Sign In

By signing in or creating an account, you agree with Associated Broadcasting Company's Terms & Conditions and Privacy Policy.

Sharad Pawar: ಶರದ್​ ಪವಾರ್​ಗೆ ಕೊಲೆ ಬೆದರಿಕೆ, ಪೊಲೀಸ್ ಆಯುಕ್ತರನ್ನು ಭೇಟಿಯಾದ ಸುಪ್ರಿಯಾ ಸುಲೆ

ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್(Sharad Pawar) ​ಗೆ ಕೊಲೆ ಬೆದರಿಕೆ ಬಂದಿದ್ದು, ಪುತ್ರಿ ಸುಪ್ರಿಯಾ ಸುಲೆ ಪೊಲೀಸ್ ಆಯುಕ್ತರನ್ನು ಭೇಟಿಯಾಗಿದ್ದಾರೆ. ಶರದ್ ಪವಾರ್‌ಗೆ ವಾಟ್ಸಾಪ್‌ನಲ್ಲಿ ಬೆದರಿಕೆ ಹಾಕಲಾಗಿದೆ ಎಂದು ಸುಪ್ರಿಯಾ ಸುಲೆ ಹೇಳಿದ್ದಾರೆ.

Sharad Pawar: ಶರದ್​ ಪವಾರ್​ಗೆ ಕೊಲೆ ಬೆದರಿಕೆ, ಪೊಲೀಸ್ ಆಯುಕ್ತರನ್ನು ಭೇಟಿಯಾದ ಸುಪ್ರಿಯಾ ಸುಲೆ
ಶರದ್ ಪವಾರ್Image Credit source: NDTV
Follow us
ನಯನಾ ರಾಜೀವ್
|

Updated on: Jun 09, 2023 | 11:31 AM

ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್(Sharad Pawar) ​ಗೆ ಕೊಲೆ ಬೆದರಿಕೆ ಬಂದಿದ್ದು, ಪುತ್ರಿ ಸುಪ್ರಿಯಾ ಸುಲೆ ಪೊಲೀಸ್ ಆಯುಕ್ತರನ್ನು ಭೇಟಿಯಾಗಿದ್ದಾರೆ. ಶರದ್ ಪವಾರ್‌ಗೆ ವಾಟ್ಸಾಪ್‌ನಲ್ಲಿ ಬೆದರಿಕೆ ಹಾಕಲಾಗಿದೆ ಎಂದು ಸುಪ್ರಿಯಾ ಸುಲೆ ಹೇಳಿದ್ದಾರೆ. ಈ ಪ್ರಕರಣದಲ್ಲಿ ಸುಪ್ರಿಯಾ ಸುಳೆ ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ದೂರು ದಾಖಲಿಸಿದ್ದಾರೆ. ಶರದ್ ಪವಾರ್ ಅವರಿಗೆ ಯಾವುದೇ ರೀತಿಯ ತೊಂದರೆಯಾದರೆ ಅದಕ್ಕೆ ಗೃಹ ಸಚಿವಾಲಯವೇ ಹೊಣೆಯಾಗಲಿದೆ ಎಂದು ಸುಪ್ರಿಯಾ ಹೇಳಿದ್ದಾರೆ.

ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ನಂತರ ಶರದ್ ಪವಾರ್ ಅವರ ಪುತ್ರಿ ಮತ್ತು ಬಾರಾಮತಿ ಸಂಸದೆ ಸುಪ್ರಿಯಾ ಅವರು, ಶರದ್ ಪವಾರ್‌ಗೆ ವಾಟ್ಸಾಪ್‌ನಲ್ಲಿ ಬೆದರಿಕೆಗಳು ಬಂದಿವೆ. ಇಂತಹ ರಾಜಕಾರಣ ನಿಲ್ಲಬೇಕು. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ವಿಷಯದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಕೆಲ ಬೆಳವಣಿಗೆಗಳಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮಹಾರಾಷ್ಟ್ರದ ಕೆಲವು ಸ್ಥಳಗಳಲ್ಲಿ ಸ್ಟೇಟಸ್ ಅಥವಾ ಪೋಸ್ಟರ್‌ಗಳಲ್ಲಿ ಔರಂಗಜೇಬ್ ಅವರ ಫೋಟೋ ಸ್ಥಳೀಯ ಮಟ್ಟದಲ್ಲಿ ವಿವಾದವನ್ನು ಉಂಟುಮಾಡಿದೆ. ಈ ನಿಟ್ಟಿನಲ್ಲಿ ಪೊಲೀಸರು ಆ ಸ್ಥಳದಲ್ಲಿ ತನಿಖೆ ಆರಂಭಿಸಿದ್ದು, ಕೆಲ ಆರೋಪಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಆದರೆ, ಇದರ ಪರಿಣಾಮ ರಾಜಕೀಯ ವಲಯದಲ್ಲಿ ಕಂಡು ಬರುತ್ತಿದೆ. ಈ ಬಗ್ಗೆ ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ಓದಿ: Sharad Pawar: ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಸ್ ಪಡೆದ ಶರದ್ ಪವಾರ್

ಅದರ ಹಿಂದಿನ ಶಕ್ತಿಯ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಬೆದರಿಸುವಾಗ ಬಳಸಿದ ಭಾಷೆ ಮತ್ತು ಕಾಮೆಂಟ್‌ಗಳಲ್ಲಿ ಬರೆಯುತ್ತಿರುವ ವಾಕ್ಯಗಳನ್ನು ನೋಡಿದರೆ ಇಷ್ಟು ದ್ವೇಷ ಎಲ್ಲಿಂದ ಬರುತ್ತಿದೆ ಎಂದು ತೋರುತ್ತದೆ. ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿವೆ, ಆದರೆ ಇಷ್ಟು ದ್ವೇಷವೇ ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ಶೀಘ್ರದಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತನಾಡುವುದಾಗಿ ಸುಪ್ರಿಯಾ ಸುಲೆ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್