ಧನ್ಯವಾದ ಮೋದಿ!; ತಮ್ಮ ಗೆಲುವನ್ನು ಪ್ರಧಾನಿಗೆ ಅರ್ಪಿಸಿದ ಎನ್​ಸಿಪಿ ನಾಯಕ ಶರದ್ ಪವಾರ್

NCP-SCP ಮುಖ್ಯಸ್ಥ ಶರದ್ ಪವಾರ್ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮಹಾ ವಿಕಾಸ್ ಅಘಾಡ್ (MVA) ನೀಡಿದ ಉತ್ತಮ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಕಾರಣ ಎಂದು ಕಾಲೆಳೆದಿದ್ದಾರೆ. ಅಷ್ಟೇ ಅಲ್ಲ, ತಮ್ಮ ಗೆಲುವಿಗೆ ಕಾರಣರಾದ ಮೋದಿಯವರಿಗೆ ಧನ್ಯವಾದಗಳನ್ನೂ ಅರ್ಪಿಸಿದ್ದಾರೆ. ಈ ಕುರಿತ ಪೂರ್ತಿ ಮಾಹಿತಿ ಇಲ್ಲಿದೆ.

ಧನ್ಯವಾದ ಮೋದಿ!; ತಮ್ಮ ಗೆಲುವನ್ನು ಪ್ರಧಾನಿಗೆ ಅರ್ಪಿಸಿದ ಎನ್​ಸಿಪಿ ನಾಯಕ ಶರದ್ ಪವಾರ್
ಶರದ್ ಪವಾರ್
Follow us
ಸುಷ್ಮಾ ಚಕ್ರೆ
|

Updated on: Jun 15, 2024 | 5:36 PM

ಮುಂಬೈ: “ನಾವು ಈ ಬಾರಿ ಕಳೆದ ಚುನಾವಣೆಗಿಂತಲೂ ಉತ್ತಮ ಪ್ರದರ್ಶನ ನೀಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಎಲ್ಲೆಲ್ಲಿ ರೋಡ್‌ಶೋ ಮತ್ತು ರ‍್ಯಾಲಿಗಳನ್ನು ನಡೆಸಿದ್ದಾರೋ ಅಲ್ಲೆಲ್ಲ ನಾವು ಗೆದ್ದಿದ್ದೇವೆ. ಅದಕ್ಕಾಗಿಯೇ ಪ್ರಧಾನಿಗೆ ಧನ್ಯವಾದ ಹೇಳುವುದು ನನ್ನ ಕರ್ತವ್ಯ ಎಂದು ನಾನು ಭಾವಿಸುತ್ತೇನೆ” ಎಂದು ಎನ್​ಸಿಪಿ ನಾಯಕ ಶರದ್ ಪವಾರ್ (Sharad Pawar) ಹಾಸ್ಯಮಯವಾಗಿ ಬಿಜೆಪಿಯನ್ನು ಲೇವಡಿ ಮಾಡಿದ್ದಾರೆ.

ಮಹಾ ವಿಕಾಸ್ ಅಘಾಡಿ ನಾಯಕರಾದ ಶರದ್ ಪವಾರ್, ಉದ್ಧವ್ ಠಾಕ್ರೆ ಮತ್ತು ಪೃಥ್ವಿರಾಜ್ ಚವಾಣ್ ಅವರು ಇಂದು ಮುಂಬೈನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. 2024 ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿಕೂಟವನ್ನು ಬೆಂಬಲಿಸಿದ್ದಕ್ಕಾಗಿ ದೇಶದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ: G7 Summit: ಜಿ7 ಭಾಗವಲ್ಲದಿದ್ದರೂ ಇಟಲಿಯ ಶೃಂಗಸಭೆಯಲ್ಲಿ ಕೇಂದ್ರಬಿಂದುವಾದ ಪ್ರಧಾನಿ ಮೋದಿ

ಈ ವೇಳೆ ಎನ್‌ಸಿಪಿ (ಎಸ್‌ಸಿಪಿ)ಯ ಶರದ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು. ಅವರು ಎಲ್ಲೆಲ್ಲಿ ರೋಡ್‌ಶೋ ಮತ್ತು ರ್ಯಾಲಿಗಳನ್ನು ನಡೆಸಿದರೋ ಲೋಕಸಭೆ ಚುನಾವಣೆಯಲ್ಲಿ ಎಂವಿಎ ಆ ಸ್ಥಳಗಳಲ್ಲಿ ಗೆಲುವು ದಾಖಲಿಸಿದೆ ಎಂದು ಹೇಳಿದರು. ಮಹಾವಿಕಾಸ್ ಅಘಾಡಿಗೆ ರಾಜಕೀಯ ವಾತಾವರಣವನ್ನು ಅನುಕೂಲಕರವಾಗಿಸಿದ್ದಕ್ಕಾಗಿ ನಾವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಶರದ್ ಪವಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಇದನ್ನೂ ಓದಿ: ನಾಚಿಕೆಯ ಸಂಗತಿ; ಪಿಎಂ ಮೋದಿಯ ಪಾದ ಮುಟ್ಟಿದ್ದಕ್ಕೆ ನಿತೀಶ್ ಕುಮಾರ್ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ

2019ರ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ 23 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಈ ಬಾರಿ ಕೇವಲ 9 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಮೋದಿ ಪ್ರಚಾರ ನಡೆಸಿದ ಬಹುತೇಕ ಸ್ಥಾನಗಳಲ್ಲಿ ಎನ್‌ಡಿಎ ಗೆಲುವು ಸಾಧಿಸಲು ವಿಫಲವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗದ ಅಂಕಿಅಂಶಗಳು ತೋರಿಸಿವೆ. ಮೋದಿ ಅವರು ಮಹಾರಾಷ್ಟ್ರದ 18 ಲೋಕಸಭಾ ಕ್ಷೇತ್ರಗಳಲ್ಲಿ ಅನೇಕ ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋ ನಡೆಸಿದ್ದರು. ಈ ಪೈಕಿ 15 ಸ್ಥಾನಗಳಲ್ಲಿ ಎನ್‌ಡಿಎ ಗೆಲ್ಲಲು ವಿಫಲವಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ