Sharad Pawar: ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ
ಎನ್‌ಸಿಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶರದ್ ಪವಾರ್ ಹೇಳಿದ್ದಾರೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿರುವ ಶರದ್ ಪವಾರ್ ಭವಿಷ್ಯದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಂಗಳವಾರ ಘೋಷಿಸಿದ್ದಾರೆ.
ಎನ್‌ಸಿಪಿಯ (NCP) ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ (Sharad Pawar) ಹೇಳಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ(Nationalist Congress Party) ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿರುವ ಶರದ್ ಪವಾರ್ ಭವಿಷ್ಯದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಂಗಳವಾರ ಘೋಷಿಸಿದ್ದಾರೆ. ರಾಜ್ಯಸಭೆಯಲ್ಲಿ ನನಗೆ ಮೂರು ವರ್ಷಗಳ ಅಧಿಕಾರವಿದೆ. ನಾನು ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶರದ್ ಪವಾರ್ ಹೇಳಿದ್ದಾರೆ.1999 ರಲ್ಲಿ ಪಕ್ಷವನ್ನು ಸ್ಥಾಪಿಸಿದ ಎನ್‌ಸಿಪಿ ಮುಖ್ಯಸ್ಥ ಪವಾರ್, ತಮ್ಮ ಆತ್ಮಚರಿತ್ರೆಯ ಎರಡನೇ ಆವೃತ್ತಿ ‘ಲೋಕ್ ಮಾಜೆ ಸಂಗಟಿ’ ಬಿಡುಗಡೆ ಸಮಾರಂಭದಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಾನು ನನ್ನ ರಾಜಕೀಯ ಜೀವನವನ್ನು ಮೇ 1, 1960 ರಂದು ಪ್ರಾರಂಭಿಸಿದೆ. ನಿನ್ನೆ ನಾವು ಮೇ ದಿನವನ್ನು ಆಚರಿಸಿದ್ದೇವೆ. ಈ ಸುದೀರ್ಘ ರಾಜಕೀಯ ಜೀವನದ ನಂತರ ಅದನ್ನು ಎಲ್ಲೋ ನಿಲ್ಲಿಸುವ ಬಗ್ಗೆ ಯೋಚಿಸಬೇಕು.ವ್ಯಕ್ತಿಗೆ ದುರಾಸೆ ಇರಬಾರದು ಎಂದು ಅವರು ಹೇಳಿದ್ದಾರೆ.
#WATCH मैं एनसीपी के राष्ट्रीय अध्यक्ष पद से इस्तीफा दे रहा हूं: एनसीपी प्रमुख शरद पवार pic.twitter.com/RiXHr3W0SC
— ANI_HindiNews (@AHindinews) May 2, 2023
ಮುಂದಿನ ಕ್ರಮವನ್ನು ನಿರ್ಧರಿಸಲು ಹಿರಿಯ ಎನ್‌ಸಿಪಿ ನಾಯಕರನ್ನು ಒಳಗೊಂಡ ಸಮಿತಿಯನ್ನು ರಚಿಸುವಂತೆ ಪವಾರ್ ಶಿಫಾರಸು ಮಾಡಿದ್ದಾರೆ. ಸಮಿತಿಯಲ್ಲಿ ಪ್ರಫುಲ್ ಪಟೇಲ್, ಸುನಿಲ್ ತಟ್ಕರೆ, ಪಿ ಸಿ ಚಾಕೋ, ನರಹರಿ ಜಿರ್ವಾಲ್, ಅಜಿತ್ ಪವಾರ್, ಸುಪ್ರಿಯಾ ಸುಳೆ, ಜಯಂತ್ ಪಾಟೀಲ್, ಛಗನ್ ಭುಜಬಲ್, ದಿಲೀಪ್ ವಾಲ್ಸೆ-ಪಾಟೀಲ್, ಅನಿಲ್ ದೇಶಮುಖ್, ರಾಜೇಶ್ ಟೋಪೆ, ಜಿತೇಂದ್ರ ಅವ್ಹಾದ್, ಹಸನ್ ಮುಶ್ರಿಫ್, ಧನಂಜಯ್ ಮುಂಡೆ, ಜಯದೇವ್ ಗಾಯಕ್ವಾಡ್ ಮತ್ತು ಪಕ್ಷದ ವಿವಿಧ ಘಟಕಗಳ ಮುಖ್ಯಸ್ಥರು ಇದ್ದಾರೆ ಎಂದು ಪವಾರ್ ಹೇಳಿದ್ದಾರೆ.
ನಾನು ಎನ್‌ಸಿಪಿ ಅಧ್ಯಕ್ಷನಾಗಿ ಕೆಲಸ ಮಾಡುವುದನ್ನು ನಿಲ್ಲಿಸಲು ನಿರ್ಧರಿಸಿದ್ದೇನೆ. ನಾನು ಇನ್ನು ಮುಂದೆ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಜೀವನದಲ್ಲಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ಎಂದು ಪವಾರ್ ಹೇಳಿದ್ದಾರೆ.
ಇದನ್ನೂ ಓದಿ: Raghav Chadha: ದೆಹಲಿ ಮದ್ಯ ನೀತಿ ಪ್ರಕರಣ, ಆರೋಪಪಟ್ಟಿಯಲ್ಲಿ ರಾಘವ್ ಚಡ್ಡಾ ಹೆಸರು
ನಿರ್ಧಾರವನ್ನು ಹಿಂಪಡೆಯಲು ಒತ್ತಾಯಿಸಿದ ಎನ್‌ಸಿಪಿ ಕಾರ್ಯಕರ್ತರು
ಪವಾರ್ ಅವರ ಸಮ್ಮುಖದಲ್ಲಿ ಎನ್‌ಸಿಪಿ ನಾಯಕರು ಮತ್ತು ಕಾರ್ಯಕರ್ತರು ಪವಾರ್ ನಿರ್ಧಾರ ಹಿಂಪಡೆಯಬೇಕು ಎಂದು ಘೋಷಣೆ ಕೂಗಿದ್ದಾರೆ. ಪವಾರ್ ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳುವವರೆಗೆ ನಾವು ಸಭಾಂಗಣದಿಂದ ಹೊರ ಹೋಗುವುದಿಲ್ಲ. ಸಾಹೇಬರ ನಿರ್ಧಾರವನ್ನು ನಾವು ಒಪ್ಪುವುದಿಲ್ಲ. ಅದನ್ನು ಹಿಂಪಡೆಯಲು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ. ನೀವು ಅದನ್ನು ಮಾಡುವವರೆಗೂ ನಾವು ಕದಲುವುದಿಲ್ಲ ಎಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.
#WATCH | Supporters of NCP chief Sharad Pawar protest against his announcement to step down as the national president of NCP. pic.twitter.com/LsCV601EYs
— ANI (@ANI) May 2, 2023
ಅವರು (ಪವಾರ್) ಅಗ್ರಸ್ಥಾನದಲ್ಲಿ ಉಳಿಯುವುದು ಮಹಾರಾಷ್ಟ್ರಕ್ಕೆ ಮಾತ್ರವಲ್ಲದೆ ದೇಶಕ್ಕೆ ಮುಖ್ಯವಾಗಿದೆ. ಈ ದಿಢೀರ್ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ, ಅಂತಹ ನಿರ್ಧಾರ ತೆಗೆದುಕೊಳ್ಳುವ ಹಕ್ಕು ಅವರಿಗೆ ಇಲ್ಲ. ಅವರ ಅನುಭವ ನಮಗೆ ಇಂದಿಗೂ ಬೇಕು. ನೀವು ನಮ್ಮೆಲ್ಲರ ರಾಜೀನಾಮೆಯನ್ನು ತೆಗೆದುಕೊಳ್ಳಬಹುದು. ನಿಮಗೆ ಬೇಕಾದ ರೀತಿಯಲ್ಲಿ ಪಕ್ಷವನ್ನು ರೂಪಿಸಿ. ಆದರೆ ಪಕ್ಷ ಬಿಡುವುದಿಲ್ಲ. ನೀವು ಇಲ್ಲದೆ ನಾವು ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಎನ್‌ಸಿಪಿ ನಾಯಕ ಜಯಂತ್ ಪಾಟೀಲ್ ಕಣ್ಣೀರಿಟ್ಟಿದ್ದಾರೆ.
#WATCH | NCP leader Jayant Patil breaks down after party chief Sharad Pawar announces that he will step down as party president. pic.twitter.com/nDCu9iX2OG
— ANI (@ANI) May 2, 2023
ನನ್ನ ಸಹೋದ್ಯೋಗಿಗಳೇ, ನಾನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಿದ್ದರೂ, ನಾನು ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುತ್ತಿಲ್ಲ. ನಿರಂತರ ಪ್ರಯಾಣ’ನನ್ನ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಸಾರ್ವಜನಿಕ ಕಾರ್ಯಕ್ರಮಗಳು, ಸಭೆಗಳಲ್ಲಿ ಭಾಗವಹಿಸುವುದನ್ನು ಮುಂದುವರಿಸುತ್ತೇನೆ. ನಾನು ಪುಣೆ, ಮುಂಬೈ, ಬಾರಾಮತಿ, ದೆಹಲಿ ಅಥವಾ ಭಾರತದ ಯಾವುದೇ ಭಾಗದಲ್ಲಿದ್ದರೂ, ನಾನು ಎಂದಿನಂತೆ ನಿಮ್ಮೆಲ್ಲರಿಗೂ ಸಿಗುತ್ತಿರುತ್ತೇನೆ ಎಂದು ಶರದ್ ಪವಾರ್ ಎನ್‌ಸಿಪಿ ಕಾರ್ಯಕರ್ತರಲ್ಲಿ ಹೇಳಿದ್ದಾರೆ.
ತಮ್ಮ ರಾಜೀನಾಮೆಯನ್ನು ನಿರ್ಧಾರಕ್ಕೆ ಭಾವುಕರಾದ ಸಹಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪವಾರ್ ನಾನು ನಿಮ್ಮೊಂದಿಗಿದ್ದೇನೆ, ಆದರೆ ಎನ್‌ಸಿಪಿ ಮುಖ್ಯಸ್ಥನಾಗಿ ಅಲ್ಲ ಎಂದು ಹೇಳಿದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:59 pm, Tue, 2 May 23