AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಶರೋನ್ ರಾಜ್ ಕೊಲೆ ಪ್ರಕರಣ; ಪ್ರೇಮಿಗೆ ವಿಷ ಹಾಕಿ ಕೊಂದ ಯುವತಿಗೆ ಗಲ್ಲು ಶಿಕ್ಷೆ

Sharon Raj Murder: ಕೇರಳದ ಶರೋನ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪ್ರೇಯಸಿಗೆ ಕೇರಳ ಕೋರ್ಟ್​ ಮರಣದಂಡನೆ ಶಿಕ್ಷೆ ವಿಧಿಸಿದೆ. 3 ವರ್ಷಗಳ ಹಿಂದೆ ಆಕೆ ತನ್ನ ಪ್ರಿಯಕರ ಶರೋನ್ ರಾಜ್‌ಗೆ ವಿಷ ಬೆರೆಸಿದ ಆಯುರ್ವೇದ ಟಾನಿಕ್‌ ಕುಡಿಸಿ ಕೊಲೆ ಮಾಡಿದ್ದಳು. ಈ ಕೊಲೆ ಪ್ರಕರಣ ಕೇರಳದಲ್ಲಿ ಸಂಚಲನ ಉಂಟುಮಾಡಿತ್ತು. ಇದೀಗ ಗಲ್ಲು ಶಿಕ್ಷೆಗೆ ಒಳಗಾಗಿರುವ ಗ್ರೀಷ್ಮಾ ಈ ಶಿಕ್ಷೆಗೆ ಒಳಗಾದ ಅತಿ ಕಿರಿಯ ಯುವತಿಯಾಗಿದ್ದಾಳೆ.

ಕೇರಳದ ಶರೋನ್ ರಾಜ್ ಕೊಲೆ ಪ್ರಕರಣ; ಪ್ರೇಮಿಗೆ ವಿಷ ಹಾಕಿ ಕೊಂದ ಯುವತಿಗೆ ಗಲ್ಲು ಶಿಕ್ಷೆ
Sharon Raj Murder Case
ಸುಷ್ಮಾ ಚಕ್ರೆ
|

Updated on:Jan 20, 2025 | 5:14 PM

Share

ತಿರುವನಂತಪುರಂ: ಕೇರಳದ 23 ವರ್ಷದ ಶರೋನ್ ರಾಜ್ ಕೊಲೆಗೆ ಸಂಬಂಧಿಸಿದಂತೆ ನೆಯ್ಯಟ್ಟಿಂಕರ ಸೆಷನ್ಸ್ ನ್ಯಾಯಾಲಯವು ಆತನ ಪ್ರೇಯಸಿ ಗ್ರೀಷ್ಮಾಗೆ ಗಲ್ಲು ಶಿಕ್ಷೆ ವಿಧಿಸಿದೆ. ತನ್ನ ವಯಸ್ಸಿನ ಕಾರಣ ಮತ್ತು ತನ್ನ ವಿರುದ್ಧ ಯಾವುದೇ ಕ್ರಿಮಿನಲ್ ದಾಖಲೆಯಿಲ್ಲ ಎಂಬ ಆಕೆಯ ಹೇಳಿಕೆಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಕೊಲೆಯ ಪ್ರಕರಣದಲ್ಲಿ ಅಪರಾಧಿಯ ವಯಸ್ಸು ಮತ್ತು ಇತರ ಸಂದರ್ಭಗಳನ್ನು ಪರಿಗಣಿಸುವ ಅಗತ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಸೆಷನ್ಸ್ ನ್ಯಾಯಾಲಯವು ಈ ಪ್ರಕರಣದ ಮೂರನೇ ಆರೋಪಿಯಾಗಿರುವ ಆಕೆಯ ಚಿಕ್ಕಪ್ಪ ನಿರ್ಮಲಕುಮಾರನ್ ನಾಯರ್‌ಗೆ 3 ವರ್ಷಗಳ ಜೈಲು ಶಿಕ್ಷೆಯನ್ನು ಕೂಡ ವಿಧಿಸಿದೆ.

24 ವರ್ಷದ ಅಪರಾಧಿ ಗ್ರೀಷ್ಮಾ ಮರಣದಂಡನೆ ಶಿಕ್ಷೆ ಅನುಭವಿಸಿದ ಭಾರತದ ಅತ್ಯಂತ ಕಿರಿಯ ಯುವತಿಯಾಗಿದ್ದಾಳೆ. ತನ್ನ ಶೈಕ್ಷಣಿಕ ಸಾಧನೆಗಳು, ಹಿಂದೆ ಯಾವುದೇ ಅಪರಾಧ ಮಾಡಿಲ್ಲ ಮತ್ತು ತಾನು ತನ್ನ ಹೆತ್ತವರ ಏಕೈಕ ಮಗಳು ಎಂಬ ಅಂಶವನ್ನು ಉಲ್ಲೇಖಿಸಿ ಆಕೆ ಶಿಕ್ಷೆಯಲ್ಲಿ ಸಡಿಲಿಕೆಯನ್ನು ಕೋರಿದ್ದಳು. ಆದರೆ, 586 ಪುಟಗಳ ತೀರ್ಪಿನಲ್ಲಿ ಅಪರಾಧಿಯ ವಯಸ್ಸು ಮತ್ತು ಇತರ ಸಂದರ್ಭಗಳನ್ನು ಪರಿಗಣಿಸಿ ಈ ಬಗ್ಗೆ ಗಮನಹರಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಗ್ರೀಷ್ಮಾ ಹಂತ ಹಂತವಾಗಿ ಅಪರಾಧವನ್ನು ನಿರ್ವಹಿಸಲು ಸಂಚು ರೂಪಿಸಿದ್ದಳು. ಆಕೆಗೆ ಕ್ರಿಮಿನಲ್ ಹಿನ್ನೆಲೆ ಇಲ್ಲ ಎನ್ನಲು ಸಾಧ್ಯವಿಲ್ಲ. ಏಕೆಂದರೆ ಆಕೆ ಈ ಮೊದಲು ಕೂಡ ಯುವಕನನ್ನು ಕೊಲೆ ಮಾಡಲು ಪ್ರಯತ್ನಿಸಿದ್ದಳು. ತನಿಖೆಯನ್ನು ಬೇರೆಡೆಗೆ ತಿರುಗಿಸಲು ಬಂಧನದ ನಂತರವೂ ಆತ್ಮಹತ್ಯೆಯ ನಾಟಕವಾಡಿದ್ದಳು ಎಂದು ನ್ಯಾಯಾಲಯವು ಹೇಳಿದೆ. ಪ್ರಾಸಿಕ್ಯೂಟರ್ ಪ್ರಕಾರ, ಆ ಯುವತಿಯ ಕೃತ್ಯಗಳು ಸಮಾಜಕ್ಕೆ ಹಾನಿಕಾರಕ ಸಂದೇಶವನ್ನು ರವಾನಿಸಿದ್ದವು ಮತ್ತು ಪ್ರೀತಿಯ ಪಾವಿತ್ರ್ಯವನ್ನು ಹಾಳು ಮಾಡಿದೆ ಎಂದು ನ್ಯಾಯಾಲಯ ತೀರ್ಪಿನಲ್ಲಿ ಹೇಳಿದೆ.

ಇದನ್ನೂ ಓದಿ: ಬ್ರೇಕ್ ಅಪ್ ಮಾಡಲು ನಿರಾಕರಿಸಿದ್ದಕ್ಕೆ ಪ್ರೀತಿಸಿದ ಹುಡುಗನಿಗೆ ವಿಷ ನೀಡಿದ ಪ್ರೇಯಸಿ

ತನಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂಬ ಗ್ರೀಷ್ಮಾ ಅವರ ಹೇಳಿಕೆಯನ್ನು ನ್ಯಾಯಾಲಯ ತಿರಸ್ಕರಿಸಿತು. ಆಕೆ ಹಣ್ಣಿನ ಜ್ಯೂಸ್​ನಲ್ಲಿ ಮಾತ್ರೆಗಳನ್ನು ಬೆರೆಸಿ ಶರೋನ್‌ಗೆ ವಿಷ ನೀಡಲು ಪ್ರಯತ್ನಿಸಿದ್ದಳು.

ಶರೋನ್ ರಾಜ್ ಕೊಲೆ ಪ್ರಕರಣ:

2022ರ ಅಕ್ಟೋಬರ್ 25ರಂದು 23 ವರ್ಷದ ಶರೋನ್ ರಾಜ್ ವಿಷಪೂರಿತ ಜ್ಯೂಸ್ ಸೇವಿಸಿದ ನಂತರ ಅನಾರೋಗ್ಯಕ್ಕೀಡಾಗಿದ್ದರು. ಇದಾದ 11 ದಿನಗಳ ನಂತರ, ಅವರು ಆಸ್ಪತ್ರೆಯಲ್ಲಿ ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದರು. ನಾಗರಕೋಯಿಲ್‌ನ ಸೇನಾ ಸಿಬ್ಬಂದಿಯೊಂದಿಗೆ 22 ವರ್ಷದ ಗ್ರೀಷ್ಮಾಳ ವಿವಾಹವನ್ನು ನಿಶ್ಚಯಿಸಲಾಗಿತ್ತು. ಇದರಿಂದ ಆಕೆ ತನ್ನ ಪ್ರೇಮಿಯಾಗಿದ್ದ 23 ವರ್ಷದ ಶರೋನ್ ಜೊತೆ ಬ್ರೇಕಪ್ ಮಾಡಿಕೊಳ್ಳಲು ನಿರ್ಧರಿಸಿದ್ದಳು. ಆತನನ್ನು ತನ್ನ ಜೀವನದಿಂದ ದೂರವಿಡಲು ಪ್ರಯತ್ನಿಸಿದ್ದಳು. ಇದಕ್ಕೆ ಶರೋನ್ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡ ಗ್ರೀಷ್ಮಾ ಆತನ ಕೊಲೆಗೆ ಸಂಚು ರೂಪಿಸಿದ್ದಳು ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ತಿಳಿಸಿದೆ.

ಶರೋನ್ ಜೊತೆ ಲೈಂಗಿಕ ಸಂಬಂಧ ಹೊಂದಲು ಬಯಸುವುದಾಗಿ ಹೇಳಿ ಆತನನ್ನು ಮನೆಗೆ ಕರೆಸಿಕೊಂಡಿದ್ದ ಗ್ರೀಷ್ಮಾ ಆತನಿಗೆ ವಿಷ ಬೆರೆಸಿದ ಜ್ಯೂಸ್​ ನೀಡಿದ್ದಳು. ಅದನ್ನು ಕುಡಿದ ನಂತರ ಆತನ ಆರೋಗ್ಯ ಹದಗೆಟ್ಟಿತ್ತು. ಆಯುರ್ವೇದಿಕ್ ಕೀಟನಾಶಕ ಬೆರೆಸಿದ ಜ್ಯೂಸ್​ ನೀಡಿದ್ದ ಆಕೆ ತನ್ನ ಕೃತ್ಯ ಯಾರಿಗೂ ಗೊತ್ತಾಗುವುದಿಲ್ಲ ಎಂದು ಭಾವಿಸಿದ್ದಳು. 1 ಹನಿ ನೀರು ಕೂಡ ಕುಡಿಯಲಾಗದೆ ಶರೋನ್ 11 ದಿನಗಳ ಕಾಲ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಡಿದ್ದರು. ಆದರೆ, ಬಹುಅಂಗಾಂಗ ವೈಫಲ್ಯದಿಂದ ಅವರು ಮೃತಪಟ್ಟಿದ್ದರು.

ಇದನ್ನೂ ಓದಿ: ಕೊಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ; ಸಂಜಯ್ ರಾಯ್ ಅಪರಾಧಿ ಎಂದು ಸಾಬೀತು

ಗ್ರೀಷ್ಮಾ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಸಾಹಿತ್ಯ ಅಧ್ಯಯನ ಮಾಡಿದ್ದಾಳೆ. ಕೇರಳದ ತಿರುವನಂತಪುರಂ ಜಿಲ್ಲೆಯ ಪರಸ್ಸಲ ಮೂಲದ ಶರೋನ್ ರಾಜ್ ಅದೇ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ರೇಡಿಯಾಲಜಿ ವಿದ್ಯಾರ್ಥಿನಿಯಾಗಿದ್ದ. ಇಬ್ಬರೂ ಒಂದು ವರ್ಷಕ್ಕೂ ಹೆಚ್ಚು ಕಾಲ ನಿಕಟ ಸಂಬಂಧ ಹೊಂದಿದ್ದರು. ಗ್ರೀಷ್ಮಾ ಅವರ ಕುಟುಂಬವು ಕೇರಳದ ಇನ್ನೊಬ್ಬ ವ್ಯಕ್ತಿಯೊಂದಿಗೆ ಆಕೆಯ ವಿವಾಹವನ್ನು ನಿಗದಿಪಡಿಸಿದ್ದರಿಂದ ಶರೋನ್ ಜೊತೆಗಿನ ಸಂಬಂಧ ಹದಗೆಟ್ಟಿತ್ತು. ನಂತರ, ಗ್ರೀಷ್ಮಾ ತನ್ನ ಚಿಕ್ಕಪ್ಪ, ಮೂರನೇ ಆರೋಪಿ ನಿರ್ಮಲಕುಮಾರನ್ ನಾಯರ್ ಮತ್ತು ತನ್ನ ತಾಯಿಯೊಂದಿಗೆ ಶರೋನ್ ಅವರನ್ನು ಕೊಲ್ಲಲು ಪ್ಲಾನ್ ರೂಪಿಸಲು ಸಂಚು ರೂಪಿಸಿದ್ದಳು.

ಇಂದಿನ ತೀರ್ಪಿಗೆ ಪ್ರತಿಕ್ರಿಯಿಸಿದ ಶರೋನ್​ನ ತಾಯಿ ಪ್ರಿಯಾ, ಇಂತಹ ಅನುಕರಣೀಯ ಆದೇಶವನ್ನು ನೀಡಿದ್ದಕ್ಕಾಗಿ ನ್ಯಾಯಾಲಯಕ್ಕೆ ಕೃತಜ್ಞರಾಗಿರುವುದಾಗಿ ವರದಿಗಾರರಿಗೆ ತಿಳಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:08 pm, Mon, 20 January 25

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್