AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೀಯ ಚುನಾವಣೆ: ಕೊನೇ ಕ್ಷಣದಲ್ಲಿ ಮೇಘಾಲಯ ಭೇಟಿ ರದ್ದು ಮಾಡಿದ ಶಶಿ ತರೂರ್

ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೀಯ ಚುನಾವಣೆ ಪ್ರಚಾರಕ್ಕೆ ಮೇಘಾಲಯಕ್ಕೆ ತೆರಳಬೇಕಿದ್ದ ಶಶಿ ತರೂರ್ ಕೊನೇ ಕ್ಷಣದಲ್ಲಿ ತಮ್ಮ ಭೇಟಿಯನ್ನು ರದ್ದು ಮಾಡಿದ್ದಾರೆ.

ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೀಯ ಚುನಾವಣೆ: ಕೊನೇ ಕ್ಷಣದಲ್ಲಿ ಮೇಘಾಲಯ ಭೇಟಿ ರದ್ದು ಮಾಡಿದ ಶಶಿ ತರೂರ್
ಶಶಿ ತರೂರ್
TV9 Web
| Edited By: |

Updated on:Oct 15, 2022 | 7:24 AM

Share

ಶಿಲ್ಲಾಂಗ್: ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿಗಳಲ್ಲಿ ಒಬ್ಬರಾದ ಶಶಿ ತರೂರ್‌ (Shashi Tharoor) ಅವರು ತಮ್ಮ ಮೇಘಾಲಯ ಪ್ರವಾಸವನ್ನು ರದ್ದುಗೊಳಸಿದ್ದಾರೆ ಎಂದು ಕಾಂಗ್ರೆಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೀಯ ಚುನಾವಣೆ ಪ್ರಚಾರಕ್ಕೆ ಮೇಘಾಲಯಕ್ಕೆ ತೆರಳಬೇಕಿದ್ದ ಶಶಿ ತರೂರ್ ಕೊನೇ ಕ್ಷಣದಲ್ಲಿ ತಮ್ಮ ಭೇಟಿಯನ್ನು ರದ್ದು ಮಾಡಿದ್ದಾರೆ.

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೀಯ ಅಭ್ಯರ್ಥಿ, ಸಂಸದ ಶಶಿ ತರೂರ್ ಅವರು ತಾವು ಪ್ರವಾಸ ಕೈಗೊಳ್ಳಬೇಕಿದ್ದ ವಿಮಾನದ ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಶಿಲ್ಲಾಂಗ್‌ ಭೇಟಿಯನ್ನು ರದ್ದು ಮಾಡಿದ್ದಾರೆ ಎಂದು ಮೇಘಾಲಯ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂಜಯ್ ದಾಸ್ ವಾಟ್ಸಾಪ್ ಗ್ರೂಪ್​ಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: Asia Cup 2022: ಭಾರತ- ಶ್ರೀಲಂಕಾ ನಡುವೆ ಏಷ್ಯಾಕಪ್ ಫೈನಲ್; ಪಂದ್ಯ ಆರಂಭ ಎಷ್ಟು ಗಂಟೆಗೆ ಗೊತ್ತಾ?

ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕಣಕ್ಕಿಳಿದ ತರೂರ್ ಅವರು ಮಧ್ಯಾಹ್ನ 1: 30ಕ್ಕೆ ಉಮ್ರೋಯ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಶಿಲ್ಲಾಂಗ್‌ನ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಬೇಕಿತ್ತು. ಆದ್ರೆ ಅವರು ಪ್ರಯಾಣಿಸಬೇಕಿದ್ದ ವಿಮಾನದ ತಾಂತ್ರಿಕ ಸಮಸ್ಯೆಯಿಂದಾಗಿ ಭೇಟಿ ರದ್ದುಗೊಂಡಿದೆ.

ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ. ಈ ಹಿಂದೆ ಶಶಿ ತರೂರ್, ಕಾಂಗ್ರೆಸ್ ಪಕ್ಷದಲ್ಲಿ ನನ್ನ ಬಗ್ಗೆ ತಾರತಮ್ಯವಿದ್ದು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೆಲವರು ಬಹಿರಂಗ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ಕುಟುಂಬ ರಾಜಕೀಯ ಒಪ್ಪುತ್ತಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:24 am, Sat, 15 October 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ