Sharad Pawar: ಶರದ್ ಪವಾರ್ ರಾಜೀನಾಮೆ: ಸುಪ್ರಿಯಾ ಸುಳೆಗೆ ಕರೆ ಮಾಡಿದ ರಾಹುಲ್ ಗಾಂಧಿ, ಎಂಕೆ ಸ್ಟಾಲಿನ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್(MK Stalin) ಅವರು ಸುಪ್ರಿಯಾ ಸುಳೆಗೆ ಕರೆ ಮಾಡಿ ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ಶರದ್ ಪವಾರ್ ನೀಡಿರುವ ರಾಜೀನಾಮೆಯನ್ನು ಹಿಂಪಡೆಯಲು ಮನವೊಲಿಸುವಂತೆ ಕೇಳಿಕೊಂಡರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್(MK Stalin) ಅವರು ಸುಪ್ರಿಯಾ ಸುಳೆಗೆ ಕರೆ ಮಾಡಿ ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ಶರದ್ ಪವಾರ್ ನೀಡಿರುವ ರಾಜೀನಾಮೆಯನ್ನು ಹಿಂಪಡೆಯಲು ಮನವೊಲಿಸುವಂತೆ ಕೇಳಿಕೊಂಡರು. ಶರದ್ ಪವಾರ್ ರಾಜೀನಾಮೆ ಮರುಪರಿಶೀಲಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸುಪ್ರಿಯಾ ಸುಳೆಗೆ ಕರೆ ಮಾಡಿದ್ದಾರೆ. ಶರದ್ ಪವಾರ್ ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಂಸದೆ ಸುಪ್ರಿಯಾ ಸುಳೆಗೆ ಕರೆ ಮಾಡಿದ್ದಾರೆ. ಈ ಇಬ್ಬರೂ ನಾಯಕರು ಶರದ್ ಪವಾರ್ ಏಕೆ ರಾಜೀನಾಮೆ ನೀಡಿದರು ಎನ್ನುವ ಮಾಹಿತಿಯನ್ನು ಸುಪ್ರಿಯಾ ಸುಳೆ ಅವರಿಂದ ತಿಳಿದುಕೊಳ್ಳುವ ಪ್ರಯತ್ನ ಮಾಡಿದ್ದಾರೆ.
ಅಲ್ಲದೆ, ಪವಾರ್ ತಮ್ಮ ರಾಜೀನಾಮೆಯನ್ನು ಮರುಪರಿಶೀಲಿಸಬೇಕು ಎಂದು ಈ ನಾಯಕರು ಸುಪ್ರಿಯಾ ಸುಳೆಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪವಾರ್ ರಾಜೀನಾಮೆಗೆ ಕಾರಣವನ್ನು ಅರ್ಥಮಾಡಿಕೊಳ್ಳಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎನ್‌ಸಿಪಿ ನಾಯಕ ಪಿಸಿ ಚಾಕೊ ಅವರಿಗೆ ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಮತ್ತಷ್ಟು ಓದಿ: ಅಧ್ಯಕ್ಷ ಸ್ಥಾನ ತೊರೆಯುವುದಾಗಿ ಶರದ್ ಪವಾರ್ ನಿರ್ಧಾರ ವಿರೋಧಿಸಿ ಎನ್‌ಸಿಪಿಯ ಹಿರಿಯ ನಾಯಕ ರಾಜೀನಾಮೆ
ಶರದ್ ಪವಾರ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಹಿಂಪಡೆಯುತ್ತಾರೋ ಇಲ್ಲವೋ? ನಾಳೆ ನಿರ್ಧಾರವಾಗಲಿದೆ. ನಾಳೆ ಎನ್‌ಸಿಪಿ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪವಾರ್ ರಾಜೀನಾಮೆ ಕುರಿತು ಚರ್ಚೆ ನಡೆಯಲಿದೆ. ಶರದ್ ಪವಾರ್ ರಾಜೀನಾಮೆ ಹಿಂಪಡೆಯದಿದ್ದರೆ ಸುಪ್ರಿಯಾ ಸುಳೆ ಅವರಿಗೆ ಎನ್‌ಸಿಪಿ ಅಧ್ಯಕ್ಷ ಸ್ಥಾನ ನೀಡಲಾಗುವುದು ಎಂದು ಹೇಳಲಾಗುತ್ತಿದೆ.
ಉದ್ಧವ್ ಠಾಕ್ರೆ ಸರ್ಕಾರದಿಂದ ಬೇರ್ಪಟ್ಟ ನಂತರ ಏಕನಾಥ್ ಶಿಂದೆ ಅವರು ಪಕ್ಷದ ತಂಡದೊಂದಿಗೆ ಬಿಜೆಪಿ ಸೇರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿದ್ದರು. ಇದಾದ ಬಳಿಕ, ಈಚೆಗೆ ಎನ್‌ಸಿಪಿಯ ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರನ್ನು ತೊರೆದು ಬಿಜೆಪಿಯೊಂದಿಗೆ ಕೈಜೋಡಿಸಿ ಮುಂದಿನ ಸಿಎಂ ಆಗುತ್ತಾರೆಯೇ ಎಂಬ ಊಹಾಪೋಹದ ಸುದ್ದಿ ಹರಿದಾಡುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ