ನಿಜವಾದ ಭಾರತೀಯ ಎಂದೂ ಈ ರೀತಿ ಮಾತನಾಡೋದಿಲ್ಲ: ಸೇನೆ ಬಗ್ಗೆ ರಾಹುಲ್ ಹೇಳಿಕೆಗೆ ಸುಪ್ರೀಂ ಛೀಮಾರಿ
ನಿಜವಾದ ಭಾರತನೀಯನಾದವನು ಈ ರೀತಿ ಮಾತನಾಡುವುದಿಲ್ಲ ಎಂದು ಭಾರತೀಯ ಸೇನೆ ಬಗ್ಗೆ ಸಂಸದ, ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ನೀಡಿರುವ ಹೇಳಿಕೆಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ವಿರುದ್ಧ ಮಾಡಿದ ಹೇಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ನವದೆಹಲಿ, ಆಗಸ್ಟ್ 04: ನಿಜವಾದ ಭಾರತನೀಯನಾದವನು ಈ ರೀತಿ ಮಾತನಾಡುವುದಿಲ್ಲ ಎಂದು ಭಾರತೀಯ ಸೇನೆ ಬಗ್ಗೆ ಸಂಸದ, ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ನೀಡಿರುವ ಹೇಳಿಕೆಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ವಿರುದ್ಧ ಮಾಡಿದ ಹೇಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಸೋಮವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ರಾಹುಲ್ ಗಾಂಧಿಯನ್ನು ಖಂಡಿಸಿ, ಚೀನಾ 2000 ಕಿಲೋಮೀಟರ್‌ಗಳಷ್ಟು ಭಾರತದ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ನಿಮಗೆ ಹೇಗೆ ಗೊತ್ತು? ನೀವು ನಿಜವಾದ ಭಾರತೀಯರಾಗಿದ್ದರೆ, ನೀವು ಹೀಗೆ ಹೇಳುತ್ತಿರಲಿಲ್ಲ ಎಂದು ಹೇಳಿದೆ.
ವಿಚಾರಣೆಯ ಸಮಯದಲ್ಲಿ, ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರ ಪೀಠವು ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿತು. ರಾಹುಲ್ ಗಾಂಧಿ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ವಿರೋಧ ಪಕ್ಷದ ನಾಯಕರೊಬ್ಬರು ಸಮಸ್ಯೆಗಳನ್ನು ಎತ್ತಲು ಸಾಧ್ಯವಾಗದಿದ್ದರೆ ಅದು ದುರದೃಷ್ಟಕರ ಪರಿಸ್ಥಿತಿ ಎಂದು ಆರಂಭದಲ್ಲಿ ವಾದಿಸಿದರು.
ಮತ್ತಷ್ಟು ಓದಿ: ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಹೇಳಿಕೆ; ರಾಹುಲ್ ಗಾಂಧಿಗೆ ಜಾಮೀನು
ಇದಕ್ಕೆ ನ್ಯಾಯಮೂರ್ತಿ ದತ್ತಾ ಪ್ರತಿಕ್ರಿಯಿಸಿ, ನೀವು ವಿರೋಧ ಪಕ್ಷದ ನಾಯಕರು, ಸಂಸತ್ತಿನಲ್ಲಿ ಏನಾದರೂ ಹೇಳಿ, ನೀವು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಏಕೆ ಹೇಳುತ್ತೀರಿ ಎಂದು ಪ್ರಶ್ನಿಸಿದ್ದಾರೆ.
ಡಿಸೆಂಬರ್ 2022 ರ ಭಾರತ-ಚೀನಾ ಘರ್ಷಣೆಯ ಕುರಿತು ಅವರ ಹೇಳಿಕೆಗಳು ಭಾರತೀಯ ಸೇನೆಯ ಮಾನಹಾನಿ ಮತ್ತು ಸ್ಥೈರ್ಯ ಕುಗ್ಗಿಸಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯು ಭಾರತೀಯ ಸೈನಿಕರನ್ನು ಥಳಿಸುತ್ತಿದೆ ಮತ್ತು ಮಾಧ್ಯಮಗಳು ಅದನ್ನು ಪ್ರಶ್ನಿಸುವುದಿಲ್ಲ ಎಂದು ಅವರು ಹೇಳಿದ್ದರು.
ಜನರು ಭಾರತ್ ಜೋಡೋ ಯಾತ್ರೆ ಬಗ್ಗೆ ಕೇಳುತ್ತಾರೆ, ಆದರೆ ಚೀನಾ 2,000 ಚದರ ಕಿಲೋಮೀಟರ್ ಭಾರತೀಯ ಭೂಮಿಯನ್ನು ವಶಪಡಿಸಿಕೊಂಡು, 20 ಭಾರತೀಯ ಸೈನಿಕರನ್ನು ಕೊಂದು, ಅರುಣಾಚಲ ಪ್ರದೇಶದಲ್ಲಿ ನಮ್ಮ ಸೈನಿಕರನ್ನು ಥಳಿಸಿರುವುದರ ಬಗ್ಗೆ ಒಂದೇ ಒಂದು ಪ್ರಶ್ನೆಯನ್ನು ಕೇಳುವುದಿಲ್ಲ ಎಂದು ರಾಹುಲ್ ಹೇಳಿದ್ದರು.
ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ರಾಹುಲ್ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಮೇ 29 ರಂದು ವಜಾಗೊಳಿಸಿತು.
ಪ್ರಕರಣವನ್ನು ದುರುದ್ದೇಶಪೂರಿತ ರೀತಿಯಲ್ಲಿ ದಾಖಲಿಸಲಾಗಿದೆ ಎಂದು ಗಾಂಧಿ ವಾದಿಸಿದ್ದರು. ರಾಹುಲ್ ಗಾಂಧಿಯವರ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆ. ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿಗೆ ರಿಲೀಫ್ ನೀಡಿದೆ ಮತ್ತು ಕೆಳ ನ್ಯಾಯಾಲಯದಲ್ಲಿ ಮಾನನಷ್ಟ ಪ್ರಕರಣದ ವಿಚಾರಣೆಗೆ ತಡೆ ನೀಡಿದೆ ಮತ್ತು 3 ವಾರಗಳ ನಂತರ ವಿಚಾರಣೆಗೆ ಸಮಯವನ್ನು ನಿಗದಿಪಡಿಸಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:21 pm, Mon, 4 August 25




