ಮಹಾರಾಷ್ಟ್ರ ಚುನಾವಣೆ; ಉದ್ಧವ್ ಠಾಕ್ರೆಯನ್ನು ಎಂವಿಎ ಸಿಎಂ ಅಭ್ಯರ್ಥಿಯಾಗಿ ಸ್ವೀಕರಿಸಲು ಶರದ್ ಪವಾರ್ ನಕಾರ

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಶರದ್ ಪವಾರ್), ಶಿವಸೇನೆ (ಯುಬಿಟಿ) ಮತ್ತು ಕಾಂಗ್ರೆಸ್‌ನ ಮೈತ್ರಿಕೂಟವಾದ ಮಹಾ ವಿಕಾಸ್ ಅಘಾಡಿ 2019ರ ನವೆಂಬರ್​ನಿಂದ ಮಹಾರಾಷ್ಟ್ರ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ಆದರೆ, ಏಕನಾಥ್ ಶಿಂಧೆ ನೇತೃತ್ವದ ಬಂಡಾಯದ ನಂತರ ಶಿವಸೇನೆ ವಿಭಜನೆಯಾದ ನಂತರ ಜೂನ್ 2022ರಲ್ಲಿ ಆ ಸರ್ಕಾರ ಪತನವಾಗಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿತು.

ಮಹಾರಾಷ್ಟ್ರ ಚುನಾವಣೆ; ಉದ್ಧವ್ ಠಾಕ್ರೆಯನ್ನು ಎಂವಿಎ ಸಿಎಂ ಅಭ್ಯರ್ಥಿಯಾಗಿ ಸ್ವೀಕರಿಸಲು ಶರದ್ ಪವಾರ್ ನಕಾರ
ಉದ್ಧವ್ ಠಾಕ್ರೆ - ಶರದ್ ಪವಾರ್
Follow us
ಸುಷ್ಮಾ ಚಕ್ರೆ
|

Updated on: Jun 29, 2024 | 3:09 PM

ಮುಂಬೈ: ಮಹಾ ವಿಕಾಸ್ ಅಘಾಡಿ (MVA)ಗೆ ಮತ್ತಷ್ಟು ಮುಜುಗರವನ್ನುಂಟುಮಾಡುವಲ್ಲಿ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಮಹಾರಾಷ್ಟ್ರ ರಾಜ್ಯ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಸಾಮೂಹಿಕ ನಾಯಕತ್ವಕ್ಕಾಗಿ ಪ್ರತಿಪಾದಿಸಿದ್ದಾರೆ. ಕಾಂಗ್ರೆಸ್ ಕೂಡ ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿಯಾಗಿ ತಿರಸ್ಕರಿಸಿದ ನಂತರ ಈ ಬೆಳವಣಿಗೆ ನಡೆದಿದೆ.

“ನಮ್ಮ ಮೈತ್ರಿಯನ್ನೇ ಮುಂದಿಟ್ಟುಕೊಂಡು ಸಾಮೂಹಿಕ ನಾಯಕತ್ವದಲ್ಲಿ ನಾವು ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತೇವೆ” ಎಂದು ಶರದ್ ಪವಾರ್ ಹೇಳಿದರು.

ಇತ್ತೀಚೆಗಷ್ಟೇ ಸಂಜಯ್ ರಾವತ್ ಅವರು ಮುಖ್ಯಮಂತ್ರಿ ಹುದ್ದೆ ಇಲ್ಲದೆ ಚುನಾವಣೆಗೆ ಹೋಗುವುದು ಅಪಾಯಕಾರಿ ಎಂದು ಹೇಳಿದ್ದರು. “ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ಉತ್ತಮ ಕೆಲಸ ಮಾಡಿದ್ದಾರೆ ಮತ್ತು ಎಂವಿಎ ಅವರನ್ನು ಮುಂದಿಟ್ಟುಕೊಂಡೇ ಲೋಕಸಭೆ ಚುನಾವಣೆಯಲ್ಲಿ ಮತಗಳನ್ನು ಪಡೆದಿದೆ” ಎಂದು ರಾವತ್ ಹೇಳಿದ್ದರು.

ಇದನ್ನೂ ಓದಿ: Maharashtra Polls: ಮಹಾರಾಷ್ಟ್ರ ಚುನಾವಣೆಗೆ ಸಮಾನ ಸೀಟು ಹಂಚಿಕೆ ಸೂತ್ರಕ್ಕೆ ಮಹಾ ವಿಕಾಸ್​ ಅಘಾಡಿ ಒಪ್ಪಿಗೆ

ಎನ್‌ಸಿಪಿ (ಶರದ್ ಪವಾರ್) ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಹೆಸರಿಸುವುದರಿಂದ ಎಂವಿಎ ಘಟಕಗಳು ದೂರವಿರಬೇಕು. ಅದರ ಬದಲಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದರತ್ತ ಗಮನ ಹರಿಸಬೇಕು ಎಂದು ಹೇಳಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಗೆಲ್ಲುವುದು ಏಕೈಕ ಮಾನದಂಡವಾಗಿರುವುದರಿಂದ ಯಾವುದೇ ಎಂವಿಎ ಮೈತ್ರಿಕೂಟವು ಸ್ಪರ್ಧಿಸುತ್ತಿರುವ ಸ್ಥಾನಗಳ ಸಂಖ್ಯೆಯನ್ನು (ಏಕಪಕ್ಷೀಯವಾಗಿ) ಘೋಷಿಸಬಾರದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವಿಧಾನಸಭೆ ಚುನಾವಣೆ ವಿಭಿನ್ನವಾಗಿರುತ್ತದೆ; ಸೀಟು ಹಂಚಿಕೆ ಬಗ್ಗೆ ದೊಡ್ಡ ಸುಳಿವು ಕೊಟ್ಟ ಶರದ್ ಪವಾರ್

ಈ ವರ್ಷದ ಲೋಕಸಭೆ ಚುನಾವಣೆಗೂ ಮುನ್ನ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ರಾಜ್ಯದ ಒಟ್ಟು 48 ಸ್ಥಾನಗಳ ಪೈಕಿ 21 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಅಂತಿಮವಾಗಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಎನ್‌ಸಿಪಿ (ಎಸ್‌ಪಿ) 10 ಸ್ಥಾನಗಳಲ್ಲಿ ಸ್ಪರ್ಧಿಸಿತು. ಲೋಕಸಭಾ ಚುನಾವಣಾ ಫಲಿತಾಂಶದ ನಂತರ, ಶರದ್ ಪವಾರ್ ನೇತೃತ್ವದ ಪಕ್ಷವು ಸ್ಪರ್ಧಿಸಿದ 10ರಲ್ಲಿ 8 ಸ್ಥಾನಗಳನ್ನು ಗೆದ್ದುಕೊಂಡು ಮೇಲುಗೈ ಸಾಧಿಸಿತು. 2019ರ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಕೇವಲ ಒಂದು ಲೋಕಸಭಾ ಸ್ಥಾನವನ್ನು ಗೆದ್ದಿದ್ದ ಕಾಂಗ್ರೆಸ್, ತಾನು ಸ್ಪರ್ಧಿಸಿದ್ದ 17 ಸ್ಥಾನಗಳಲ್ಲಿ 13 ಸ್ಥಾನಗಳನ್ನು ಗೆದ್ದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ