸಂಜಯ್​ ರಾವತ್​​ ಬಗ್ಗೆ ಮಾತನಾಡಿದ್ದೇನೆ: ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್
ಶರದ್​ ಪವಾರ್​
Follow us
TV9 Web
| Updated By: Lakshmi Hegde

Updated on:Apr 06, 2022 | 5:59 PM

ನ್ಯಾಶನಲ್​ ಕಾಂಗ್ರೆಸ್ ಪಾರ್ಟಿ ಮುಖ್ಯಸ್ಥ ಶರದ್​ ಪವಾರ್ (Sharad Pawar) ಅವರು  ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು (PM Modi) ಭೇಟಿಯಾಗಿದ್ದಾರೆ. ಇದೇ ವೇಳೆ ಸಂಜಯ್​ ರಾವತ್​ ಕುಟುಂಬದ ಆಸ್ತಿಯನ್ನು ಮುಟ್ಟುಗೋಲು ಹಾಕಿದ್ದನ್ನು ಪ್ರಧಾನಿ ಬಳಿ ಪ್ರಶ್ನೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಸಂಜಯ್ ರಾವತ್​ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡುತ್ತಾರೆ ಎಂಬ ಒಂದೇ ಕಾರಣಕ್ಕೆ ಅವರ ವಿರುದ್ಧ ಇ.ಡಿ. ಮೂಲಕ ಕ್ರಮ ಕೈಗೊಳ್ಳುತ್ತಿದೆಯಾ ಎಂದು ನಾನು ಪ್ರಧಾನಮಂತ್ರಿ ಬಳಿ ಕೇಳಿದ್ದೇನೆ ಎಂದು ಶರದ್ ಪವಾರ್ ಅವರೇ ಹೇಳಿಕೊಂಡಿದ್ದಾರೆ. ಪ್ರಧಾನಿ ಮೋದಿಯವರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಈ ವಿಚಾರ ತಿಳಿಸಿದ್ದಾರೆ.

ಶಿವಸೇನೆ ನಾಯಕ ಸಂಜಯ್ ರಾವತ್ ಆಸ್ತಿಯನ್ನು ಇ.ಡಿ. ಮುಟ್ಟುಗೋಲು ಹಾಕಿದ್ದನ್ನು ಪ್ರಧಾನಿ ನರೇಂದ್ರ ಮೋದಿ ಗಮನಕ್ಕೆ ತಂದಿದ್ದೇನೆ. ಕೇಂದ್ರ ತನಿಖಾ ಏಜೆನ್ಸಿಗಳು ಹೀಗೆಲ್ಲ ಮಾಡಿದರೆ, ಮುಂದಾಗುವ ಎಲ್ಲ ಸಮಸ್ಯೆಗಳ ಜವಾಬ್ದಾರಿಯನ್ನೂ ಅವರೇ ಹೊರಬೇಕಾಗುತ್ತದೆ. ಕೇಂದ್ರ ಸರ್ಕಾರದ ವಿರುದ್ಧ ರಾವತ್ ಕಟುವಾಗಿ ಮಾತನಾಡುತ್ತಾರೆ ಎಂಬ ಒಂದೇ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆಯಾ ಎಂದು ಪವಾರ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮಹಾವಿಕಾಸ ಅಘಾಡಿ (ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ) ಸರ್ಕಾರದಲ್ಲಿ ಭಿನ್ನಮತವಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಖಂಡಿತ ಮಹಾ ವಿಕಾಸ್ ಅಘಾಡಿಗೆ ಯಾವುದೇ ಅಪಾಯವೂ ಇಲ್ಲ. ಯಾರನ್ನೂ ನಿರ್ಲಕ್ಷಿಸದೆ, ಬದಿಗೊತ್ತದೆ ಎಲ್ಲರನ್ನೂ ಒಳಗೊಂಡು, ಎಲ್ಲರಿಗೂ ನ್ಯಾಯ ಒದಗಿಸುವುದು ಅಧಿಕಾರದಲ್ಲಿ ಇರುವವರ ಜವಾಬ್ದಾರಿ. ಸಣ್ಣಪುಟ್ಟ ಸಮಸ್ಯೆಗಳು ಎದುರಾದಾಗ ಕುಳಿತು ಮಾತನಾಡಿ ಪರಿಹರಿಸಿಕೊಂಡರೆ ದೊಡ್ಡಮಟ್ಟದ ಭಿನ್ನಾಭಿಪ್ರಾಯಗಳು ಬರುವುದಿಲ್ಲ ಎಂದು ಶರದ್​ ಪವಾರ್ ಹೇಳಿದರು. ಅಷ್ಟೇ ಅಲ್ಲ, ಯುಪಿಎ ಒಕ್ಕೂಟದ ಅಧ್ಯಕ್ಷರಾಗಿ ಜವಾಬ್ದಾರಿ ಹೊರಲು ನಾನು ಸಿದ್ಧನಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಶರದ್​ ಪವಾರ್ ಅವರು ತಮ್ಮ ಮನೆಯಲ್ಲಿ ಮಹಾರಾಷ್ಟ್ರದ ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದರು. ಇದರಲ್ಲಿ ಕೇಂದ್ರ ಸಚಿವ ನಿತಿನ್​ ಗಡ್ಕರಿ ಪಾಲ್ಗೊಂಡಿದ್ದು ವಿಶೇಷ. ಇದಾದ ಮೇಲೆ ಪವಾರ್​ ಇಂದು ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ. ಇನ್ನೊಂದೆಡೆ ಇ.ಡಿ. ಸಂಜಯ್​ ರಾವತ್ ಬೆನ್ನು ಬಿದ್ದಿದೆ. ಸಂಜಯ್ ರಾವತ್​, ಅವರ ಪತ್ನಿ, ಕುಟುಂಬದ ಇನ್ನಿತರ ಸದಸ್ಯರ ಹೆಸರಲ್ಲಿ ಇದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿದೆ. ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವೂ ದಾಖಲಾಗಿದೆ.

ಅದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದ ಸಂಜಯ್ ರಾವತ್​, ಮಹಾ ವಿಕಾಸ್​ ಅಘಾಡಿ ಸರ್ಕಾರವನ್ನು ಉರುಳಿಸಲು ನನ್ನ ಮೇಲೆ ಒತ್ತಡ ಹಾಕಲಾಗುತ್ತಿದೆ. ಆದರೆ ನಾನು ಯಾವುದಕ್ಕೂ ಹೆದರುವವನು ಅಲ್ಲ. ಆಸ್ತಿಯನ್ನು ಜಪ್ತಿ ಮಾಡಲಿ, ಶೂಟ್ ಮಾಡಲಿ ಅಥವಾ ಜೈಲಿಗೇ ಕಳಿಸಲಿ. ನಾನು ಬಾಳಾ ಸಾಹೇಬ್​ ಠಾಕ್ರೆಯವರ ಕಟ್ಟಾ ಶಿಷ್ಯ. ಶಿವಸೈನಿಕ. ನಾನು ಸುಮ್ಮನಿರುವವನೂ ಅಲ್ಲ. ಸದ್ಯಕ್ಕೆ ಕುಣಿಯುವವರು ಕುಣಿಯಲಿ. ಸತ್ಯ ಕೊನೆಗೊಂದು ದಿನ ಹೊರಗೆಬಂದೇ ಬರುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಹಿಂದೂ ಪುರಾಣಗಳಲ್ಲಿನ ಅತ್ಯಾಚಾರದ ಉದಾಹರಣೆ ನೀಡಿದ್ದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಮಾನತು

Published On - 5:58 pm, Wed, 6 April 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್