ಮುಂಬೈ: “ನಾವು ಈ ಬಾರಿ ಕಳೆದ ಚುನಾವಣೆಗಿಂತಲೂ ಉತ್ತಮ ಪ್ರದರ್ಶನ ನೀಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಎಲ್ಲೆಲ್ಲಿ ರೋಡ್‌ಶೋ ಮತ್ತು ರ‍್ಯಾಲಿಗಳನ್ನು ನಡೆಸಿದ್ದಾರೋ ಅಲ್ಲೆಲ್ಲ ನಾವು ಗೆದ್ದಿದ್ದೇವೆ. ಅದಕ್ಕಾಗಿಯೇ ಪ್ರಧಾನಿಗೆ ಧನ್ಯವಾದ ಹೇಳುವುದು ನನ್ನ ಕರ್ತವ್ಯ ಎಂದು ನಾನು ಭಾವಿಸುತ್ತೇನೆ” ಎಂದು ಎನ್‌ಸಿಪಿ ನಾಯಕ ಶರದ್ ಪವಾರ್ (Sharad Pawar) ಹಾಸ್ಯಮಯವಾಗಿ ಬಿಜೆಪಿಯನ್ನು ಲೇವಡಿ ಮಾಡಿದ್ದಾರೆ.
ಮಹಾ ವಿಕಾಸ್ ಅಘಾಡಿ ನಾಯಕರಾದ ಶರದ್ ಪವಾರ್, ಉದ್ಧವ್ ಠಾಕ್ರೆ ಮತ್ತು ಪೃಥ್ವಿರಾಜ್ ಚವಾಣ್ ಅವರು ಇಂದು ಮುಂಬೈನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. 2024 ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿಕೂಟವನ್ನು ಬೆಂಬಲಿಸಿದ್ದಕ್ಕಾಗಿ ದೇಶದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ.
Mumbai | NCP-SCP chief Sharad Pawar says, “Wherever the Prime Minister’s roadshow and rally took place, we won. That is why I consider it my duty to thank the Prime Minister.” pic.twitter.com/kkZygaTuY9
— ANI (@ANI) June 15, 2024
ಇದನ್ನೂ ಓದಿ: G7 Summit: ಜಿ7 ಭಾಗವಲ್ಲದಿದ್ದರೂ ಇಟಲಿಯ ಶೃಂಗಸಭೆಯಲ್ಲಿ ಕೇಂದ್ರಬಿಂದುವಾದ ಪ್ರಧಾನಿ ಮೋದಿ
ಈ ವೇಳೆ ಎನ್‌ಸಿಪಿ (ಎಸ್‌ಸಿಪಿ)ಯ ಶರದ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು. ಅವರು ಎಲ್ಲೆಲ್ಲಿ ರೋಡ್‌ಶೋ ಮತ್ತು ರ್ಯಾಲಿಗಳನ್ನು ನಡೆಸಿದರೋ ಲೋಕಸಭೆ ಚುನಾವಣೆಯಲ್ಲಿ ಎಂವಿಎ ಆ ಸ್ಥಳಗಳಲ್ಲಿ ಗೆಲುವು ದಾಖಲಿಸಿದೆ ಎಂದು ಹೇಳಿದರು. ಮಹಾವಿಕಾಸ್ ಅಘಾಡಿಗೆ ರಾಜಕೀಯ ವಾತಾವರಣವನ್ನು ಅನುಕೂಲಕರವಾಗಿಸಿದ್ದಕ್ಕಾಗಿ ನಾವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಶರದ್ ಪವಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
VIDEO | Leaders of Maha Vikas Aghadi (MVA) including Shiv Sena (UBT) chief Uddhav Thackeray (@uddhavthackeray) and party leaders Aaditya Thackeray (@AUThackeray) and Sanjay Raut (@rautsanjay61), NCP (SP) chief Sharad Pawar (@PawarSpeaks), and Congress leader Prithviraj Chavan… pic.twitter.com/6mFCTr5XPq
— Press Trust of India (@PTI_News) June 15, 2024
ಇದನ್ನೂ ಓದಿ: ನಾಚಿಕೆಯ ಸಂಗತಿ; ಪಿಎಂ ಮೋದಿಯ ಪಾದ ಮುಟ್ಟಿದ್ದಕ್ಕೆ ನಿತೀಶ್ ಕುಮಾರ್ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ
2019ರ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ 23 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಈ ಬಾರಿ ಕೇವಲ 9 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಮೋದಿ ಪ್ರಚಾರ ನಡೆಸಿದ ಬಹುತೇಕ ಸ್ಥಾನಗಳಲ್ಲಿ ಎನ್‌ಡಿಎ ಗೆಲುವು ಸಾಧಿಸಲು ವಿಫಲವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗದ ಅಂಕಿಅಂಶಗಳು ತೋರಿಸಿವೆ. ಮೋದಿ ಅವರು ಮಹಾರಾಷ್ಟ್ರದ 18 ಲೋಕಸಭಾ ಕ್ಷೇತ್ರಗಳಲ್ಲಿ ಅನೇಕ ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋ ನಡೆಸಿದ್ದರು. ಈ ಪೈಕಿ 15 ಸ್ಥಾನಗಳಲ್ಲಿ ಎನ್‌ಡಿಎ ಗೆಲ್ಲಲು ವಿಫಲವಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ